ಭಾರೀ ಮಳೆ ಹಿನ್ನೆಲೆ ; ಮಂಗಳೂರು ವಿವಿಯ ಸೋಮವಾರದ ಪರೀಕ್ಷೆ ಮುಂದೂಡಿಕೆ 

20-09-20 04:12 pm       Mangaluru Correspondent   ಕರಾವಳಿ

ಭಾರೀ ಮಳೆಯಿಂದಾಗಿ ಸೋಮವಾರ (ಸೆ.21)  ನಡೆಯಬೇಕಿದ್ದ ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಪದವಿ ಮತ್ತು ಸ್ನಾತಕೋತ್ತರ ಪರೀಕ್ಷೆಗಳನ್ನು ಮುಂದೂಡಲಾಗಿದೆ

ಮಂಗಳೂರು, ಸೆ. 20: ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಸೋಮವಾರ (ಸೆ.21)  ನಡೆಯಬೇಕಿದ್ದ ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಪದವಿ ಮತ್ತು ಸ್ನಾತಕೋತ್ತರ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಮಂಗಳೂರು ವಿವಿ ಪರೀಕ್ಷಾಂಗ ಕುಲಸಚಿವ ಡಾ.ಪಿ.ಎಲ್. ಧರ್ಮ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ದ.ಕ. ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು ಪ್ರವಾಹ ಪರಿಸ್ಥಿತಿ ತಲೆದೋರಿದೆ. ಗಾಳಿ ಮಳೆಯ ಕಾರಣದಿಂದ ಈ ಮೂರು ಜಿಲ್ಲೆಗಳಲ್ಲಿ ಸೋಮವಾರ ನಡೆಯಬೇಕಿದ್ದ ಪರೀಕ್ಷೆಯನ್ನು ಮುಂದೂಡಲಾಗಿದೆ. ಮಂಗಳವಾರ ನಡೆಯಲಿರುವ ಪರೀಕ್ಷೆಯ ಬಗ್ಗೆ ಸೋಮವಾರದ ಪರಿಸ್ಥಿತಿ ಅವಲೋಕಿಸಿ ನಿರ್ಧರಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಮಳೆಯಿಂದಾಗಿ ಉಭಯ ಜಿಲ್ಲೆಗಳ ಹಲವೆಡೆ ರಸ್ತೆ ಸಂಚಾರ ಬಂದ್ ಆಗಿದ್ದು, ಮನೆಗೆ ನೀರು ನುಗ್ಗಿ ತೊಂದರೆಯಾಗಿದೆ. ಇದರಿಂದ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುವುದು ಅಸಾಧ್ಯ ಆಗಿರುವ ಹಿನ್ನೆಲೆಯಲ್ಲಿ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಮುಂದೂಡಲ್ಪಟ್ಟ ಪರೀಕ್ಷೆಯ ಮುಂದಿನ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.

Join our WhatsApp group for latest news updates