ಬ್ರೇಕಿಂಗ್ ನ್ಯೂಸ್
29-03-22 02:32 pm Udupi Correspondent ಕರಾವಳಿ
ಉಡುಪಿ, ಮಾ.29 : ಪ್ರಥಮ ಪಿಯುಸಿ ಅಂತಿಮ ಪರೀಕ್ಷೆ ಆರಂಭಗೊಂಡಿದ್ದು ಹಿಜಾಬ್ ವಿಚಾರದಲ್ಲಿ ಕೋರ್ಟ್ ಮೆಟ್ಟಿಲೇರಿದ್ದ ಇಬ್ಬರು ವಿದ್ಯಾರ್ಥಿನಿಯರು ಪರೀಕ್ಷೆಗೆ ಹಾಜರಾಗದೆ ದೂರ ಉಳಿದಿದ್ದಾರೆ.
ಉಡುಪಿ ಸರಕಾರಿ ಕಾಲೇಜಿನಲ್ಲಿ ಹಿಜಾಬ್ ಬೇಕೆಂದು ಪಟ್ಟು ಹಿಡಿದು ಕಾಲೇಜು ಆಡಳಿತ ಮತ್ತು ಸರಕಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದ ಆರು ಮಂದಿ ವಿದ್ಯಾರ್ಥಿನಿಯರ ಪೈಕಿ ಮುಸ್ಕಾನ್ ಮತ್ತು ಸಫಾ ಎಂಬ ಇಬ್ಬರು ಪರೀಕ್ಷೆ ಗೈರಾಗಿದ್ದಾರೆ.
ಹಿಜಾಬ್ ವಿಚಾರದಲ್ಲಿ ಹೈಕೋರ್ಟ್ ತೀರ್ಪು ನೀಡಿದ ಬಳಿಕ ಕಾಲೇಜಿನಿಂದ ದೂರ ಉಳಿದಿದ್ದ ವಿದ್ಯಾರ್ಥಿನಿಯರಿಗೆ ಪರೀಕ್ಷೆಗೆ ಹಾಜರಾಗುವುದೋ, ಬಿಡುವುದೋ ಎಂಬ ದುಗುಡ ಕಾಡಿತ್ತು. ಆದರೆ ಧಾರ್ಮಿಕ ಮುಖಂಡರು, ರಾಜಕೀಯ ನಾಯಕರು ವಿದ್ಯಾರ್ಥಿಗಳು ಹಿಜಾಬ್ ಕಾರಣಕ್ಕೆ ಶಿಕ್ಷಣ ವಂಚಿತರಾಗಬೇಡಿ, ಪರೀಕ್ಷೆ ಬರೆಯರಿ, ಭವಿಷ್ಯ ರೂಪಿಸಿಕೊಳ್ಳಿ ಎಂದು ಸಲಹೆ ಮಾಡಿದ್ದರು. ಹೀಗಾಗಿ ರಾಜ್ಯದ ಎಲ್ಲ ಕಡೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭಗೊಂಡ ವೇಳೆ ಹೆಚ್ಚಿನ ಕಡೆ ವಿದ್ಯಾರ್ಥಿನಿಯರು ಹಿಜಾಬ್ ತೆಗೆದಿಟ್ಟು ಪರೀಕ್ಷೆಗೆ ಹಾಜರಾಗಿದ್ದರು. ಕೆಲವು ಕಡೆ ಸೀಮಿತ ಸಂಖ್ಯೆಯಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಗೈರು ಹಾಜರಾಗಿದ್ದರು. ಆದರೆ ಈ ಬಗ್ಗೆ
ಕೋರ್ಟ್ ಮೆಟ್ಟಿಲೇರಿದ್ದ ವಿದ್ಯಾರ್ಥಿಗಳು ಏನು ಮಾಡುತ್ತಾರೆ ಎನ್ನುವ ಕುತೂಹಲ ಇತ್ತು.
ಎಸ್ಡಿಪಿಐ ಮತ್ತು ಸಿಎಫ್ ಐ ಸಂಘಟನೆಗಳ ದಾಳಕ್ಕೆ ಸಿಲುಕಿ ಕೋರ್ಟ್ ಹೋರಾಟ ಶುರು ಮಾಡಿದ್ದಾರೆ ಎಂದು ಹೇಳಲಾಗುತ್ತಿರುವ ಆರು ಮಂದಿ ವಿದ್ಯಾರ್ಥಿನಿಯರಿಂದಾಗಿ ಇಡೀ ರಾಜ್ಯದಲ್ಲಿ ಹಿಜಾಬ್ ನಿಷೇಧ ಆಗಿದೆ. ಸಮವಸ್ತ್ರ ಕಡ್ಡಾಯ ಆಗಿದೆ. ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಕಡ್ಡಾಯ ಸಮವಸ್ತ್ರ ಮಾತ್ರ ಧರಿಸಬೇಕು ಎಂದು ರಾಜ್ಯ ಸರಕಾರ ಸೂಚನೆ ನೀಡಿತ್ತು.
ಈಗ ಪ್ರಥಮ ಪಿಯುಸಿ ಪರೀಕ್ಷೆ ಆರಂಭಗೊಂಡಿದ್ದು ಉಡುಪಿ ಸರಕಾರಿ ಪದವಿಪೂರ್ವ ಮಹಿಳಾ ಕಾಲೇಜಿನ ಇಬ್ವರು ವಿದ್ಯಾರ್ಥಿಗಳು ಪರೀಕ್ಷೆಯಿಂದ ದೂರ ನಿಂತಿದ್ದಾರೆ. ಆರು ಜನ ಹಿಜಾಬ್ ಹೋರಾಟಗಾರ್ತಿಯರ ಪೈಕಿ ಇಬ್ಬರು ಪ್ರಥಮ ಪಿಯುಸಿ ಓದುತ್ತಿದ್ದು ನಾಲ್ವರು ದ್ವಿತೀಯ ಪಿಯುಸಿ ಕಲಿಯುತ್ತಿದ್ದಾರೆ. ಪ್ರಥಮ ಪಿಯುಸಿಯ ಇಬ್ಬರು ಪರೀಕ್ಷೆಯಿಂದ ದೂರವುಳಿದಿದ್ದು ತಾವು ಹೈಕೋರ್ಟ್ ಆದೇಶ ಪಾಲನೆ ಮಾಡುವುದಿಲ್ಲ ಎಂದು ಪರೋಕ್ಷ ಸೂಚನೆ ನೀಡಿದ್ದಾರೆ.
Hijab, originating from the district, was not a hijab state and was spread throughout the country. Students who have fought for the hijab are the first PUC finalists. Muskan of Udupi government pre-graduation college, Safa did not attend the examination. The first PUC final examination in Udupi has commenced today. But the hijab is our right.
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 06:49 pm
HK News Desk
India Pak War: ಭಾರತ ವಾಯುಪಡೆಯಿಂದ ಭೀಕರ ಪ್ರತಿದಾಳ...
09-05-25 12:33 pm
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
09-05-25 11:07 pm
Mangalore Correspondent
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
Ullal accident, Mangalore: ರಸ್ತೆ ದಾಟುತ್ತಿದ್ದ...
08-05-25 10:54 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm