ಬ್ರೇಕಿಂಗ್ ನ್ಯೂಸ್
12-04-22 12:32 pm Mangalore Correspondent ಕರಾವಳಿ
ಬೆಳ್ತಂಗಡಿ, ಎ.12: ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ತಾಯಿ ಜೊತೆ ಸ್ಕೂಟರಿನಲ್ಲಿ ಬರುತ್ತಿದ್ದಾಗ ಅಪಘಾತಕ್ಕೀಡಾಗಿ ಬಳಿಕ ಆಂಬುಲೆನ್ಸ್ ನಲ್ಲಿದ್ದುಕೊಂಡೇ ಸಹಾಯಕಿ ಮೂಲಕ ಪರೀಕ್ಷೆ ಬರೆದು ವಿದ್ಯಾರ್ಥಿನಿ ದಿಟ್ಟತನ ತೋರಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.
ಲಾಯ್ಲ ಸೈಂಟ್ ಮೇರೀಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ತನ್ವಿ(15) ಅಪಘಾತಕ್ಕೀಡಾದರೂ, ಸ್ಟ್ರೆಚರ್ ನಲ್ಲಿ ಮಲಗಿಕೊಂಡೇ ಪರೀಕ್ಷೆ ಬರೆದವಳು. ನಾವೂರು ಗ್ರಾಮದ ಲಕ್ಷ್ಮಣ-ಮಮತಾ ದಂಪತಿಯ ಪುತ್ರಿಯಾಗಿರುವ ತನ್ವಿ ತಾಯಿ ಜೊತೆ ಪರೀಕ್ಷಾ ಕೇಂದ್ರ ವಾಣಿ ಹೈಸ್ಕೂಲಿಗೆ ಬರುತ್ತಿದ್ದಳು. ಈ ವೇಳೆ, ಸ್ಕೂಟರ್ ಸ್ಕಿಡ್ ಆಗಿ ಬಿದ್ದಿದ್ದು ತನ್ವಿ ರಸ್ತೆಗೆ ಬಿದ್ದು ಗಾಯಗೊಂಡಿದ್ದಳು.
ಕೂಡಲೇ ಆಕೆಯನ್ನು ಉಜಿರೆ ಬೆನಕ ಆಸ್ಪತ್ರೆಗೆ ಚಿಕಿತ್ಸೆಗೆ ಒಯ್ದಿದ್ದು ಅಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ. ಸೈಂಟ್ ಮೇರೀಸ್ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ಮಂಡಳಿಯವರು ತನ್ವಿಯ ಆರೋಗ್ಯ ವಿಚಾರಿಸಿ, ಶಿಕ್ಷಣ ಇಲಾಖೆಯ ಅನುಮತಿ ಪಡೆದು 9ನೇ ತರಗತಿಯ ವಿದ್ಯಾರ್ಥಿನಿ ಮೂಲಕ ಪರೀಕ್ಷೆ ಬರೆಯಲು ಅವಕಾಶ ನೀಡಿದ್ದಾರೆ. ಅದರಂತೆ, ಬೆನಕ ಆಸ್ಪತ್ರೆಯ ಸಿಬಂದಿ ವಿದ್ಯಾರ್ಥಿನಿಯನ್ನು ಆಂಬುಲೆನ್ಸ್ ನಲ್ಲಿ ಮಲಗಿಸಿಕೊಂಡೇ ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಧ್ಯಾಹ್ನ 12.45ರಿಂದ 2.45ರ ವರೆಗೆ ಪರೀಕ್ಷೆ ಬರೆದಿದ್ದು ಬಳಿಕ ಆಸ್ಪತ್ರೆಗೆ ಒಯ್ದು ಚಿಕಿತ್ಸೆ ಮುಂದುವರಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬೆಳ್ತಂಗಡಿ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ, ವಿದ್ಯಾರ್ಥಿನಿಯ ಭವಿಷ್ಯದ ದೃಷ್ಟಿಯಿಂದ ಶಿಕ್ಷಣ ಇಲಾಖೆಯ ಅಧಿಕಾರಿಗಳು ತುರ್ತಾಗಿ ಸ್ಪಂದಿಸಿದ್ದಾರೆ. ವಿದ್ಯಾರ್ಥಿನಿ 9ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳ ಸಹಾಯ ಪಡೆದು ಪರೀಕ್ಷೆ ಬರೆದಿದ್ದಾಳೆ. ಆನಂತರ ಆಕೆಯ ಚಿಕಿತ್ಸೆ ಮುಂದುವರಿಸುವುದಕ್ಕಾಗಿ ವೈದ್ಯರು ಮರಳಿ ಆಸ್ಪತ್ರೆಗೆ ಒಯ್ದಿದ್ದಾರೆ ಎಂದು ತಿಳಿಸಿದ್ದಾರೆ.
A girl student, riding pillion with her mother on scooter to the examination center, in order to write the last examination on science subject of SSLC, met with accident but took first aid and took the examination by sleeping on the stretcher itself.This incident occurred at Vani high school in the taluk on Monday, April 11.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
09-09-25 03:07 pm
Mangalore Correspondent
ದಶಮ ಸಂಭ್ರಮದಲ್ಲಿ ಮಿಥುನ್ ರೈ ಸಾರಥ್ಯದ ಪಿಲಿನಲಿಕೆ ;...
09-09-25 02:30 pm
Mangalore Accident, Kulur, Death: ಕುಳೂರಿನಲ್ಲಿ...
09-09-25 11:48 am
Gopadi Beach Drowning, Kundapura: ಕುಂದಾಪುರ ;...
08-09-25 12:08 pm
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm