ಎಜೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ಬೃಹತ್ ಉದ್ಯೋಗ ಮೇಳ, ನೂರಕ್ಕೂ ಹೆಚ್ಚು ಕಂಪನಿಗಳು ಭಾಗಿ ನಿರೀಕ್ಷೆ ; ಶಾಸಕ ಕಾಮತ್ 

02-03-22 09:43 pm       Mangalore Correspondent   ಕರಾವಳಿ

ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಜಿಲ್ಲಾಡಳಿತ ದಕ್ಷಿಣ ಕನ್ನಡ ಇವರ ಸಹಯೋಗದಲ್ಲಿ ಮಾರ್ಚ್ 3 ರ ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯ ವರೆಗೆ ಕೊಟ್ಟಾರ - ಕೂಳೂರು ಪ್ರಮುಖ ರಸ್ತೆಯಲ್ಲಿರುವ ಗೋಲ್ಡ್ ಪಿಂಚ್ ಸಿಟಿ ಮೈದಾನದ ಮುಂಭಾಗದ ಎಜೆ ಇಂಜಿನಿಯರಿಂಗ್ ಕಾಲೇಜ್ ನಲ್ಲಿ‌ "ಬೃಹತ್ ಉದ್ಯೋಗ ಮೇಳ" ಆಯೋಜಿಸಲಾಗಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ.

ಮಂಗಳೂರು, ಮಾ.2: ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಜಿಲ್ಲಾಡಳಿತ ದಕ್ಷಿಣ ಕನ್ನಡ ಇವರ ಸಹಯೋಗದಲ್ಲಿ ಮಾರ್ಚ್ 3 ರ ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯ ವರೆಗೆ ಕೊಟ್ಟಾರ - ಕೂಳೂರು ಪ್ರಮುಖ ರಸ್ತೆಯಲ್ಲಿರುವ ಗೋಲ್ಡ್ ಪಿಂಚ್ ಸಿಟಿ ಮೈದಾನದ ಮುಂಭಾಗದ ಎಜೆ ಇಂಜಿನಿಯರಿಂಗ್ ಕಾಲೇಜ್ ನಲ್ಲಿ‌ "ಬೃಹತ್ ಉದ್ಯೋಗ ಮೇಳ" ಆಯೋಜಿಸಲಾಗಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ.

ಉದ್ಯೋಗ ಮೇಳದಲ್ಲಿ‌ ಹೆಸರಾಂತ ಕಂಪನಿಗಳಾದ ಟೀಮ್ ಲೀಸ್, ಸಿನೋಪ್ ಟೆಕ್, ಹೆಚ್.ಜಿ.ಎಸ್, ಬಿ.ಓ.ಎಸ್.ಸಿ.ಹೆಚ್, ಬೈಜೂಸ್, ಟಾಟಾ ಕಮ್ಯುನಿಕೇಷನ್ಸ್, ಟೊಯೊಟಾ ಕಿರ್ಲೋಸ್ಕರ್ ಮೋಟರ್, ಎನ್.ಟಿ.ಟಿ.ಎಫ್ ಸೇರಿದಂತೆ ಮುಂತಾದ 100ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸುತ್ತಿವೆ. 

Cong responsible for water rationing: MLA Vedavyas Kamath - News Karnataka
              
ಬಿಎ, ಬಿ.ಎಸ್ಸಿ, ಬಿಕಾಂ, ಐಟಿಐ, ಡಿಪ್ಲೋಮಾ, ಬಿಇ ಅರ್ಹತೆಯನ್ನು ಹೊಂದಿರುವ ವಿದ್ಯಾರ್ಥಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು. ಆಸಕ್ತ ಅಭ್ಯರ್ಥಿಗಳು ಶೈಕ್ಷಣಿಕ ದಾಖಲೆಗಳ ಜೆರಾಕ್ಸ್ ಪ್ರತಿ, ಪಾಸ್ ಪೋರ್ಟ್ ಫೋಟೋ, ಆಧಾರ್ ಕಾರ್ಡ್ ಹಾಗೂ ಸ್ವವಿವರದ ಅರ್ಜಿಗಳೊಂದಿಗೆ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

Black fungus notifiable disease, hospitals should inform govt before  treatment: Karnataka Deputy CM Ashwathnarayan

ಓರ್ವ ಅಭ್ಯರ್ಥಿಗೆ ಗರಿಷ್ಠವೆಂದರೆ 3 ಕಂಪನಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ತಮ್ಮ ವಿದ್ಯಾರ್ಹತೆಗೆ ಸರಿಹೊಂದುವ ಮೂರು ಕಂಪನಿಗಳನ್ನು ಆಯ್ಕೆ ಮಾಡಿ ಅರ್ಜಿ ಸಲ್ಲಿಸಿ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಕಾರ್ಯಕ್ರಮಕ್ಕೆ ರಾಜ್ಯ ಉನ್ನತ ಶಿಕ್ಷಣ ಸಚಿವರು ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಅಶ್ವತ್ಥ ನಾರಾಯಣ್ ಆಗಮಿಸಲಿದ್ದಾರೆ ಎಂದು ಹೇಳಿದ್ದಾರೆ.

AJ Institute of Engineering and Technology (AJIET) Mangalore: Admission,  Fees, Courses, Placements, Cutoff, Ranking

ಹೆಚ್ಚಿನ ಸಂಖ್ಯೆಯಲ್ಲಿ ಅಭ್ಯರ್ಥಿಗಳು ಕಾರ್ಯಕ್ರಮದ ಸದಾವಕಾಶ ಪಡೆದುಕೊಳ್ಳಿ. ಮೇಳದಲ್ಲಿ ಭಾಗವಹಿಸಲು ಇಚ್ಚಿಸುವವರು www.skillconnet.kaushalkar.com ಇಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಮಂಗಳೂರು ಮಹಾನಗರ ಪಾಲಿಕೆಯಲ್ಲಿರುವ ವೇದವ್ಯಾಸ್ ಕಾಮತ್ ಅವರ ಶಾಸಕರ ಕಚೇರಿಗೆ ಭೇಟಿ ನೀಡಬಹುದು.

AJ engineering college to hold Udyoga Mela, more than hundreds of companies to participate.