ಬ್ರೇಕಿಂಗ್ ನ್ಯೂಸ್
02-03-22 02:24 pm Udupi Correspondent ಕರಾವಳಿ
ಉಡುಪಿ, ಮಾ.2: ಕೊಲೆಯಾದ ಹರ್ಷನ ಕುಟುಂಬಕ್ಕೆ ಟಿಕೆಟ್ ಕೊಟ್ಟರೆ ಅಭ್ಯರ್ಥಿ ನಿಲ್ಲಿಸಲ್ಲ ಎಂದು ಕಾಂಗ್ರೆಸ್ ನಾಯಕರು ಟಾಂಗ್ ನೀಡಿರುವುದಕ್ಕೆ ಗರಂ ಆಗಿರುವ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ಟಿಕೆಟ್ ಬಗ್ಗೆ ಹೇಳುವುದಕ್ಕೆ ಕಾಂಗ್ರೆಸಿಗರು ಯಾರು ಎಂದು ಪ್ರಶ್ನೆ ಮಾಡಿದ್ದಾರೆ.
ಯಾವುದೇ ಕ್ಷೇತ್ರಕ್ಕೆ ಯಾರಿಗೆ ಟಿಕೆಟ್ ಕೊಡಬೇಕು ಎಂದು ನಿರ್ಧರಿಸಲು ನಮ್ಮ ಹೈಕಮಾಂಡ್ ಇದೆ. ಅದರ ಬಗ್ಗೆ ನಮ್ಮ ಪಾರ್ಟಿ, ಹೈಕಮಾಂಡ್ ನಾಯಕರು ನಿರ್ಧಾರ ತೆಗೆದುಕೊಳ್ಳುತ್ತಾರೆ. ಕಾಂಗ್ರೆಸ್ ನವರು ನಮ್ಮ ವ್ಯವಸ್ಥೆ ಬಗ್ಗೆ ಹೇಳಬೇಕಾಗಿಲ್ಲ. ಹರ್ಷನ ಕುಟುಂಬದ ಪೂರ್ತಿ ಜವಾಬ್ದಾರಿಯನ್ನು ಪಕ್ಷ ಮತ್ತು ನಮ್ಮ ಸರಕಾರ ತೆಗೆದುಕೊಂಡಿದೆ. ಕೊಲೆ ಆರೋಪಿಗಳನ್ನು ಬಂಧಿಸಿದ್ದು ಇನ್ನೆಂದೂ ಈ ರೀತಿಯ ಕೊಲೆಗಳು ಆಗದಂತೆ ನೋಡಿಕೊಳ್ಳುವ ಕೆಲಸವನ್ನು ನಮ್ಮ ಸರಕಾರ ಮಾಡುತ್ತದೆ.

ಕಾಂಗ್ರೆಸ್ ಸರಕಾರದ ಅವಧಿಯಲ್ಲಿ 23 ಹಿಂದು ಕಾರ್ಯಕರ್ತರ ಹತ್ಯೆಗಳಾಗಿದ್ದವು. ಇವರು ಎಷ್ಟು ಮಂದಿಗೆ ಸಾಂತ್ವನ ಹೇಳಿದ್ದಾರೆ. ಎಷ್ಟು ಪರಿಹಾರ ಕೊಟ್ಟಿದ್ದಾರೆ, ಆ ಮನೆಯವರಿಗೆ ಏನು ವ್ಯವಸ್ಥೆ ಮಾಡಿದ್ದಾರೆ ಅನ್ನೋದು ರಾಜ್ಯದ ಜನರಿಗೆ ಗೊತ್ತಿದೆ. ಆಗ ಕಾಂಗ್ರೆಸಿಗರ ಹೇಳಿಕೆ ಏನಿತ್ತು ಎಂಬುದನ್ನು ನೆನಪಿಸಿಕೊಳ್ಳಬೇಕು. ಸರಣಿ ಹತ್ಯೆಗಳು ಆಗಿದ್ದರೂ ನೀವು ಮೂಲಭೂತವಾದಿ ಸಂಘಟನೆಯವರಿಗೆ ಬೆಂಬಲ ನೀಡಿದ್ದೀರಿ. ನೀವು ಅವರ ಕೇಸ್ ವಾಪಾಸು ಪಡೆಯದೇ ಇರುತ್ತಿದ್ದರೆ, ಭಯೋತ್ಪಾದಕ ಸಂಘಟನೆಗಳಿಗೆ ಬೆಂಬಲ ನೀಡದೇ ಇರುತ್ತಿದ್ದರೆ ಇವತ್ತು ಹರ್ಷನ ಕೊಲೆ ಕೃತ್ಯ ನಡೆಯುತ್ತಿರಲಿಲ್ಲ ಎಂದು ಸಚಿವ ಕೋಟ ವಾಗ್ದಾಳಿ ನಡೆಸಿದರು.
ನಮ್ಮ ಸರಕಾರ ಹರ್ಷನ ಕುಟುಂಬಕ್ಕೆ ಸಂಪೂರ್ಣ ನೆರವು ನೀಡಿದೆ. ಹರ್ಷ ಪ್ರಕರಣದಲ್ಲಿ ಏನೇನು ಮಾಡಬೇಕೋ ಅದನ್ನು ಮಾಡುತ್ತೇವೆ. ಕೊಲೆ ಕೃತ್ಯದ ಹಿಂದಿನ ಷಡ್ಯಂತ್ರವನ್ನು ಹೊರಗೆ ತರುತ್ತೇವೆ. ಯಾವತ್ತೂ ಅವರು ಕೈ ಎತ್ತದಂತೆ ಮಾಡುತ್ತೇವೆ. ಆರೋಪಿಗಳಿಗೆ ರಿಯಾಯಿತಿ ಕೊಡುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಕೋಟ ಹೇಳಿದರು.
Who are congress leaders to plead for ticket for Harsha family slams Kota poojary in Udupi.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 01:22 pm
HK News Staffer
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
06-09-26 10:28 pm
HK News Staffer
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm