ಬ್ರೇಕಿಂಗ್ ನ್ಯೂಸ್
15-03-22 12:30 pm Mangalore Correspondent ಕರಾವಳಿ
ಉಳ್ಳಾಲ, ಮಾ.15: ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಸಂತೋಷ್ ಶೆಟ್ಟಿ ಮಾತ್ರವಲ್ಲದೆ ಸಾವಿರಾರು ಮಂದಿ ಕಾಂಗ್ರೆಸ್ ಕಾರ್ಯಕರ್ತರು ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲಿದ್ದಾರೆಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸಂತೋಷ್ ಬೋಳಿಯಾರ್ ಹೇಳಿದ್ದಾರೆ.
ಕುತ್ತಾರಿನ ಖಾಸಗಿ ಸಭಾಂಗಣದಲ್ಲಿ ನಡೆದ ಪತ್ರಿಕಾ ಗೋಷ್ಟಿಯನ್ನುದ್ದೇಶೀಸಿ ಅವರು ಮಾತನಾಡಿದರು. ಮೊನ್ನೆಯಷ್ಟೇ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಸಂತೋಷ್ ಶೆಟ್ಟಿ ಮತ್ತು ಅವರ ಬೆಂಬಲಿಗರು ಕಾಂಗ್ರೆಸ್ ತೊರೆದು ಬಿಜೆಪಿ ಪಕ್ಷ ಸೇರಿದ್ದಾರೆ. ಇದರ ಬೆನ್ನಲ್ಲೇ ಅನೇಕ ಕಾಂಗ್ರೆಸ್ ಕಾರ್ಯಕರ್ತರು ತನಗೆ ನೇರ ಫೋನ್ ಕರೆ ಮಾಡಿ ಬಿಜೆಪಿಗೆ ಸೇರುವುದಾಗಿ ಹೇಳಿದ್ದಾರೆ. ಅಸೈಗೋಳಿಯಲ್ಲೇ ಮುಂಬರುವ ದಿವಸಗಳಲ್ಲಿ ಸಾವಿರಾರು ಕಾಂಗ್ರೆಸಿಗರು ಬಹಿರಂಗವಾಗಿ ಬಿಜೆಪಿ ಸೇರಲಿದ್ದಾರೆಂದು ಬೋಳಿಯಾರ್ ಹೇಳಿದರು.
ಕಾಂಗ್ರೆಸಿಗರು ಬಿಜೆಪಿಯತ್ತ ಮುಖ ಮಾಡಲು ಕ್ಷೇತ್ರದ ಶಾಸಕ ಯು.ಟಿ ಖಾದರ್ ಅವರ ಆಡಳಿತ ವೈಫಲ್ಯ ಮತ್ತು ತಾರತಮ್ಯ ನೀತಿಯೇ ಕಾರಣ. ಖಾದರ್ ಮಾಜಿ ಸಚಿವರಾಗಿದ್ದು ಕೂಡ ಕ್ಷೇತ್ರದ ಅಭಿವೃದ್ಧಿ ಪಡಿಸುವಲ್ಲಿ ವಿಫಲರಾಗಿದ್ದಾರೆ. ಖಾದರ್ ನಾಲ್ಕು ಬಾರಿ ಶಾಸಕ, ಎರಡು ಸಲ ಸಚಿವರಾಗಿದ್ದರೂ ಕ್ಷೇತ್ರಕ್ಕೆ ಅವರಿಂದ ಕನಿಷ್ಠ ಅಗ್ನಿಶಾಮಕ ವಾಹನ ವ್ಯವಸ್ಥೆ ಮಾಡಲಾಗಿಲ್ಲ. ಉಳ್ಳಾಲ ನಗರಸಭೆ ಆಗಿ ಮೇಲ್ದರ್ಜೆಗೇರಿದರೂ ಒಳಚರಂಡಿ ಆಗಿಲ್ಲ.
ಮುಂದಿನ ದಿನಗಳಲ್ಲಿ ಮಂಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ಕಾಂಗ್ರೆಸ್ ಪ್ರತಿಸ್ಪರ್ಧಿಯಾಗಿ ಉಳಿದಿರುವುದಿಲ್ಲ, ಬದಲಾಗಿ ಬಿಜೆಪಿ ಮತ್ತು ಎಸ್ಡಿಪಿಐ ನಡುವೆ ನೇರಸ್ಪರ್ಧೆ ಏರ್ಪಡುತ್ತದೆ ಎಂಬುದು ಇತ್ತೀಚಿನ ಕೆಲವು ಬೆಳವಣಿಗೆಗಳಿಂದ ಅರಿವಾಗುತ್ತದೆ ಎಂದರು.
ಬಿಜೆಪಿ ಮಂಗಳೂರು ಮಂಡಲಾಧ್ಯಕ್ಷ ಚಂದ್ರಹಾಸ ಪಂಡಿತ್ಹೌಸ್ ಮಾತನಾಡಿ ಇತ್ತೀಚೆಗೆ ಶಾಸಕರು ಮುಡಿಪು ಮೂಳೂರು ರಸ್ತೆ ಕಾಮಗಾರಿಯ ಬಗ್ಗೆ ಮಾಧ್ಯಮಗಳಲ್ಲಿ ಉಸ್ತುವಾರಿ ಸಚಿವರ ನಿವಾಸದ ಮುಂದೆ ಪ್ರತಿಭಟನೆ ಮಾಡುವುದಾಗಿ ಹೇಳಿದ್ದು ಕಾಮಗಾರಿ ವಿಳಂಬಕ್ಕೆ ಸರ್ಕಾರ ಕಾರಣ ಎಂಬಂತೆ ತಿಳಿಸಿದ್ದಾರೆ. ಇದು ಅವರ ವೈಫಲ್ಯ ಮುಚ್ಚಿಡುವ ಕುತಂತ್ರ ಎಂದು ಅವರು ಆರೋಪಿಸಿದರು. ಆ ಕಾಮಗಾರಿ ಶಾಸಕರು ಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಪ್ರಾರಂಭಗೊಂಡಿದ್ದು, ಇವರದೇ ಆದ ಗುತ್ತಿಗೆದಾರರು ಈ ಕಾಮಗಾರಿ ವಿಳಂಬಗೊಳ್ಳಲು ಕಾರಣವಾಗಿದ್ದಾರೆ.
ಅಧಿಕಾರಿಗಳಲ್ಲಿ ಈ ಬಗ್ಗೆ ವಿಚಾರಿಸಿದಾಗ ಸರ್ಕಾರದಿಂದ ಅಥವಾ ಇಲಾಖೆಯಿಂದ ಯಾವುದೇ ರೀತಿಯ ತೊಂದರೆಯಾಗಿಲ್ಲ, ಗುತ್ತಿಗೆದಾರರು ವಿಳಂಬ ಕಾಮಗಾರಿಗೆ ಕಾರಣ ಎಂದು ತಿಳಿಸುತ್ತಾರೆ. ಈ ಬಗ್ಗೆ ಉಸ್ತುವಾರಿ ಸಚಿವರು ಅರಿತುಕೊಂಡು ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲು ಸೂಚನೆ ನೀಡಿದ್ದಾರೆ ಎಂದರು. ಇದೇ ರೀತಿ ತೊಕ್ಕೊಟ್ಟು ಕುತ್ತಾರ್ ರಸ್ತೆ ಹಾಗೂ ಉಳ್ಳಾಲ ಯುಜಿಡಿ ಕಾಮಗಾರಿಯೂ ಶಾಸಕರ ನಿಷ್ಕ್ರಿಯತೆಯಿಂದ ವಿಳಂಬಗೊಳ್ಳುತ್ತಿದೆ ಎಂದರು. ಪತ್ರಿಕಾಗೋಷ್ಟಿಯಲ್ಲಿ ದ.ಕ. ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕಸ್ತೂರಿ ಪಂಜ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಹೇಮಂತ್ ಶೆಟ್ಟಿ ಹಾಗೂ ನವೀನ್ ಪಾದಲ್ಪಾಡಿ ಉಪಸ್ಥಿತರಿದ್ದರು.
Mangalore Thousands of Congress members will quit party and join BJP says District vice president Santosh Boliyar.
01-10-25 10:06 pm
HK News Desk
Dharmasthala Case: ಧರ್ಮಸ್ಥಳ ಪ್ರಕರಣ ; ಆದಷ್ಟು ಬ...
30-09-25 07:31 pm
Hassan Blast: ಹಾಸನದಲ್ಲಿ ಅನುಮಾನಾಸ್ಪದ ಸ್ಫೋಟ ; ನ...
30-09-25 04:00 pm
Mahesh Shetty: ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು ಆ...
30-09-25 03:58 pm
ಬಿಎಂಟಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದ ಪ್ರಬ...
30-09-25 01:08 pm
01-10-25 09:44 pm
HK News Desk
Cough Syrup Side Effects Suspected, Kidney Fa...
01-10-25 05:32 pm
ಮುಂಬೈ ಉಗ್ರ ದಾಳಿ ; 17 ವರ್ಷಗಳ ಬಳಿಕ ಪಿ. ಚಿದಂಬರಂ...
01-10-25 04:10 pm
ಫಸ್ಟ್ ನೈಟ್ ಅರ್ಜೆಂಟ್ ಮಾಡಂಗಿಲ್ಲ..! ಮದುಮಗಳ ರಾಗಕ್...
30-09-25 04:08 pm
ಪಾಕಿಸ್ತಾನದ ಕ್ವೆಟ್ಟಾದಲ್ಲಿ ಭಾರೀ ಸ್ಫೋಟ ; ಕಾರಿನಲ್...
30-09-25 04:03 pm
01-10-25 11:00 pm
Mangalore Correspondent
Jayanth, Chinnayya, Dharmasthala Case: ಚಿನ್ನಯ...
01-10-25 04:45 pm
ಮುಳಿಹಿತ್ಲು ಫ್ರೆಂಡ್ಸ್ ಸರ್ಕಲ್ ತಂಡದ ಮುಡಿಗೇರಿದ ಕು...
01-10-25 03:35 pm
ಮಂಗಳೂರು ಪೂರ್ತಿ ಝಗಮಗ ; ಕೋಟಿ ಕೋಟಿ ಮಿನಿಚರ್ ಅಳವಡಿ...
30-09-25 10:57 pm
Ullal Municipal Commissioner: ಉಳ್ಳಾಲ ನಗರಸಭೆಯಲ...
30-09-25 06:48 pm
01-10-25 02:39 pm
Mangalore Correspondent
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm
ಉಡುಪಿ ಬಸ್ ಚಾಲಕ ಸೈಫುದ್ದೀನ್ ಸ್ನೇಹಿತರಿಂದಲೇ ಕೊಲೆ...
28-09-25 04:57 pm