ಬ್ರೇಕಿಂಗ್ ನ್ಯೂಸ್
18-03-22 12:43 pm Mangalore Correspondent ಕರಾವಳಿ
ಪುತ್ತೂರು, ಮಾ.18: ಪೇರಳೆ ಹಣ್ಣು ಕೊಯ್ಯಲು ಹೋಗಿ ಮರದಿಂದ ಬಿದ್ದು ತಲೆಯ ಭಾಗಕ್ಕೆ ತೀವ್ರ ಗಾಯಗೊಂಡು ಮೂರನೇ ತರಗತಿ ವಿದ್ಯಾರ್ಥಿ ಮೃತಪಟ್ಟ ಘಟನೆ ಕಡಬ ತಾಲೂಕಿನ ದೋಳ್ಪಾಡಿ ಎಂಬಲ್ಲಿ ನಡೆದಿದೆ.
ದೋಳ್ಪಾಡಿ ನಿವಾಸಿ ದಿವಾಕರ ಗೌಡ ಎಂಬವರ ಪುತ್ರ ಉಲ್ಲಾಸ್ (9) ಮೃತ ವಿದ್ಯಾರ್ಥಿ. ದೋಳ್ಪಾಡಿ ಸರಕಾರಿ ಶಾಲೆಯಲ್ಲಿ ಮೂರನೇ ತರಗತಿ ಓದುತ್ತಿದ್ದ ಬಾಲಕ ಸಂಜೆ ಶಾಲೆಯಿಂದ ಮರಳಿದ ಬಳಿಕ ಮನೆಯ ಬಳಿ ಇತರ ಮಕ್ಕಳ ಜೊತೆಗೆ ಆಟವಾಡುತ್ತಿದ್ದರು. ಈ ಸಂದರ್ಭದಲ್ಲಿ ಪೇರಳೆ ಮರಕ್ಕೇರಿದ್ದ ಉಲ್ಲಾಸ್ ಕಾಲು ಜಾರಿ ನೆಲಕ್ಕೆ ಬಿದ್ದಿದ್ದಾನೆ. ತಲೆಯ ಹಿಂಭಾಗಕ್ಕೆ ಏಟು ಬಿದ್ದು ಮೂಗಿನಲ್ಲಿ ರಕ್ತ ಬರುತ್ತಿದ್ದುದನ್ನು ಗಮನಿಸಿ ಮನೆಯವರು ಕಡಬ ಸರಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದರು.
ವೈದ್ಯರು ಪರೀಕ್ಷಿಸಿದಾಗ, ಬಾಲಕ ಮೃತಪಟ್ಟಿದ್ದಾಗಿ ತಿಳಿಸಿದ್ದಾರೆ. ಈ ಬಗ್ಗೆ ಬಾಲಕನ ತಂದೆ ದಿವಾಕರ ಅವರು ಕಡಬ ಠಾಣೆಗೆ ಮಾಹಿತಿ ನೀಡಿದ್ದು ಮರದಿಂದ ಬಿದ್ದು ಮೃತಪಟ್ಟಿದ್ದು ಇದರಲ್ಲಿ ಬೇರೆ ಯಾವುದೇ ಸಂಶಯ ಇಲ್ಲವೆಂದು ತಿಳಿಸಿದ್ದಾರೆ.
Kadaba 9 year old boy dies after falling from tree in Mangalore. The deceased has been identified as Ullas.
01-10-25 10:06 pm
HK News Desk
Dharmasthala Case: ಧರ್ಮಸ್ಥಳ ಪ್ರಕರಣ ; ಆದಷ್ಟು ಬ...
30-09-25 07:31 pm
Hassan Blast: ಹಾಸನದಲ್ಲಿ ಅನುಮಾನಾಸ್ಪದ ಸ್ಫೋಟ ; ನ...
30-09-25 04:00 pm
Mahesh Shetty: ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು ಆ...
30-09-25 03:58 pm
ಬಿಎಂಟಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದ ಪ್ರಬ...
30-09-25 01:08 pm
01-10-25 09:44 pm
HK News Desk
Cough Syrup Side Effects Suspected, Kidney Fa...
01-10-25 05:32 pm
ಮುಂಬೈ ಉಗ್ರ ದಾಳಿ ; 17 ವರ್ಷಗಳ ಬಳಿಕ ಪಿ. ಚಿದಂಬರಂ...
01-10-25 04:10 pm
ಫಸ್ಟ್ ನೈಟ್ ಅರ್ಜೆಂಟ್ ಮಾಡಂಗಿಲ್ಲ..! ಮದುಮಗಳ ರಾಗಕ್...
30-09-25 04:08 pm
ಪಾಕಿಸ್ತಾನದ ಕ್ವೆಟ್ಟಾದಲ್ಲಿ ಭಾರೀ ಸ್ಫೋಟ ; ಕಾರಿನಲ್...
30-09-25 04:03 pm
01-10-25 11:00 pm
Mangalore Correspondent
Jayanth, Chinnayya, Dharmasthala Case: ಚಿನ್ನಯ...
01-10-25 04:45 pm
ಮುಳಿಹಿತ್ಲು ಫ್ರೆಂಡ್ಸ್ ಸರ್ಕಲ್ ತಂಡದ ಮುಡಿಗೇರಿದ ಕು...
01-10-25 03:35 pm
ಮಂಗಳೂರು ಪೂರ್ತಿ ಝಗಮಗ ; ಕೋಟಿ ಕೋಟಿ ಮಿನಿಚರ್ ಅಳವಡಿ...
30-09-25 10:57 pm
Ullal Municipal Commissioner: ಉಳ್ಳಾಲ ನಗರಸಭೆಯಲ...
30-09-25 06:48 pm
01-10-25 02:39 pm
Mangalore Correspondent
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm
ಉಡುಪಿ ಬಸ್ ಚಾಲಕ ಸೈಫುದ್ದೀನ್ ಸ್ನೇಹಿತರಿಂದಲೇ ಕೊಲೆ...
28-09-25 04:57 pm