ಬ್ರೇಕಿಂಗ್ ನ್ಯೂಸ್
18-04-22 10:00 am Mangalore Correspondent ಕರಾವಳಿ
ಮಂಗಳೂರು, ಎ.18: ಮಂಗಳೂರು ಹೊರವಲಯದ ಎಸ್ಇಝೆಡ್ ವ್ಯಾಪ್ತಿಯಲ್ಲಿರುವ ಫಿಶ್ ಮಿಲ್ ಫ್ಯಾಕ್ಟರಿಯಲ್ಲಿ ವಿಷಾನಿಲ ಸೋರಿಕೆಯಾಗಿ ದುರಂತ ಸಂಭವಿಸಿದ್ದು ಐವರು ಕಾರ್ಮಿಕರು ಸಾವನ್ನಪ್ಪಿದ್ದಾರೆ.
ಭಾನುವಾರ ರಾತ್ರಿ ಫಿಶ್ ಮಿಲ್ ಫ್ಯಾಕ್ಟರಿಯ ಟ್ಯಾಂಕ್ ಸ್ವಚ್ಚಗೊಳಿಸುವ ಸಂದರ್ಭ ಘಟನೆ ನಡೆದಿದೆ. ಮೃತರು ಪಶ್ಚಿಮ ಬಂಗಾಳ ಮೂಲದವರು ಎನ್ನಲಾಗುತ್ತಿದೆ. ಮೊಹಮ್ಮದ್ ಸಮೀವುಲ್ಲ ಇಸ್ಲಾಂ, ಉಮರ್ ಫಾರೂಕ್, ನಿಜಾಮುದ್ದೀನ್ ಆಲಿಸ್, ಮಿರಾಜುಲ್ ಇಸ್ಲಾಂ, ಸರಾಫತ್ ಆಲಿ ಮೃತರು. ಹಸನ್ ಆಲಿ, ಮೊಹಮ್ಮದ್ ಕರೀಬುಲ್ಲ, ಹಫೀಜುಲ್ಲಾ ಎಂಬವರು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಭಾನುವಾರ ರಾತ್ರಿ ಟ್ಯಾಂಕ್ ಕ್ಲೀನ್ ನಡೆಸಲೆಂದು ಕಾರ್ಮಿಕನೊಬ್ಬ ಕೆಳಗಿಳಿದಿದ್ದ. ಈ ವೇಳೆ ಏಕಾಏಕಿ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದಾನೆ. ಕೂಡಲೇ ಆತನನ್ನು ರಕ್ಷಿಸಲು ಇತರ ಏಳು ಮಂದಿ ಕಾರ್ಮಿಕರು ಒಳಕ್ಕಿಳಿದಿದ್ದು, ಎಲ್ಲರೂ ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥಗೊಂಡವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸ್ಥಳಕ್ಕೆ ಮಂಗಳೂರು ನಗರ ಡಿಸಿಪಿ ಹರಿರಾಂ ಶಂಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೊದಲಿಗೆ ಮೂವರು ಸಾವು ಕಂಡಿದ್ದರು. ಬೆಳಗ್ಗಿನ ಆಸ್ಪತ್ರೆಯಲ್ಲಿ ಮತ್ತಿಬ್ಬರು ಸಾವನ್ನಪ್ಪಿದ್ದಾರೆ.
ಫಿಶ್ ಮಿಲ್, ಮುಂಬೈ ಮೂಲದ ರಾಜು ಎಂಬವರಿಗೆ ಸೇರಿದ್ದಾಗಿದ್ದು ಶ್ರೀ ಉಲ್ಕಾ ಎಲ್ಎಲ್ ಪಿ ಹೆಸರಿನಲ್ಲಿ ಕಾರ್ಯಾಚರಿಸುತ್ತಿತ್ತು. ಕಾರ್ಮಿಕರಿಗೆ ರಕ್ಷಣಾತ್ಮಕ ಉಪಕರಣಗಳನ್ನು ಒದಗಿಸದೆ ನಿರ್ಲಕ್ಷ್ಯ ವಹಿಸಿದ ಬಗ್ಗೆ ಬಜಪೆ ಠಾಣೆಯಲ್ಲಿ 337, 338, 304 ಅಡಿ ಪ್ರಕರಣ ದಾಖಲಾಗಿದೆ. ಕಂಪನಿಯ ಪ್ರೊಡಕ್ಷನ್ ಮ್ಯಾನೇಜರ್ ರೂಬಿ ಜೋಸೆಫ್, ಏರಿಯಾ ಮ್ಯಾನೇಜರ್ ಕುಬೇರ್ ಗಾಡೆ, ಫ್ಯಾಕ್ಟರಿ ಸೂಪರ್ ವೈಸರ್ ಮೊಹಮ್ಮದ್ ಅನ್ವರ್, ಕಂಪೆನಿಯ ಕಾರ್ಮಿಕರನ್ನು ನೋಡಿಕೊಳ್ಳುತ್ತಿದ್ದ ಉಳ್ಳಾಲದ ಆಜಾದ್ ನಗರ ನಿವಾಸಿ ಫಾರೂಕ್ ಎಂಬವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Five youth were killed after they reportedly inhaled toxic gas at a fish processing centre in Mangaluru Special Economic Zone (MSEZ) on city”s outskirts on Sunday night.
10-12-25 12:58 pm
Bangalore Correspondent
ಮಹಿಳಾ ಉದ್ಯೋಗಿಗಳಿಗೆ ಋತುಚಕ್ರ ರಜೆ ; ಹೊಟೇಲುಗಳ ಸಂಘ...
09-12-25 08:56 pm
ಶಾಲಾ ಬಸ್ಸಿನಡಿಗೆ ಬಿದ್ದು ಎಂಟು ವರ್ಷದ ಬಾಲಕಿ ದುರಂತ...
09-12-25 08:53 pm
ಕಾಂಗ್ರೆಸ್ ಗ್ಯಾರಂಟಿ ವಿರುದ್ಧ ಸುಪ್ರೀಂ ಕೋರ್ಟಿಗೆ ಅ...
08-12-25 10:39 pm
DK Shivakumar, Yathindras: ಡಿಸಿಎಂ ಡಿಕೆಶಿ ತಮಗೊ...
08-12-25 06:58 pm
10-12-25 01:17 pm
HK News Desk
ಮಾಜಿ ಸಿಜೆಐ ಗವಾಯಿಗೆ ಶೂ ಎಸೆದಿದ್ದ ವಕೀಲ ರಾಕೇಶ್ ಕಿ...
09-12-25 11:03 pm
Goa Fire Accident, 23 dead: ಗೋವಾದ ನೈಟ್ಕ್ಲಬ್...
07-12-25 02:04 pm
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
09-12-25 07:30 pm
HK News Desk
ರಿಷಬ್ ಶೆಟ್ಟಿ ತೊಡೆಯ ಮೇಲೆ ಮಲಗಿದ ದೈವ ! ಹರಕೆ ನೇಮದ...
09-12-25 05:21 pm
ಎರಡೂವರೆ ಗಂಟೆ ಕಾದರೂ ಸಿಗದ ಆಂಬುಲೆನ್ಸ್ ; ಗೂಡ್ಸ್ ಟ...
09-12-25 11:55 am
ಭಗವದ್ಗೀತೆ ಮತ್ತು ಮಹಿಳೆ ಬಗ್ಗೆ ಅವಹೇಳನ ಪೋಸ್ಟ್ ; ವ...
08-12-25 10:11 pm
Mangalore, Puttur, Mahesh Shetty Timarodi: ಪ್...
08-12-25 04:52 pm
09-12-25 04:33 pm
Mangalore Correspondent
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am
ಗಡಿಭಾಗ ತಲಪಾಡಿಯಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ; ಎರ...
08-12-25 09:29 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm
Ganesh Gowda, Chikkamagaluru, Congress, Murde...
06-12-25 02:43 pm