ಬ್ರೇಕಿಂಗ್ ನ್ಯೂಸ್
06-04-22 06:06 pm Mangalore Correspondent ಕರಾವಳಿ
ಪುತ್ತೂರು, ಎ.6: ಉಪ್ಪಿನಂಗಡಿ ಬಳಿಯ ಗುಂಡ್ಯದಲ್ಲಿ ಅನೈತಿಕ ಪೊಲೀಸ್ ಪ್ರಕರಣದಲ್ಲಿ ಪೊಲೀಸರು ನಾಲ್ವರು ಯುವಕರನ್ನು ಬಂಧಿಸಿದ ಘಟನೆ ಸಂಬಂಧಿಸಿ ಹಿಂದು ಸಂಘಟನೆಯ ಕಾರ್ಯಕರ್ತರು ಪುತ್ತೂರು ಶಾಸಕರನ್ನು ರಾತ್ರೋರಾತ್ರಿ ಅರ್ಧ ದಾರಿಯಲ್ಲಿ ಬಸ್ಸಿನಿಂದ ಇಳಿಸಿ ತರಾಟೆಗೆತ್ತಿಕೊಂಡ ಘಟನೆ ನಡೆದಿದ್ದು , ಶಾಸಕರ ವಿರುದ್ಧ ಘೆರಾವ್ ಹಾಕಿದ್ದಾರೆ.
ಎ.5ರ ಮಂಗಳವಾರ ಮಧ್ಯಾಹ್ನ ನಜೀರ್ ಎಂಬ ಪುತ್ತೂರಿನ ಯುವಕನೊಬ್ಬ ಹಿಂದು ಯುವತಿಯನ್ನು ಆಟೋದಲ್ಲಿ ಕರೆದೊಯ್ಯುತ್ತಿದ್ದಾಗ ಗುಂಡ್ಯದಲ್ಲಿ ಹಿಂದು ಸಂಘಟನೆಗಳ ಯುವಕರು ಅಡ್ಡ ಹಾಕಿದ್ದರು. ಆನಂತರ, ಯುವಕ ನಜೀರ್ ಮೇಲೆ ಹಲ್ಲೆ ನಡೆಸಿದ್ದರು. ಘಟನೆ ಸಂಬಂಧ ಹಲ್ಲೆಗೊಳಗಾದ ನಜೀರ್ ಉಪ್ಪಿನಂಗಡಿ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿತ್ತು. ಪೊಲೀಸರು ಸಂಜೆ ಹೊತ್ತಿಗೆ ಹಿಂದು ಸಂಘಟನೆಗೆ ಸೇರಿದ ಐವರು ಯುವಕರನ್ನು ಬಂಧಿಸಿದ್ದರು. ಸುರೇಂದ್ರ, ತೀರ್ಥಪ್ರಸಾದ್, ಜಿತೇಶ್, ಬಾಲಚಂದ್ರ, ರಂಜಿತ್ ಬಂಧಿತರಾಗಿದ್ದರು.
ಪೊಲೀಸರು ಬಂಧನ ಕಾರ್ಯಾಚರಣೆ ಬೆನ್ನಲ್ಲೇ ಅಲ್ಲಿನ ಸಂಘಟನೆಯ ಕಾರ್ಯಕರ್ತರು ಪುತ್ತೂರು ಶಾಸಕ ಸಂಜೀವ ಮಠಂದೂರು ಅವರಿಗೆ ಫೋನ್ ಮಾಡಿದ್ದರು. ಮಠಂದೂರು ಪುತ್ತೂರಿನಲ್ಲಿಯೇ ಇದ್ದರೂ, ತಾನು ಊರಲ್ಲಿ ಇಲ್ಲ. ಆಮೇಲೆ ನೋಡುತ್ತೇನೆ ಎಂದು ನುಣುಚಿಕೊಂಡಿದ್ದರು ಎನ್ನಲಾಗಿದೆ. ಆದರೆ, ಶಾಸಕರು ಊರಲ್ಲೇ ಇರುವ ಬಗ್ಗೆ ಮಾಹಿತಿ ಹೊಂದಿದ್ದ ಸಂಘಟನೆಯ ಕಾರ್ಯಕರ್ತರು ಮಠಂದೂರು ಎಲ್ಲಿ ಹೋಗುತ್ತಾರೆ ಅನ್ನುವುದರ ಬಗ್ಗೆ ನಿಗಾ ಇಟ್ಟಿದ್ದರು. ರಾತ್ರಿ ವೇಳೆ ಶಾಸಕ ಮಠಂದೂರು ಪುತ್ತೂರಿನಿಂದ ಬೆಂಗಳೂರಿಗೆ ತೆರಳಲು ಕೆಎಸ್ಸಾರ್ಟಿಸಿ ವೋಲ್ವೋ ಬಸ್ ಹತ್ತಿದ್ದರು.
ಈ ಬಗ್ಗೆ ಮಾಹಿತಿ ಪಡೆದಿದ್ದ ಹಿಂದು ಸಂಘಟನೆ ಕಾರ್ಯಕರ್ತರು ಉಪ್ಪಿನಂಗಡಿ ಹೆದ್ದಾರಿಯಲ್ಲಿ ಬಸ್ಸನ್ನು ಅಡ್ಡಗಟ್ಟಿದ್ದು, ಶಾಸಕ ಸಂಜೀವ ಮಠಂದೂರು ಅವರಿಗೆ ಘೆರಾವ್ ಹಾಕಿದ್ದಾರೆ. ಅಲ್ಲದೆ, ಶಾಸಕರನ್ನು ಬಸ್ಸಿನಿಂದ ಕೆಳಕ್ಕಿಳಿಸಿ ಸುಳ್ಳು ಹೇಳಿದ್ದಕ್ಕೆ ತರಾಟೆಗೆ ಎತ್ತಿಕೊಂಡಿದ್ದಾರೆ. ನಮ್ಮ ಯುವಕರು ಹಿಂದುತ್ವದ ರಕ್ಷಣೆಗಾಗಿ ಕೆಲಸ ಮಾಡಿದ್ದಾರೆ. ಅವರನ್ನು ರಕ್ಷಣೆ ಮಾಡಲಾಗದ ನೀವು ತಾನು ಊರಲ್ಲೇ ಇಲ್ಲ ಎಂದು ಸುಳ್ಳು ಹೇಳಿದ್ದೀರಲ್ಲಾ ಎಂದು ಬೈದಿದ್ದಾರೆ.
Moral Policing in Gundya, VHP members gherao MLA travelling in KSRTC Bus in Mangalore.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
09-09-25 11:48 am
Mangalore Correspondent
Gopadi Beach Drowning, Kundapura: ಕುಂದಾಪುರ ;...
08-09-25 12:08 pm
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm