ಬ್ರೇಕಿಂಗ್ ನ್ಯೂಸ್
28-02-22 08:02 pm Mangalore Correspondent ಕರಾವಳಿ
ಮಂಗಳೂರು, ಫೆ.28: ನಾಪತ್ತೆಯಾಗಿದ್ದ 16 ವರ್ಷದ ಹುಡುಗನ ಶವ ಹೊಯ್ಗೆಬಜಾರ್ ಬಳಿಯ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಹುಡುಗನ ಕೊಲೆ ಆಗಿದೆಯೇ, ಆತ್ಮಹತ್ಯೆ ಮಾಡಿಕೊಂಡಿದ್ದಾನೆಯೇ ಅಥವಾ ನೀರಿಗೆ ಸ್ನಾನಕ್ಕೆ ಇಳಿದವನು ಸಾವು ಕಂಡಿದ್ದಾನೆಯೇ ಎಂಬ ಬಗ್ಗೆ ಸಂಶಯ ವ್ಯಕ್ತವಾಗಿದೆ.
ಮಹಾಕಾಳಿ ಪಡ್ಪುವಿನಲ್ಲಿ ವಾಸವಿರುವ ಆಶಾ ಮತ್ತು ಚೆನ್ನಪ್ಪ ದಂಪತಿಯ ಪುತ್ರ ದೃಶ್ಯಂತ್ (16) ಮೃತ ಹುಡುಗ. ಪಾಂಡೇಶ್ವರದ ರೊಸಾರಿಯೋ ಸ್ಕೂಲ್ ನಲ್ಲಿ 9 ನೇ ತರಗತಿ ಕಲಿಯುತ್ತಿದ್ದ ದೃಶ್ಯಂತ್, ಭಾನುವಾರ ಶಾಲೆಗೆ ರಜೆ ಇದ್ದುದರಿಂದ ಮನೆ ಬಳಿಯ ಮೈದಾನದಲ್ಲಿ ಆಟವಾಡಲು ಹೋಗಿದ್ದ. ಗೆಳೆಯರ ಜೊತೆ ಕ್ರಿಕೆಟ್ ಆಡುತ್ತಿದ್ದ ಹುಡುಗ ಆನಂತರ ಮನೆಗೆ ಬಂದಿರಲಿಲ್ಲ.
ಈ ಬಗ್ಗೆ ಜೊತೆಗಿದ್ದ ಗೆಳೆಯರಲ್ಲಿ ಹೆತ್ತವರು ವಿಚಾರಿಸಿದ್ದು ತಮಗೇನೂ ಗೊತ್ತಿಲ್ಲ ಎಂದಿದ್ದರು. ಇಂದು ಬೆಳಗ್ಗೆ ತಾಯಿ ಆಶಾ ಪಾಂಡೇಶ್ವರ ಠಾಣೆಯಲ್ಲಿ ನಾಪತ್ತೆ ದೂರು ನೀಡಿದ್ದರು. ಸಂಜೆ ವೇಳೆಗೆ ಅದೇ ಹುಡುಗನ ಶವ ಹೊಯ್ಗೆ ಬಜಾರ್ ಬಳಿ ನದಿ ತೀರದಲ್ಲಿ ಪತ್ತೆಯಾಗಿದೆ.
ಆಡಲು ಹೋಗಿದ್ದ ಹುಡುಗ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಕಡಿಮೆ. ಅಲ್ಲದೆ, ಪ್ಯಾಂಟ್ ಹಾಕ್ಕೊಂಡು ಹೋಗಿದ್ದವನು ಚಡ್ಡಿಯಲ್ಲಿ ಪತ್ತೆಯಾಗಿದ್ದಾನೆ. ಹೀಗಾಗಿ ಸ್ನಾನಕ್ಕಿಳಿದು ಮೃತಪಟ್ಟಿದ್ದಾನೆಯೇ, ಬೇರೆ ಏನಾದರೂ ಕೈವಾಡ ಇದೆಯೇ ಎನ್ನುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಪಾಂಡೇಶ್ವರ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.
Mangalore 16 year old boy body found in Netravathi river. The deceased has been identified as Dhrushyanth. He was a 9th STD student and was said to be missing since Sunday after he had been to play cricket with his friends.
06-09-25 08:28 pm
HK News Desk
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
Sonia Gandhi, Dharmasthala: Who Killed the Wo...
05-09-25 11:15 pm
ಭೋವಿ ಅಭಿವೃದ್ಧಿ ನಿಗಮದಲ್ಲಿ ಕಮಿಷನ್ ವಸೂಲಿ ; ಅಧ್ಯಕ...
05-09-25 07:55 pm
ಡಿಸಿಎಂ ಡಿಕೆಶಿ ಬೆಂಬಲಿಗರ ಹತ್ತಾರು ಕೇಸು ಸೇರಿದಂತೆ...
05-09-25 05:40 pm
06-09-25 10:34 am
HK News Desk
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
06-09-25 10:59 pm
Mangalore Correspondent
Mangalore, Dharmasthala, Vittal Gowda, Skull:...
06-09-25 10:15 pm
ಗೋಮಾಂಸ ಭಕ್ಷಕರಿಗೆ ರಾಜ್ಯ ಸರ್ಕಾರ ಶಾದಿ ಭಾಗ್ಯ ರೀತಿ...
06-09-25 05:56 pm
Mla Vedavyas Kamath, Mangalore: ಮಳೆಗೆ ಹದಗೆಟ್ಟ...
06-09-25 04:46 pm
Ullal News, Warrant, Video, Mangalore: ಮೊದಲ ಪ...
05-09-25 08:12 pm
06-09-25 08:32 pm
Bangalore Correspondent
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm
ಮುಂಬೈಗೆ 14 ಲಷ್ಕರ್ ಉಗ್ರರ ಎಂಟ್ರಿ ಬೆದರಿಕೆ ! 400...
06-09-25 10:37 am