ಬ್ರೇಕಿಂಗ್ ನ್ಯೂಸ್
25-04-22 10:01 am Mangalore Correspondent ಕರಾವಳಿ
ಮಂಗಳೂರು, ಎ.25: ಕಾರಿಗೆ ಡಿಕ್ಕಿಯಾಗಿ ನಿಯಂತ್ರಣ ಕಳಕೊಂಡ ಗ್ರಾನೈಟ್ ತುಂಬಿದ ಲಾರಿಯೊಂದು ಸ್ಕೂಟರ್ ಮೇಲೆ ಹರಿದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಗರದ ರಾ.ಹೆ. 66 ರ ಜಪ್ಪಿನಮೊಗರು ಕಂರ್ಭಿಸ್ಥಾನ ದ್ವಾರದೆದುದುರು ನಡೆದಿದೆ.
ಕೊಣಾಜೆ ಮಂಗಳೂರು ವಿವಿಯ ಮಂಗಳಾ ಸಭಾಂಗಣ ಬಳಿಯ ನಿವಾಸಿ ರೊನಾಲ್ಡ್ ಸುಕುಮಾರ್ ಕರ್ಕಡ (59) ಮೃತ ದುರ್ದೈವಿ. ಭಾನುವಾರ ರಾತ್ರಿ ಸುಮಾರು 10 ಗಂಟೆ ವೇಳೆಗೆ ಸುಕುಮಾರ್ ಅವರು ಮಂಗಳೂರಿನಿಂದ ಕೊಣಾಜೆಗೆ ತನ್ನ ಸ್ಕೂಟರಲ್ಲಿ ತೆರಳುತ್ತಿದ್ದರು. ಜಪ್ಪಿನಮೊಗರು ಕಂರ್ಭಿಸ್ಥಾನ ದ್ವಾರದೆದುರು ಕೇರಳದ ಕಡೆ ಧಾವಿಸುತ್ತಿದ್ದ ಗ್ರಾನೈಟ್ ಹೊತ್ತ ಲಾರಿಯೊಂದು ಬೆಲೆನೊ ಕಾರಿಗೆ ಢಿಕ್ಕಿ ಹೊಡೆದು ನಿಯಂತ್ರಣ ತಪ್ಪಿ ಸುಕುಮಾರ್ ಚಲಾಯಿಸುತ್ತಿದ್ದ ಸ್ಕೂಟರ್ ಮೇಲಿನಿಂದ ಹರಿದಿದೆ.



ಸ್ಕೂಟರ್ ಸವಾರ ಸುಕುಮಾರ್ ಅವರ ಮೇಲಿಂದಲೇ ಲಾರಿ ಚಕ್ರ ಹರಿದು ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸರು ತೆರಳಿ ಲಾರಿಯಲ್ಲಿದ್ದ ಕ್ಲೀನರ್ ಮತ್ತು ಚಾಲಕನನ್ನ ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಮೃತ ರೊನಾಲ್ಡ್ ಸುಕುಮಾರ್ ಅವರು ಪತ್ನಿ, ಪುತ್ರಿ, ಮೊಮ್ಮಗಳನ್ನ ಅಗಲಿದ್ದಾರೆ.
Ghastly accident at Jeppinamogaru in Mangalore, 59 year old dies on spot after truck rams on him. The deceased has been identified as Sukumar.
19-11-25 12:20 pm
HK News Desk
Deputy CM D.K. Shivakumar: ರಾಜ್ಯದ ಐದು ಕಡೆಗಳಲ್...
17-11-25 07:25 pm
ಖರ್ಗೆ ಕೋಟೆಯಲ್ಲಿ ಆರೆಸ್ಸೆಸ್ ಸಂಚಲನ ; ಒಂದೂವರೆ ಕಿಮ...
16-11-25 09:15 pm
ಸಚಿವ ಪ್ರಿಯಾಂಕ ಖರ್ಗೆ ಕ್ಷೇತ್ರ ಚಿತ್ತಾಪುರದಲ್ಲಿ ಕೊ...
13-11-25 08:33 pm
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
19-11-25 11:10 am
HK News Desk
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
Delhi Blast Probe Widens: ದೆಹಲಿ ಸ್ಫೋಟ ; ಹರ್ಯಾ...
17-11-25 07:33 pm
ಉಮ್ರಾ ಯಾತ್ರೆ ತೆರಳಿದ್ದ ಹೈದ್ರಾಬಾದ್ ಮೂಲದ 45 ಯಾತ್...
17-11-25 06:13 pm
ರಾಜ್ಯದಲ್ಲಿ ಸಂಪುಟ ಸರ್ಜರಿಗೆ ಗ್ರೀನ್ ಸಿಗ್ನಲ್ ; ಸಿ...
15-11-25 11:12 pm
18-11-25 10:18 pm
Mangaluru Staff
UT Khader, Ullal, Mangalore Dc, Ashwini: ತನ್ನ...
18-11-25 07:03 pm
Mangalore case, Police, Inspector Balakrishna...
18-11-25 11:27 am
ಸೌಜನ್ಯಾ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ...
17-11-25 06:16 pm
ದೇರಳಕಟ್ಟೆ ಕಾಲೇಜಿನ ಕೇರಳ ವಿದ್ಯಾರ್ಥಿ ನಾಪತ್ತೆ ; ಗ...
16-11-25 10:48 pm
18-11-25 09:09 pm
Mangaluru Staff
ರಾಜ್ಯದಲ್ಲೇ ಅತಿದೊಡ್ಡ ಡಿಜಿಟಲ್ ಅರೆಸ್ಟ್ ವಂಚನೆ ; ಸ...
18-11-25 11:18 am
ದುಬಾರಿ ಪಾರ್ಸೆಲ್ ಇದೆ, ಕಸ್ಟಮ್ಸ್ ಸುಂಕ ಕಟ್ಟಲು ಹೇಳ...
17-11-25 12:54 pm
ಬೆಳಗಾವಿಯಲ್ಲಿ ಕುಳಿತು ಅಮೆರಿಕನ್ನರಿಗೆ ಗಾಳ ; ಆನ್ಲೈ...
14-11-25 05:32 pm
Ullal News, Animal Attack, Crime, Kumpala: ಕಣ...
14-11-25 11:16 am