ಬ್ರೇಕಿಂಗ್ ನ್ಯೂಸ್
20-09-20 05:21 pm Mangaluru Correspondent ಕರಾವಳಿ
ಪುತ್ತೂರು, ಸೆಪ್ಟಂಬರ್ 21: ಮಹಿಳೆಯೊಬ್ಬರು ಗಂಡನ ಮೇಲಿನ ಸಿಟ್ಟಿನಲ್ಲಿ ಇಬ್ಬರು ಮಕ್ಕಳಿಗೆ ಜ್ಯೂಸ್ ನಲ್ಲಿ ವಿಷ ಬೆರೆಸಿ ಕೊಟ್ಟು ತಾನೂ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಎರಡು ದಿನಗಳ ಹಿಂದೆ ಘಟನೆ ನಡೆದಿದ್ದು, ಎಂಟು ವರ್ಷದ ಹೆಣ್ಣು ಮಗು ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದೆ.
ಸೆ.16ರಂದು ಘಟನೆ ನಡೆದಿದ್ದು , ಪಡುವನ್ನೂರು ಗ್ರಾಮದ ಸಜಂಕಾಡಿ ನಿವಾಸಿ ರಘುನಾಥ ಎಂಬಾತನ ಪತ್ನಿ ದಿವ್ಯಶ್ರೀ (29) ತನ್ನ ಇಬ್ಬರು ಮಕ್ಕಳಾದ ಅಜಯ್ (10) ಮತ್ತು ಅನ್ವಿತಾ (8) ಅವರಿಗೆ ಜ್ಯೂಸ್‌ನಲ್ಲಿ ವಿಷ ಬೆರೆಸಿ ನೀಡಿ ಬಳಿಕ ತಾನೂ ಸೇವಿಸಿದ್ದಾರೆ ಎನ್ನಲಾಗಿದೆ.
ರಘುನಾಥನಿಗೆ ಅನ್ಯ ಸ್ತ್ರೀಯೊಂದಿಗೆ ಸಂಬಂಧವಿದೆ ಎಂದು ತಿಳಿದ ದಿವ್ಯಶ್ರೀ, ಲಾಕ್‌ಡೌನ್ ಬಳಿಕದ ಆರು ತಿಂಗಳಲ್ಲಿ ತನ್ನ ಮಕ್ಕಳ ಜೊತೆ ಗಂಡನ ಮನೆ ಬಿಟ್ಟು ನಿಡ್ಪಳ್ಳಿ ಗ್ರಾಮದ ಸಂಬಂಧಿಕರ ಮನೆಯಲ್ಲಿ ವಾಸ್ತವ್ಯ ಹೂಡಿದ್ದರು. ಈ ನಡುವೆ ಮಾನಸಿಕವಾಗಿ ನೊಂದಿದ್ದ ದಿವ್ಯಶ್ರೀ ಸೆ.16ರಂದು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಅಲ್ಲದೆ, ಆವತ್ತೇ ಮಂಗಳೂರಿನ ಸಂಬಂಧಿಕರ ಮನೆಗೆ ತೆರಳಿದ್ದರು ಎನ್ನಲಾಗುತ್ತಿದ್ದು, ಸೆ.18ರಂದು ಬಾಲಕಿ ಅಸ್ವಸ್ಥಗೊಂಡಿದ್ದಳು. ಬಾಲಕಿಯನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಿದ್ದು, ಸೆ.19ರಂದು ತಡರಾತ್ರಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಈ ಬಗ್ಗೆ ದಿವ್ಯಶ್ರೀ ಹಾಗು ಪತ್ನಿಗೆ ಕಿರುಕುಳ ನೀಡಿದ ಆರೋಪದಲ್ಲಿ ರಘನಾಥ ವಿರುದ್ಧ ಪುತ್ತೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm