ಬ್ರೇಕಿಂಗ್ ನ್ಯೂಸ್
10-04-22 08:52 pm Mangalore Correspondent ಕರಾವಳಿ
ಮಂಗಳೂರು, ಎ.10: ನಿರ್ಲಕ್ಷ್ಯ ಮತ್ತು ಅತಿವೇಗದ ಚಾಲನೆಯಿಂದಾಗಿ ಡಿವೈಡರ್ ಮೇಲೆರಗಿ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ವಾಹನಗಳಿಗೆ ಡಿಕ್ಕಿಯಾಗಿ ಸರಣಿ ಅಪಘಾತಕ್ಕೆ ಕಾರಣವಾದ ಪ್ರಕರಣದಲ್ಲಿ ಆರೋಪಿ ಕಾರು ಚಾಲಕನನ್ನು ಪೊಲೀಸರು ಬಂಧಿಸಿದ್ದು, ಕೋರ್ಟಿಗೆ ಹಾಜರು ಪಡಿಸಿ ಮೂರು ದಿನಗಳ ಕಾಲ ಕಸ್ಟಡಿಗೆ ಪಡೆದುಕೊಂಡಿದ್ದಾರೆ.
ಶನಿವಾರ ಮಧ್ಯಾಹ್ನ ಮಂಗಳೂರು ನಗರದ ಎಂಜಿ ರಸ್ತೆಯಲ್ಲಿ ಅಪಘಾತ ನಡೆದಿತ್ತು. ಮಣ್ಣಗುಡ್ಡ ನಿವಾಸಿ ಶ್ರವಣ್ ದೇವಾಡಿಗ ಎಂಬಾತ ಅತಿವೇಗ ಮತ್ತು ನಿರ್ಲಕ್ಷ್ಯದಿಂದ ಕಾರನ್ನು ಚಲಾಯಿಸಿ ಅಪಘಾತಕ್ಕೆ ಕಾರಣವಾಗಿದ್ದ. ಘಟನೆಯಲ್ಲಿ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಎರಡು ಕಾರು ಮತ್ತು ಸ್ಕೂಟರ್ ಗೆ ಬಿಎಂಡಬ್ಲ್ಯು ಕಾರು ಡಿಕ್ಕಿಯಾಗಿತ್ತು. ಇದರಿಂದ ಸ್ಕೂಟರಿನಲ್ಲಿ ಪ್ರಯಾಣಿಸುತ್ತಿದ್ದ ಮಂಗಳಾದೇವಿ ನಿವಾಸಿ ಪ್ರೀತಿ (47) ಎಂಬ ಮಹಿಳೆಗೆ ಗಂಭೀರ ಗಾಯವಾಗಿದ್ದು, ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಪೊಲೀಸರು ಆರೋಪಿ ಶ್ರವಣ್ ದೇವಾಡಿಗ ಮೇಲೆ ಅಪರಾಧ ಕಲಂ 279ಸ 337, 338 ಪ್ರಕಾರ ಕೇಸು ದಾಖಲಿಸಿ ಕೋರ್ಟಿಗೆ ಹಾಜರು ಪಡಿಸಿದ್ದರು. ಅತಿ ವೇಗ ಮತ್ತು ನಿರ್ಲಕ್ಷ್ಯ ಚಾಲನೆಯಿಂದ ಜನರ ಪ್ರಾಣಕ್ಕೆ ಕುತ್ತು ಬರುವ ರೀತಿ ವರ್ತಿಸಿದ್ದರಿಂದ ಹೆಚ್ಚುವರಿಯಾಗಿ 308 ಕಲಂ ಅಡಿ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಯ ಕೃತ್ಯ ಗಂಭೀರ ರೀತಿಯದಾಗಿದ್ದು ಕೊಲೆಯತ್ನಕ್ಕೆ ಸಮಾನ ಎನ್ನುವ ರೀತಿ ಪರಿಗಣಿಸಲಾಗಿದೆ. ಅಪಘಾತ ಪ್ರಕರಣದಲ್ಲಿ 308 ಪ್ರಕರಣ ದಾಖಲಿಸುವುದು ಅಪರೂಪವಾಗಿದ್ದು, ಗಂಭೀರ ಪ್ರಮಾದ ಆಗಿದ್ದಲ್ಲಿ ಮಾತ್ರ ದಾಖಲು ಮಾಡುತ್ತಾರೆ. ಈ ಕಲಂ ಅಡಿ ಆರೋಪಿಯನ್ನು ಮೂರು ದಿನಗಳ ಕಸ್ಟಡಿಗೆ ಪಡೆದುಕೊಂಡಿದ್ದಾರೆ. ಸೆಕ್ಷನ್ 308 ಪ್ರಕಾರ ಉದ್ದೇಶಪೂರ್ವಕವಾಗಿ ಮಾನವ ಹತ್ಯೆಯಾಗುವ ರೀತಿ ವರ್ತಿಸುವುದಾಗಿದ್ದು, ಆರೋಪ ಸಾಬೀತಾದಲ್ಲಿ ಮೂರು ವರ್ಷಕ್ಕಿಂತ ಹೆಚ್ಚು ಸಜೆ ನೀಡಬೇಕಾಗುತ್ತದೆ.
ಕಾನೂನು ಬಗ್ಗೆ ತಜ್ಞರಿಂದ ಮಾಹಿತಿ ಪಡೆದು ಈ ಸೆಕ್ಷನ್ ಅಳವಡಿಸಲಾಗಿದೆ. ಆರೋಪಿಯನ್ನು ವಿಚಾರಣೆ ನಡೆಸಲಾಗುತ್ತಿದ್ದು, ಕಾರಿನ ಇನ್ಶೂರೆನ್ಸ್ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ. ಜೊತೆಗೆ ಆರೋಪಿ ಶ್ರವಣ್ ಡ್ರಗ್ಸ್ ಅಥವಾ ಮದ್ಯ ಸೇವನೆ ಮಾಡಿದ್ದನೇ ಎಂಬ ಬಗ್ಗೆಯೂ ತಪಾಸಣೆ ನಡೆಸಲಾಗುವುದು ಎಂದು ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ.
Bmw car accident in Mangalore, driver taken into custody, attempt to murder case booked. The driver has been identified as Sharvan. A woman riding a scooter sustained serious injuries on Saturday after being hit by a speeding BMW car in Mangaluru.The incident took place at Ballalbagh junction around 1:20 in the afternoon and was captured on CCTV. As per reports the speeding BMW car jumped over a divider and crashed into the victim, throwing her under another car before the vehicle came to a stop.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
09-09-25 03:07 pm
Mangalore Correspondent
ದಶಮ ಸಂಭ್ರಮದಲ್ಲಿ ಮಿಥುನ್ ರೈ ಸಾರಥ್ಯದ ಪಿಲಿನಲಿಕೆ ;...
09-09-25 02:30 pm
Mangalore Accident, Kulur, Death: ಕುಳೂರಿನಲ್ಲಿ...
09-09-25 11:48 am
Gopadi Beach Drowning, Kundapura: ಕುಂದಾಪುರ ;...
08-09-25 12:08 pm
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm