ಬ್ರೇಕಿಂಗ್ ನ್ಯೂಸ್
26-03-22 11:01 am Mangalore Correspondent ಕರಾವಳಿ
ಉಳ್ಳಾಲ, ಮಾ.26: ಸ್ಕೂಟರ್ ಗೆ ಅಪರಿಚಿತ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಹಿಂಬದಿ ಸವಾರ ಮಹಿಳೆ ದಾರುಣ ಸಾವನ್ನಪ್ಪಿದ ಘಟನೆ ರಾ.ಹೆ. 66 ರ ಕಾಪಿಕಾಡು ಎಂಬಲ್ಲಿ ನಡೆದಿದ್ದು, ಹಿಟ್ & ರನ್ ನಡೆಸಿದ ಕಾರಿನ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ತೊಕ್ಕೊಟ್ಟು ಸಮೀಪದ ಕಾಪಿಕಾಡು ಉಮಾಮಹೇಶ್ವರಿ ದೇವಸ್ಥಾನದ ಬಳಿಯ ಪ್ರತಿಷ್ಠಿತ ಜಾನ್ ಬೇಕರಿ ಕುಟುಂಬದ ಎಮಿಲ್ಡಾ ಡಿಸೋಜ (59) ಮೃತ ಮಹಿಳೆ. ಇಂದು ಮೊಮ್ಮಗಳ ಹುಟ್ಟುಹಬ್ಬ ಆಚರಣೆ ಇದ್ದ ಕಾರಣ ಎಮಿಲ್ಡ ಅವರು ಬೆಳ್ಳಂಬೆಳಗ್ಗೆ ತೊಕ್ಕೊಟ್ಟು ಚರ್ಚ್ ಗೆ ತೆರಳಿ ವಿಶೇಷ ಪೂಜೆಯಲ್ಲಿ ಪಾಲ್ಗೊಂಡು ಹಿಂತಿರುಗಿದ್ದರು. ಅರ್ಧ ದಾರಿಯ ವರೆಗೂ ಸಂಬಂಧಿಕರ ಜತೆಗೆ ನಡೆದುಕೊಂಡೇ ಬರುತ್ತಿದ್ದ ಅವರನ್ನ ಪ್ಲೇವಿ ಡಿಸೋಜ ಎಂಬ ಪರಿಚಯಸ್ಥ ಮಹಿಳೆ ತನ್ನ ಆಕ್ಟಿವಾ ಸ್ಕೂಟರಿಗೆ ಹತ್ತಿಸಿದ್ದಾರೆ.


ಸ್ಕೂಟರ್ ಕಾಪಿಕಾಡು ರಾಜ್ ಕೇಟರರ್ಸ್ ಬಳಿ ತಲುಪುತ್ತಿದ್ದಂತೆ ಹಿಂದಿನಿಂದ ಬಂದ ಕಾರೊಂದು ಡಿಕ್ಕಿ ಹೊಡೆದಿದ್ದು ಹಿಂಬದಿ ಸವಾರೆ ಎಮಿಲ್ಡ ಅವರು ರಸ್ತೆಗೆಸೆಯಲ್ಪಟ್ಟಿದ್ದಾರೆ. ತಕ್ಷಣ ಅವರನ್ನ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ದಾರುಣ ಸಾವನ್ನಪ್ಪಿದ್ದಾರೆ. ಸ್ಕೂಟರ್ ಸವಾರೆ ಪ್ಲೇವಿ ಡಿ ಸೋಜ(47) ಅವರು ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.



ಮನೆಯಲ್ಲಿ ಮೊಮ್ಮಗುವಿನ ಹುಟ್ಟುಹಬ್ಬಕ್ಕಾಗಿ ಎಮಿಲ್ಡ ಅವರು ಇಡ್ಲಿಗಳನ್ನ ತರಿಸಿ ಊಟಕ್ಕೆ ತಯಾರಿ ನಡೆಸಿದ್ದರಂತೆ. ಮೊಮ್ಮಗಳ ಹುಟ್ಟುಹಬ್ಬದ ದಿವಸವೇ ಎಮಿಲ್ಡ ಅವರು ಇಹಲೋಕ ತ್ಯಜಿಸಿದ್ದು ಕುಟುಂಬ ವರ್ಗದವರನ್ನ ಶೋಕದಲ್ಲಿ ಮುಳುಗಿಸಿದೆ. ಮೃತ ಎಮಿಲ್ಡ ಅವರು ಪತಿ, ಪುತ್ರ, ಪುತ್ರಿ, ಮೊಮ್ಮಕ್ಕಳನ್ನ ಅಗಲಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
Mangalore hit and run accident at Ullal 59-year-old woman pillon rider killed on the spot. The deceased has been identified as Emeld Dsouza. As it was a granddaughters birthday she was on her way to the church during which an unknown car rammed their two-wheeler where Emeld was seriously hurt and died on spot.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 02:16 pm
HK News Staffer
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm