ಬ್ರೇಕಿಂಗ್ ನ್ಯೂಸ್
27-03-22 09:34 pm Mangalore Correspondent ಕರಾವಳಿ
ಮಂಗಳೂರು, ಮಾ.27: ಸಿದ್ದರಾಮಯ್ಯ ಅವರು ಎಲ್ಲ ಧರ್ಮದ ಸ್ವಾಮೀಜಿ, ಧರ್ಮಗುರುಗಳ ಬಗ್ಗೆ ಗೌರವ ಭಾವನೆ ಹೊಂದಿದ್ದಾರೆ. ಅವರು ಸ್ವಾಮೀಜಿಗಳನ್ನು ನಿಂದಿಸುವ ರೀತಿ ಮಾತನಾಡಿಲ್ಲ. ಆದರೆ ಅವರ ಹೇಳಿಕೆಯನ್ನು ತಿರುಚಿ ಬಿಜೆಪಿ ನಾಯಕರು ಜನರಿಗೆ ತಪ್ಪು ಸಂದೇಶ ನೀಡುತ್ತಿದ್ದಾರೆ. ಇದನ್ನು ಖಂಡಿಸುತ್ತೇನೆ ಎಂದು ವಿಧಾನಸಭೆ ವಿಪಕ್ಷ ಉಪ ನಾಯಕ ಯುಟಿ ಖಾದರ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಖಾದರ್, ಸಿದ್ದರಾಮಯ್ಯ ಆಡಳಿತ ಕಾಲದಲ್ಲಿ ಯಾವುದೇ ಧರ್ಮ, ಮಠ, ಸ್ವಾಮೀಜಿಗಳ ಜೊತೆ ತಪ್ಪಾಗಿ ನಡೆದುಕೊಂಡಿಲ್ಲ. ಎಲ್ಲ ಸ್ವಾಮೀಜಿಗಳ ಜೊತೆ ಹತ್ತಿರದ ನಂಟು ಇಟ್ಟುಕೊಂಡಿದ್ದರು. ಯಾರು ಕೂಡ ವಿರೋಧ ಮಾತನಾಡಿರಲಿಲ್ಲ. ಸಿದ್ದರಾಮಯ್ಯ ಸರಕಾರ ಇದ್ದಾಗ ಮೂಢನಂಬಿಕೆ ವಿರೋಧಿ ಕಾಯ್ದೆಯಿಂದ ದುರುಪಯೋಗ ಆಗುತ್ತಿದೆ ಎಂದು ಹೇಳಿ ಅದನ್ನು ತೆಗೆದು ಹಾಕಲಾಗಿತ್ತು. ಆದರೆ ಬಿಜೆಪಿ ಸರಕಾರ ಬಂದ ಬಳಿಕ ಆ ಕಾನೂನನ್ನು ಜಾರಿಗೆ ತರಲಾಗಿದೆ ಎಂದು ಹೇಳಿದರು.
ಸಿದ್ದರಾಮಯ್ಯ ಕಾಲದಲ್ಲಿ ಹಿಂದು ಅರ್ಚಕರಿಗೆ ನೀಡುತ್ತಿದ್ದ ತಸ್ತೀಕು ಭತ್ಯೆಯನ್ನೂ ಹೆಚ್ಚಿಸಲಾಗಿತ್ತು. ಹಿಂದುಗಳ ಉದ್ಘಾರ ಮಾಡುವ ಪಕ್ಷ ಎಂದು ಹೇಳುವ ಬಿಜೆಪಿ ಸರಕಾರದಲ್ಲಿ ಅರ್ಚಕರ ತಸ್ತೀಕನ್ನು ಒಂದು ಪೈಸೆಯೂ ಹೆಚ್ಚಿಸಿಲ್ಲ. ದೇಶದಲ್ಲಿ ಪೆಟ್ರೋಲ್, ಡೀಸೆಲ್. ಗ್ಯಾಸ್ ಹೀಗೆ ಜೀವನಾವಶ್ಯಕ ವಸ್ತುಗಳ ಬೆಲೆ ಹೆಚ್ಚುತ್ತಿದ್ದು ಜನ ಆಕ್ರೋಶದಲ್ಲಿದ್ದಾರೆ. ಜನರ ಗಮನ ಬೇರೆಡೆ ಸೆಳೆಯುವುದಕ್ಕಾಗಿ ಇಂತಹ ಕ್ಷುಲ್ಲಕ ವಿಚಾರಗಳನ್ನು ದೊಡ್ಡದು ಮಾಡುತ್ತಿದ್ದಾರೆ. ಜನರನ್ನು ತಪ್ಪು ದಾರಿಗೆ ಎಳೆಯುತ್ತಿದ್ದಾರೆ ಎಂದು ಖಾದರ್ ಹೇಳಿದರು.
ಹಿಜಾಬ್ ಚಿಂತೆ ಬದಿಗಿಟ್ಟು ಪರೀಕ್ಷೆ ಬರೆಯಿರಿ
ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭಗೊಳ್ಳುತ್ತಿರುವ ವಿಚಾರದಲ್ಲಿ ಕೇಳಿದ ಪ್ರಶ್ನೆಗೆ, ಲಕ್ಷಾಂತರ ವಿದ್ಯಾರ್ಥಿಗಳು ಪರೀಕ್ಷೆಗೆ ಬರೆಯಲು ಸಿದ್ಧತೆ ನಡೆಸಿದ್ದಾರೆ. ಅವರೆಲ್ಲರಿಗೂ ಯಾವುದೇ ಮಾನಸಿಕ ಕಿರುಕುಳ ಆಗದಂತೆ ನೋಡಿಕೊಂಡು ಪರೀಕ್ಷೆ ಬರೆಯಲು ಅವಕಾಶ ಒದಗಿಸುವುದು ಶಿಕ್ಷಣ ಇಲಾಖೆಯ ಕರ್ತವ್ಯ. ಸಮವಸ್ತ್ರದ ಬಗ್ಗೆ ಹೈಕೋರ್ಟ್ ನೀಡಿರುವ ಆದೇಶವನ್ನು ಎಲ್ಲರೂ ಪಾಲಿಸಬೇಕು. ಹೆಣ್ಮಕ್ಕಳಿಗೆ ಶಿಕ್ಷಣ ಮುಖ್ಯವಾಗುತ್ತದೆ. ತಮ್ಮ ಪಟ್ಟನ್ನು ಸಡಿಲಿಸಿ, ಸಮವಸ್ತ್ರದ ಬಗ್ಗೆ ಕೋರ್ಟ್ ನೀಡಿರುವ ತೀರ್ಪನ್ನು ಪಾಲಿಸಬೇಕು. ಹೆತ್ತವರು ಮತ್ತು ಧಾರ್ಮಿಕ ಮುಖಂಡರಿಗೂ ಈ ಬಗ್ಗೆ ಮನವಿ ಮಾಡುತ್ತೇನೆ. ಸರಕಾರದ ಜೊತೆ ಸಂಘರ್ಷಕ್ಕೆ ನಿಲ್ಲುವುದು ಬೇಡ. ಶಿಕ್ಷಣವೇ ನಮಗೆ ಮುಖ್ಯ. ಅದಕ್ಕಾಗಿ ಯಾವುದೇ ಚಿಂತೆ ಇಲ್ಲದೆ ಪರೀಕ್ಷೆ ಬರೆಯಿರಿ ಎಂದು ಮನವಿ ಮಾಡುವುದಾಗಿ ಖಾದರ್ ಹೇಳಿದರು.
MLA and the deputy leader of the Congress Legislature Party in the state legislative assembly U T Khader vehemently defended former chief minister Siddaramaiah on his statement on swamijis and said, " Siddaramaiah has respect for all religious heads. But, the leaders of BJP are twisting his statements and misleading the people of the state."
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 06:49 pm
HK News Desk
India Pak War: ಭಾರತ ವಾಯುಪಡೆಯಿಂದ ಭೀಕರ ಪ್ರತಿದಾಳ...
09-05-25 12:33 pm
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
09-05-25 11:07 pm
Mangalore Correspondent
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
Ullal accident, Mangalore: ರಸ್ತೆ ದಾಟುತ್ತಿದ್ದ...
08-05-25 10:54 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm