ಬ್ರೇಕಿಂಗ್ ನ್ಯೂಸ್
30-03-22 06:25 pm Udupi Correspondent ಕರಾವಳಿ
ಉಡುಪಿ, ಮಾ.30: ಹಿಂದು ದೇವಸ್ಥಾನ, ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಬಹಿಷ್ಕಾರ ಹಾಕುತ್ತಿರುವ ಬೆಳವಣಿಗೆ ಹಿನ್ನೆಲೆಯಲ್ಲಿ ಮುಸ್ಲಿಂ ವರ್ತಕರ ಒಕ್ಕೂಟದ ಸದಸ್ಯರು ಉಡುಪಿಯಲ್ಲಿ ಪೇಜಾವರ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರನ್ನು ಭೇಟಿ ಮಾಡಿ, ಸಾಮರಸ್ಯ ನೆಲೆಸಲು ಕ್ರಮ ಕೈಗೊಳ್ಳಲು ಮನವಿ ಮಾಡಿದ್ದಾರೆ.
ಜಾತ್ರೆ ಸಂದರ್ಭದಲ್ಲಿ ಮುಸ್ಲಿಂ ವರ್ತಕರಿಗೂ ವ್ಯಾಪಾರ ಮಾಡಲು ಅವಕಾಶ ನೀಡುವಂತೆ ಮನವಿ ನೀಡಿದ್ದಾರೆ. ಈ ರೀತಿಯ ಬೆಳವಣಿಗೆಯಿಂದ ಬೀದಿಬದಿ ಜಾತ್ರೆ ವ್ಯಾಪಾರಿಗಳಿಗೆ ತೀವ್ರ ಸಮಸ್ಯೆಯಾಗಿದೆ. ಯಾರೋ ಕೆಲವರ ಹೇಳಿಕೆ, ನಿಲುವುಗಳಿಂದಾಗಿ ಇಡೀ ಸಮುದಾಯಕ್ಕೆ ತೊಂದರೆ ಉಂಟಾಗಿದೆ. ಈ ಬಗ್ಗೆ ಮಾತುಕತೆ ನಡೆಸಿ ದೇವಸ್ಥಾನಗಳಲ್ಲಿ ವ್ಯಾಪಾರಕ್ಕೆ ಅವಕಾಶ ಮಾಡಿಕೊಡಿ ಎಂದು ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗೆ ಮುಸಲ್ಮಾನ ವ್ಯಾಪಾರಿಗಳು ಮನವಿ ನೀಡಿದ್ದಾರೆ.
ಉಡುಪಿ ಜಿಲ್ಲಾ ಸೌಹಾರ್ದ ಸಮಿತಿಯ ಹೆಸರಲ್ಲಿ ಹಾಜಿ ಅಬೂಬಕ್ಕರ್ ಆತ್ರಾಡಿ ನೇತೃತ್ವದಲ್ಲಿ ಮುಸ್ಲಿಂ ವ್ಯಾಪಾರಿಗಳು ಸ್ವಾಮೀಜಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಭೇಟಿ ಬಳಿಕ ಮಾಧ್ಯಮಕ್ಕೆ ಮಾಹಿತಿ ನೀಡಿದ ಅಬುಬಕ್ಕರ್ ಹಾಜಿ, ಸಮಾಜದಲ್ಲಿ ಶಾಂತಿ ಸಹಬಾಳ್ವೆ ನೆಲೆಸಲು ಸ್ವಾಮೀಜಿಗಳನ್ನು ಭೇಟಿ ಮಾಡಿದ್ದೇವೆ. ಮುಸಲ್ಮಾನ ಸಮುದಾಯ ಕೂಡ ಶಾಂತಿಯನ್ನು ಬಯಸುತ್ತದೆ. ಒಬ್ಬರು- ಇಬ್ಬರು ಮಾಡುವ ತಪ್ಪಿಗೆ ಇಡೀ ಸಮಾಜವನ್ನು ದ್ವೇಷಿಸುವುದು ಸೂಕ್ತವಲ್ಲ. ನಾವೆಲ್ಲರೂ ಒಂದೇ ತಾಯಿಯ ಮಕ್ಕಳ ಹಾಗೆ ಸಹಬಾಳ್ವೆಯಿಂದ ಬಾಳಬೇಕು. ಹಿಂದೆ ಆಗಿರುವ ಘಟನೆಗಳನ್ನು ಮರೆತು ಸಹಬಾಳ್ವೆಯಿಂದ ಬಾಳಬೇಕಾಗಿದೆ. ಒಂದು ಸಮಿತಿ ರಚನೆ ಮಾಡುವಂತೆ ಸೂಚನೆಯನ್ನು ಸ್ವಾಮೀಜಿ ಕೊಟ್ಟಿದ್ದಾರೆ.
ಪರಿಹಾರ ರೂಪಿಸುವುದಾಗಿಯೂ ಸ್ವಾಮೀಜಿ ತಿಳಿಸಿದ್ದಾರೆ. ಮುಸಲ್ಮಾನ ಸಮುದಾಯದ ಒಳಗೆ ನಾವು ಯಾವುದೇ ಮೀಟಿಂಗ್ ಮಾಡಿಲ್ಲ. ಚರ್ಚೆ ಹಲವು ದಾರಿಗಳಲ್ಲಿ ಸಾಗಿ ಇಂದು ಈ ಪರಿಸ್ಥಿತಿ ನಿರ್ಮಾಣವಾಗಿದೆ. ಮನಸ್ಸಿಗೆ ಬಂದ ಹಾಗೆ ಹೇಳಿಕೆಗಳನ್ನು ಕೊಡುತ್ತಾ ಹೋದರೆ ಸಮಾಜದಲ್ಲಿ ಶಾಂತಿ ಕದಡುತ್ತದೆ. ಮಾತಿನಲ್ಲಿ ಪ್ರೀತಿ ತೋರಿದರೆ ಸಮಾಜದ ಶಾಂತಿ ಕದಡುವುದಿಲ್ಲ. ಒಂದು ಕೈಯಿಂದ ಸಾಮರಸ್ಯದ ಚಪ್ಪಾಳೆ ಹೊಡೆಯಲು ಸಾಧ್ಯವಿಲ್ಲ ಎಂದು ಉಡುಪಿ ಬಳಕೆದಾರರ ವೇದಿಕೆಯ ಗೌರವಾಧ್ಯಕ್ಷ ಹಾಜಿ ಅಬೂಬಕ್ಕರ್ ಆತ್ರಾಡಿ ಹೇಳಿದ್ದಾರೆ.
ಮುಸ್ಲಿಂ ವರ್ತಕರ ಸ್ವಾಮೀಜಿ ಭೇಟಿ ಸಂದರ್ಭದಲ್ಲಿ ಕ್ರೈಸ್ತ ಧರ್ಮಗುರು ಫಾ. ಚಾಲ್ಸ್ ಅವರನ್ನೂ ಕರೆ ತರಲಾಗಿತ್ತು. ನಾವೆಲ್ಲರೂ ಮನುಷ್ಯತ್ವದ ತತ್ವದಲ್ಲಿ ಬಾಳುವವರು. ಹೊಂದಾಣಿಕೆಯಿಂದ ನಡೆದುಕೊಂಡು ಹೋದರೆ ಮಾತ್ರ ಸಮಾಜದಲ್ಲಿ ಶಾಂತಿ ನೆಲೆಸಲು ಸಾಧ್ಯ. ಸಮಾಜದಲ್ಲಿ ಕೆಲವರು ತಪ್ಪುಗಳನ್ನು ಮಾಡುತ್ತಾರೆ. ಒಬ್ಬರಿಬ್ಬರು ಮಾಡಿದ ತಪ್ಪಿನಿಂದ ಹಲವರಿಗೆ ಸಮಸ್ಯೆಗಳು ಆಗುತ್ತದೆ. ತಪ್ಪು-ಒಪ್ಪುಗಳನ್ನು ಸರಿ ಮಾಡಿಕೊಂಡು ಹೋದಲ್ಲಿ ಶಾಂತಿ ಸಹಬಾಳ್ವೆ ಸಾಧ್ಯ ಎಂದವರು ಹೇಳಿದರು. ಧರ್ಮ ಎಲ್ಲರಿಗೂ ಬೇಕು, ಧರ್ಮಕ್ಕಾಗಿ ಮನುಷ್ಯತ್ವವನ್ನು ಬೇರ್ಪಡಿಸುವುದು ಸರಿಯಲ್ಲ. ಮನುಷ್ಯತ್ವ ಮತ್ತು ದೈವತ್ವ ಜೊತೆ ಜೊತೆಯಾಗಿ ಹೋದರೆ ಮಾತ್ರ ಜೀವಿಸಲು ಸಾಧ್ಯ ಎಂದು ಉಡುಪಿಯ ಶೋಕಮಾತಾ ಇಗರ್ಜಿಯ ಧರ್ಮಗುರು ಫಾ. ಚಾರ್ಲ್ಸ್ ಹೇಳಿದ್ದಾರೆ.
Muslim traders who are facing a boycott in the annual fairs near the Hindu temples in the district, met Pejawar Math chief, Sri Vishwaprasanna Teertha Swamiji, at Sri Rama Vittala Sabhahavana of Pejawar Math on Wednesday March 30 and requested him to allow them to participate in businesses at fairs as in the past.
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 06:49 pm
HK News Desk
India Pak War: ಭಾರತ ವಾಯುಪಡೆಯಿಂದ ಭೀಕರ ಪ್ರತಿದಾಳ...
09-05-25 12:33 pm
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
09-05-25 11:07 pm
Mangalore Correspondent
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
Ullal accident, Mangalore: ರಸ್ತೆ ದಾಟುತ್ತಿದ್ದ...
08-05-25 10:54 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm