ಬ್ರೇಕಿಂಗ್ ನ್ಯೂಸ್
05-05-22 10:32 pm Mangalore Correspondent ಕರಾವಳಿ
ಉಳ್ಳಾಲ, ಮೇ 5 : ತಲಪಾಡಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ರಾ.ಹೆ. 66ರ ದೇವಿಪುರ ಶ್ರೀರಾಮ ಭಜನಾ ಮಂದಿರದ ಬಳಿ ಶ್ರೀದೇವಿಯ ಭಕ್ತ ನಾರ್ಲ ಹೊಸಮನೆ ನಿವಾಸಿ ಮುಂಬೈಯ ಡಿ.ಎಸ್. ರಬ್ಬರ್ ಇಂಡಸ್ಟ್ರೀಸ್ ಸಂಸ್ಥಾಪಕ ಭಾಸ್ಕರ ಶೆಟ್ಟಿಯವರು ಶ್ರೀ ದೇವಿಗೆ ನಿರ್ಮಿಸಿದ ಶಿಲಾಮಯ ಮಹಾದ್ವಾರ ಸಮರ್ಪಣಾ ಕಾರ್ಯ ಮೇ 8ರಂದು ನಡೆಯಲಿದೆ ಎಂದು ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಸದಸ್ಯ ಮೋಹನದಾಸ್ ನೆತ್ತಿಲಬಾಳಿಕೆ ತಿಳಿಸಿದರು.
ಗುರುವಾರ ದೇವಸ್ಥಾನದ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾರ್ಚ್ ತಿಂಗಳಲ್ಲಿ ದೇವಸ್ಥಾನಕ್ಕೆ ಬ್ರಹ್ಮರಥ ಸಮರ್ಪಣಾ ಕಾರ್ಯಕ್ರಮ ನಡೆದಿದ್ದು ಅದೇ ದಿನ ಮಹಾದ್ವಾರ ಸಮರ್ಪಿಸಬೇಕಿತ್ತು. ಆದರೆ ಕೆಲಸ ಪೂರ್ಣಗೊಂಡು ಸುಂದರವಾಗಿ ಸಿದ್ಧಗೊಳ್ಳಬೇಕೆನ್ನುವ ನೆಲೆಯಲ್ಲಿ ಈ ತಿಂಗಳು ಸಮರ್ಪಿಸಲಾಗುತ್ತಿದೆ. ಕಾರ್ಯಕ್ರಮದ ಪೂರ್ವಭಾವಿಯಾಗಿ ಶುಕ್ರವಾರ ಬೆಳಗ್ಗೆ 9 ಗಂಟೆಗೆ ಚಂಡಿಕಾಯಾಗ, ಮಧ್ಯಾಹ್ನ 12:30ಕ್ಕೆ ಮಹಾಪೂಜೆ, 1 ಗಂಟೆಗೆ ಅನ್ನ ಸಂತರ್ಪಣೆ ನಡೆಯಲಿದೆ.
ಮೇ 8ರಂದು ಬೆಳಗ್ಗೆ 9 ಗಂಟೆಗೆ ಮಹಾದ್ವಾರ ಕಲಶಾಭಿಷೇಕ, ಸಂಜೆ 5:30ಕ್ಕೆ ಶಿಲಾಮಯ ಮಹಾದ್ವಾರ ಸಮರ್ಪಣೆ, ಬಳಿಕ ಸಭಾ ಕಾರ್ಯಕ್ರಮ, ಅನ್ನಸಂತರ್ಪಣೆ ನಡೆಯಲಿದೆ. ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಅರ್ಚಕ ಹರಿನಾರಾಯಣ ಅಸ್ರಣ್ಣರವರು ಮಹಾದ್ವಾರವನ್ನ ಉದ್ಘಾಟಿಸಿ, ಒಡಿಯೂರು ಶ್ರೀಗಳಾದ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ, ಶ್ರೀದೇವಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಎ. ಸದಾನಂದ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮುಂಬೈಯ ಯುನೈಟೆಡ್ ರಬ್ಬರ್ ಇಂಡಸ್ಟ್ರೀಸ್ ನ ಆಡಳಿತ ನಿರ್ದೇಶಕ ಅಜಿತ್ ರೈ ಮುಲ್ಕಿ ಪಾದೆಮನೆ, ತಲಪಾಡಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ಮೋಹನದಾಸ್ ರೈ ಸಾಂತ್ಯಗುತ್ತು, ಉದ್ಯಾವರ ಮಾಡ ಶ್ರೀ ಅರಸು ಮಂಜಿಷ್ಣಾರ್ ಕ್ಷೇತ್ರದ ಮಾಜಿ ಆಡಳಿತ ಮೊಕ್ತೇಸರ ಡಾ.ಜಯಪಾಲ್ ಶೆಟ್ಟಿ ತಲಪಾಡಿ ದೊಡ್ಡಮನೆ, ಸೋಮೇಶ್ವರ ಶ್ರೀ ಸೋಮನಾಥ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಿ.ರವೀಂದ್ರನಾಥ ರೈ, ದ.ಕ ಧಾರ್ಮಿಕ ಪರಿಷತ್ ಸದಸ್ಯ ಗೋಪಾಲ ಕುತ್ತಾರ್, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್., ದ.ಕ. ಜಿಲ್ಲಾ ಪಂಚಾಯಿತಿಯ ಮಾಜಿ ಸದಸ್ಯ ವಿನಯ ನಾಯ್ಕ್ ತಲಪಾಡಿ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಉಷಾ ಬಿ. ಶೆಟ್ಟಿ ನಾರ್ಲ ತಲಪಾಡಿ, ಹರ್ಷಿತ್ ಬಿ. ಶೆಟ್ಟಿ, ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ರಾಮಮನೋಹರ್ ರೈ, ಪ್ರಧಾನ ಅರ್ಚಕ ಗಣೇಶ್ ಭಟ್, ತಲಪಾಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಸುರೇಶ್ ಆಳ್ವ ಸಾಂತ್ಯಗುತ್ತು , ಜಯರಾಜ್ ಸಾಲ್ಯಾನ್, ದಾಮೋದರ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
Mangalore Grand program to be held on may 6th at Shri Durga Parameshwari Temple Talapady.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 10:40 pm
Mangalore Correspondent
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
15-07-25 10:57 pm
HK News Desk
Lawrence Bishnoi, Bangalore, Crime: ಡಾನ್ ಲಾರೆ...
15-07-25 06:52 pm
Mangalore, Moodbidri college, Rape, Blackmail...
15-07-25 06:07 pm
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm
Mangalore Police, Arrest, NITTE College Stude...
15-07-25 01:13 pm