ಬ್ರೇಕಿಂಗ್ ನ್ಯೂಸ್
22-04-22 02:10 pm Udupi Correspondent ಕರಾವಳಿ
ಉಡುಪಿ ಎ.22 : ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆಯಲ್ಲಿ ಹಿಜಬ್ ಧರಿಸಲು ಅವಕಾಶ ಇಲ್ಲದ ಹಿನ್ನೆಲೆಯಲ್ಲಿ ಹಿಜಬ್ ಪರ ಕೋರ್ಟ್ ಮೆಟ್ಟಿಲೇರಿದ್ದ ವಿದ್ಯಾರ್ಥಿನಿಯರು ಪರೀಕ್ಷೆ ಬರೆಯದೆ ಮನೆಗೆ ತೆರಳಿದ್ದಾರೆ.
ಪರೀಕ್ಷೆಗೆ ಕೆಲವೇ ನಿಮಿಷ ಬಾಕಿ ಇರುವಂತೆ ಉಡುಪಿಯ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿಗೆ ಬಂದಿದ್ದ ವಿದ್ಯಾರ್ಥಿನಿಯರು ಪ್ರವೇಶ ಪತ್ರ ಪಡೆದಿದ್ದು ಅಲ್ಲಿಂದ ಪರೀಕ್ಷಾ ಕೇಂದ್ರ ಉಡುಪಿ ವಿದ್ಯೋದಯ ಕಾಲೇಜಿಗೆ ತೆರಳಿದರು. ಅಲ್ಲಿಗೆ ಬಂದು ಹಿಜಾಬ್ ಧರಿಸಿಯೇ ಪರೀಕ್ಷೆ ಬರೆಯಲು ಅವಕಾಶ ನೀಡಬೇಕೆಂದು ಕೇಳಿದ್ದಾರೆ. ಆದರೆ ಸ್ಥಳಕ್ಕೆ ಆಗಮಿಸಿದ ತಹಸೀಲ್ದಾರ್ ಅರ್ಚನಾ ಭಟ್ ಹಾಗೂ ಪರೀಕ್ಷಾ ಸಿಬ್ಬಂದಿ, ಹಿಜಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಿಲ್ಲ. ಇದರಿಂದ ಸಿಟ್ಟುಗೊಂಡ ಇಬ್ಬರು ವಿದ್ಯಾರ್ಥಿನಿಯರು ಪರೀಕ್ಷೆ ಬರೆಯದೇ ಮನೆಗೆ ತೆರಳಿದ್ದಾರೆ.
ಕಾಲೇಜಿನ ಒಳಗಡೆ ಪರೀಕ್ಷೆ ಬರೆಯುವಾಗ ಮಾತ್ರ ಹಿಜಬ್ ತೆಗೆಯಲು ಆದೇಶ ಇದ್ದುದರಿಂದ ಹಲವಾರು ಮುಸ್ಲಿಮ್ ವಿದ್ಯಾರ್ಥಿನಿಯರು ಪರೀಕ್ಷಾ ಕೇಂದ್ರಕ್ಕೆ ಬುರ್ಖಾ ಮತ್ತು ಹಿಜಾಬ್ ಧರಿಸಿಕೊಂಡೇ ಆಗಮಿಸಿದ್ದರು. ಕಾಲೇಜಿನಲ್ಲಿ ಪ್ರತ್ಯೇಕ ಕೊಠಡಿ ಇದ್ದು ಅಲ್ಲಿ ಹಿಜಬ್, ಬುರ್ಖಾ ತೆಗೆದು ಪರೀಕ್ಷೆಗೆ ಹಾಜರಾಗಲು ವ್ಯವಸ್ಥೆ ಮಾಡಲಾಗಿತ್ತು.
ತಮ್ಮ ಕಾಲೇಜಿನಲ್ಲಿ ಬೆಳಗ್ಗೆ 10 ಗಂಟೆಗೆ ಹಾಲ್ ಟಿಕೆಟ್ ಪಡೆದ ಆಲಿಯಾ ಮತ್ತು ರೇಶಂ ಎಂಬ ಇಬ್ಬರು ವಿದ್ಯಾರ್ಥಿನಿಯರು ಆಟೋದಲ್ಲಿ ವಿದ್ಯೋದಯ ಕಾಲೇಜಿಗೆ ಆಗಮಿಸಿದ್ದರು. ಇಬ್ಬರೂ ಕಾಲೇಜು ಸಿಬಂದಿ ಬಳಿ ಹಿಜಾಬ್ ಧರಿಸಿಯೇ ಪರೀಕ್ಷೆ ಬರೆಯಲು ಅನುಮತಿ ನೀಡುವಂತೆ ಪಟ್ಟು ಹಿಡಿದಿದ್ದಾರೆ. ವಿಚಾರ ತಿಳಿದು ಉಡುಪಿ ತಹಶೀಲ್ದಾರ್ ಅರ್ಚನಾ ಭಟ್ ಪರೀಕ್ಷಾ ಕೇಂದ್ರಕ್ಕೆ ಬಂದು ವಿದ್ಯಾರ್ಥಿನಿಯರ ಮನ ಒಲಿಸುವ ಪ್ರಯತ್ನ ಮಾಡಿದ್ದರು. ಆದರೆ ಹಿಜಬ್ ಮುಖ್ಯ ಎಂದು ಹಠಕ್ಕೆ ಬಿದ್ದ ವಿದ್ಯಾರ್ಥಿನಿಯರು ಪರೀಕ್ಷಾ ಕೇಂದ್ರದಿಂದಲೇ ಹೊರ ನಡೆದಿದ್ದಾರೆ.
ಮೊದಲಿಗೆ ಹಿಜಾಬ್ ಧರಿಸಲು ಪಟ್ಟು ಹಿಡಿದು ಬುರ್ಖಾ ಧರಿಸಿಯೇ ಪರೀಕ್ಷಾ ಕೇಂದ್ರಕ್ಕೆ ತೆರಳಿದ್ದ ಇಬ್ಬರು ವಿದ್ಯಾರ್ಥಿಗಳಿಗೆ ಬೆಳಗ್ಗೆ 10.45ರ ವರೆಗೆ ಅವಕಾಶ ನೀಡಲಾಗಿತ್ತು. ಆದರೆ ಬುರ್ಖಾ ಮತ್ತು ಹಿಜಾಬ್ ತೆಗೆಯಲು ಒಪ್ಪದೇ ಇದ್ದ ಆ ಇಬ್ಬರನ್ನೂ ಸಿಬಂದಿ ಹೊರಗೆ ತೆರಳಲು ಸೂಚಿಸಿದ್ದಾರೆ. ಈ ಬಾರಿ ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಸಮವಸ್ತ್ರ ಹೊರತುಪಡಿಸಿ ಯಾವುದೇ ಇನ್ನಿತರ ಧಿರಿಸು ಹಾಕ್ಕೊಂಡು ಬರಲು ಅವಕಾಶ ಇಲ್ಲವೆಂದು ಹೇಳಿ ರಾಜ್ಯ ಸರಕಾರ ಎಲ್ಲ ಕಾಲೇಜುಗಳಿಗೂ ಹನ್ನೊಂದು ಅಂಶಗಳ ಸುತ್ತೋಲೆಯನ್ನು ಕಳಿಸಿತ್ತು.
In another dramatic development in the Karnataka Hijab ban row, the two students who had first petitioned the court to allow Hijab inside classrooms were today turned away from the examination centre of their final class 12 board examination after they insisted on taking the exams wearing burqas. Aliya Assadi and Resham had collected their hall tickets and turned up donning burqas to take the exams at the Vidyodaya PU College in Udupi. They tried to convince the invigilators and the college principal for around 45 minutes but were eventually not allowed any exception to the court order upholding the state government's ban.
10-05-25 11:30 am
HK News Desk
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
09-05-25 06:49 pm
HK News Desk
India Pak War: ಭಾರತ ವಾಯುಪಡೆಯಿಂದ ಭೀಕರ ಪ್ರತಿದಾಳ...
09-05-25 12:33 pm
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
09-05-25 11:07 pm
Mangalore Correspondent
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
Ullal accident, Mangalore: ರಸ್ತೆ ದಾಟುತ್ತಿದ್ದ...
08-05-25 10:54 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm