ಎಂಬಿಎ ಕಲಿತರೂ ಕೆಲಸ ಸಿಗದ ಕೊರಗು ; ಮನನೊಂದು ಸಾವಿಗೆ ಶರಣಾದ ಉಪ್ಪಿನಂಗಡಿಯ ಯುವತಿ ! 

12-05-22 02:45 pm       Udupi Correspondent   ಕರಾವಳಿ

ಎಂಬಿಎ ಪದವಿ ಪಡೆದಿದ್ದರೂ ವಿದ್ಯಾರ್ಹತೆಗೆ ತಕ್ಕ ಉದ್ಯೋಗ ಸಿಕ್ಕಿಲ್ಲ ಎಂಬ ಕೊರಗಿನಲ್ಲಿ ಯುವತಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಕಾಪು ತಾಲೂಕಿನಲ್ಲಿ ನಡೆದಿದೆ.

ಉಡುಪಿ, ಮೇ 12:  ಎಂಬಿಎ ಪದವಿ ಪಡೆದಿದ್ದರೂ ವಿದ್ಯಾರ್ಹತೆಗೆ ತಕ್ಕ ಉದ್ಯೋಗ ಸಿಕ್ಕಿಲ್ಲ ಎಂಬ ಕೊರಗಿನಲ್ಲಿ ಯುವತಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಕಾಪು ತಾಲೂಕಿನಲ್ಲಿ ನಡೆದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಮೂಲದ ಸಹನಾ (23) ಆತ್ಮಹತ್ಯೆ ಮಾಡಿಕೊಂಡ ಯುವತಿ. ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಒಂದೂವರೆ ವರ್ಷದ ಹಿಂದೆ ಎಂಬಿಎ ಪದವಿ ಪೂರೈಸಿದ್ದಳು. ಪದವಿ ಬಳಿಕ ಸರಿಯಾದ ಕೆಲಸ ಸಿಕ್ಕಿರಲಿಲ್ಲ. ಇತ್ತೀಚೆಗೆ ಏಪ್ರಿಲ್ 30 ರಂದು ಶಿರ್ವ ಸಮೀಪದ ಕಟ್ಟಿಂಗೇರಿ ಗ್ರಾಮದ ಸಹೋದರಿ ಸೌಮ್ಯಾ ಅವರ ಮನೆಗೆ ಬಂದಿದ್ದ ಸಹನಾ ಅದೇ ದಿನ ರಾತ್ರಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು. 

ಮೇ 1ರ ಬೆಳಗ್ಗೆ ಸಹನಾ ವಿಪರೀತ ವಾಂತಿ ಮಾಡಿದ್ದರಿಂದ ಆಕೆಯನ್ನು ಉಡುಪಿ ನಗರದ ಮಿಷನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ನಂತರ ಮಣಿಪಾಲ ಆಸ್ಪತ್ರೆಗೆ ಸೇರಿಸಲಾಗಿತ್ತು. ಆಕೆಯ ಸ್ಥಿತಿ ಚಿಂತಾಜನಕ ಹಂತಕ್ಕೆ ತಲುಪಿದ್ದರಿಂದ ಮೇ 7 ರಂದು ಉಡುಪಿಯ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಮೇ 9 ರಂದು ಯುವತಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾಳೆ. ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

23 year old girl from Uppinangady commits suicide at Udupi. The deceased has been identified as Sahana.