ಬ್ರೇಕಿಂಗ್ ನ್ಯೂಸ್
19-05-22 11:06 am Mangalore Correspondent ಕರಾವಳಿ
ಮಂಗಳೂರು, ಮೇ 19: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಬಿರುಸುಗೊಂಡಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಜಿಲ್ಲೆಯಾದ್ಯಂತ ಮೇ 19 ರಂದು ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಆದೇಶ ಮಾಡಿದ್ದಾರೆ.
ಮಂಗಳೂರು ಸೇರಿದಂತೆ ಜಿಲ್ಲೆಯಾದ್ಯಂತ ಜಿಟಿ ಜಿಟಿ ಮಳೆಯಾಗುತ್ತಿದ್ದು ಮುಂಗಾರು ಆರಂಭದ ಸುಳಿವು ನೀಡಿದೆ. ಎರಡು ದಿನಗಳಿಂದ ಇದೇ ಮಾದರಿಯಲ್ಲಿ ಮಳೆಯಾಗುತ್ತಿದ್ದು ಇನ್ನೂ ಎರಡು ಮಳೆ ಸುರಿಯುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.



ಗ್ರಾಮಾಂತರ ಪ್ರದೇಶಗಳಲ್ಲಿ ಮಕ್ಕಳು ಶಾಲೆಗೆ ತೆರಳುವುದು ಕಷ್ಟವಾಗಿದೆ ಎನ್ನುವ ವರದಿಗಳನ್ನು ಆ ಭಾಗದ ಅಧಿಕಾರಿಗಳು ನೀಡಿದ್ದರಿಂದ ಶಾಲೆಗೆ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಆದರೆ ಜಿಲ್ಲಾಧಿಕಾರಿ ಆದೇಶ ಹೊರಬೀಳುವುದು ಒಂಬತ್ತು ಗಂಟೆ ಆಗಿದ್ದರಿಂದ ನಗರ ಪ್ರದೇಶದಲ್ಲಿ ಹೆಚ್ಚಿನ ಕಡೆ ಮಕ್ಕಳು ಶಾಲೆ ಸೇರಿದ್ದಾರೆ. ಜಿಲ್ಲಾಧಿಕಾರಿ ರಜೆ ಕೊಟ್ಟರೂ, ಮಕ್ಕಳನ್ನು ಮರಳಿ ಕರೆತರುವುದೇ, ಬಿಡುವುದೇ ಅನ್ನುವ ಜಿಜ್ಞಾಸೆಗೆ ಬೀಳುವಂತಾಗಿದೆ.



ಕರಾವಳಿಯಾದ್ಯಂತ ಜಿಟಿ ಜಿಟಿ ಮಳೆ ಸುರಿಯುತ್ತಿದ್ದು ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮೇ 20ರ ವೇಳೆಗೆ ಮುಂಗಾರು ಪ್ರವೇಶಿಸುವುದು ಖಚಿತವಾಗಿದೆ. ಕರ್ನಾಟಕದ ಕರಾವಳಿ ಮತ್ತು ಮಲೆನಾಡಿನಲ್ಲಿ ಜಿಟಿ ಜಿಟಿ ಮಳೆ ಶುರುವಾಗಿದೆ. ಈ ರೀತಿಯ ಮಳೆಯಿಂದ ಯಾವುದೇ ಸಮಸ್ಯೆ ಆಗಿಲ್ಲ.
Deputy commissioner (DC) Dr Rajendra K V declared a holiday to schools on Thursday May 19 in Dakshina Kannada Mangalore due to incessant rains. The whole district is being battered by heavy downpour due to the low pressure that is developed in Bay of Bengal. Normal life is thrown out of gear due to the rains that lashed overnight in the district on Wednesday May 18.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm