ಉಡುಪಿ ; ರಕ್ಷಣಾ ಕಾರ್ಯಾಚರಣೆಗೆ ಹೆಲಿಕಾಪ್ಟರ್ ಬಳಕೆಗೆ ಗೃಹ ಸಚಿವರ ಸೂಚನೆ 

20-09-20 04:37 pm       Udupi Reporter   ಕರಾವಳಿ

ಉಡುಪಿಯಲ್ಲಿ ರಕ್ಷಣಾ ಕಾರ್ಯಾಚರಣೆಗೆ ರಕ್ಷಣಾ ಇಲಾಖೆಯ ಹೆಲಿಕಾಪ್ಟರ್‌ ಒದಗಿಸಲು ಕೇಳಿಕೊಂಡಿದ್ದೇವೆ ಎಂದು ರಾಜ್ಯ ಗೃಹ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಉಡುಪಿ, ಸೆ. 20: ಕಳೆದ ಎರಡು ದಿನಗಳಿಂದ ಉಡುಪಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಸ್ಥಿತಿ ಉಂಟಾಗಿದ್ದು, ಹಲವು ಗ್ರಾಮಗಳು ಜಲಾವೃತಗೊಂಡಿವೆ. ಹೀಗಾಗಿ ರಕ್ಷಣಾ ಕಾರ್ಯಾಚರಣೆಗೆ ರಕ್ಷಣಾ ಇಲಾಖೆಯ ಹೆಲಿಕಾಪ್ಟರ್‌ ಒದಗಿಸಲು ಕೇಳಿಕೊಂಡಿದ್ದೇವೆ ಎಂದು ರಾಜ್ಯ ಗೃಹ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಜಿಲ್ಲೆಯ ಹಲವೆಡೆ ನೆರೆಯಿಂದಾಗಿ ರಸ್ತೆ ಸಂಚಾರ ಸಂಪರ್ಕ ಕಡಿತವಾಗಿದೆ. ಪರಿಹಾರ ಕಾರ್ಯಾಚರಣೆಗೆ ರಾಜ್ಯದ ಎಸ್‌ಡಿಆರ್‌ಎಫ್ ತಂಡದ ಸುಮಾರು 250 ಸದಸ್ಯರನ್ನು ನಿನ್ನೆ ತಡರಾತ್ರಿ ಸ್ಥಳಕ್ಕೆ ಕಳುಹಿಸಲಾಗಿದೆ. ಈಗಾಗಲೇ 200ಕ್ಕೂ ಅಧಿಕ ಮಂದಿಯನ್ನು ರಕ್ಷಿಸಿ ಸ್ಥಳಾಂತರಿಸಲಾಗಿದೆ. ದಕ್ಷಿಣ ಕನ್ನಡದಲ್ಲಿ ಇದ್ದ ಎನ್‌ಡಿಆರ್‌ಎಫ್ ತಂಡವೂ ಜಿಲ್ಲೆಗೆ ಆಗಮಿಸಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.