ಬ್ರೇಕಿಂಗ್ ನ್ಯೂಸ್
20-05-22 08:05 pm Mangalore Correspondent ಕರಾವಳಿ
ಬೆಳ್ತಂಗಡಿ, ಮೇ 20 : ಬೆಳ್ತಂಗಡಿ ಶಾಸಕ ಹರೀಶ ಪೂಂಜ ಗೋಣಿ ಚೀಲದಲ್ಲಿ ಹಣ ತರುತ್ತಾರೆ. ಶಾಸಕರ ಕಚೇರಿ, ಮನೆಗೆ ಬಂದವರಿಗೆ ಲಕ್ಷಾಂತರ ರೂಪಾಯಿ ಹಣವನ್ನು ನೀಡುತ್ತಾರೆ ಎಂದು ಹೇಳಿ ಬೆಳ್ತಂಗಡಿ ಶಾಸಕರನ್ನು ಹೊಗಳುವ ಬಿಜೆಪಿ ಕಾರ್ಯಕರ್ತನ ಭಾಷಣ ವೈರಲ್ ಆಗಿದ್ದು ಶಾಸಕರನ್ನು ಇಕ್ಕಟ್ಟಿಗೆ ಸಿಲುಕಿಸಿದೆ.
ಈ ವಿಡಿಯೋ ಆಧರಿಸಿ ಶಾಸಕ ಹರೀಶ್ ಪೂಂಜ ವಿರುದ್ಧ ಬೆಳ್ತಂಗಡಿಯ ಕಮ್ಯುನಿಸ್ಟ್ ಕಾರ್ಯಕರ್ತನೊಬ್ಬ ಇಡಿ ಮತ್ತು ಎಸಿಬಿಗೆ ದೂರು ಸಲ್ಲಿಸಿದ್ದು ಕುತೂಹಲಕ್ಕೆ ಕಾರಣವಾಗಿದೆ. ಕಮ್ಯುನಿಸ್ಟ್ ಪಕ್ಷದ ಕಾರ್ಯಕರ್ತ ಶೇಖರ್ ಲಾಯ್ಲ ಎಂಬವರು ಪ್ರಿವೆನ್ಷನ್ ಆಫ್ ಮನಿ ಲಾಂಡ್ರಿಂಗ್ ಆಕ್ಟ್ ಕಾಯ್ದೆಯ ಕಲಂ ಮೂರರ ಅಡಿಯಲ್ಲಿ ದೂರು ದಾಖಲಿಸಬೇಕು ಎಂದು ಕೋರಿದ್ದಾರೆ.
ಬೆಳ್ತಂಗಡಿಯ ಬಳಂಜ ಗ್ರಾಮದ ನಾರಾಯಣಗುರು ಸಭಾಭವನದಲ್ಲಿ ಇತ್ತೀಚೆಗೆ ಭಜನಾ ಸ್ಪರ್ಧೆಯ ಸಮಾರೋಪದಲ್ಲಿ ಭಾಗವಹಿಸಿದ ಹರೀಶ್ ಪೂಂಜಾ ಅವರನ್ನು ಬಿಜೆಪಿ ಕಾರ್ಯಕರ್ತ ಹರೀಶ್ ವೈ ಚಂದ್ರಮ ಎಂಬವರು ಹೊಗಳಿ ಭಾಷಣ ಮಾಡಿದ್ದಾರೆ. ಶಾಸಕ ಹರೀಶ್ ಪೂಂಜರ ಮನೆಗೆ ಹೋಗಿದ್ದಾಗ, ಸಹಾಯ ಕೇಳಿ ಬಂದ ಮಹಿಳೆಗೆ ಶಾಸಕರು ಮನೆಯ ಒಳಗಿಂದ 10,000 ರೂ. ಹಣವನ್ನು ತಂದು ಕೊಟ್ಟಿದ್ದಾರೆ. ನಂತರ ಬಳಂಜದ ಇನ್ನೊಬ್ಬ ವ್ಯಕ್ತಿಗೂ 10 ಸಾವಿರ ರೂಪಾಯಿ ಕೊಟ್ಟಿದ್ದರು. ಶಾಸಕರ ಕಚೇರಿ ಶ್ರಮಿಕಕ್ಕೆ ಹೋಗಿದ್ದಾಗಲೂ ಚೀಲದಲ್ಲಿ ದೊಡ್ಡ ಮೊತ್ತದ ಹಣವನ್ನು ತಂದು ಕೊಡುತ್ತಾರೆ. ನಾನು ನೋಡಿದ ಸತ್ಯವನ್ನು ಹೇಳುತ್ತಿದ್ದೇನೆ. ಹಿಂದೆಂದೂ ಬೇರೆ ಯಾವುದೇ ಶಾಸಕರು ಇಷ್ಟೊಂದು ಉದಾರಿಯಾಗಿ ಹಣವನ್ನು ನೀಡುತ್ತಿರಲಿಲ್ಲ. ಅಭಿವೃದ್ಧಿ ಕಾರ್ಯವನ್ನೂ ಮಾಡಿರಲಿಲ್ಲ ಎಂದು ಹೇಳಿಕೆ ನೀಡಿದ್ದಾರೆ.
ಸಾರ್ವಜನಿಕ ವೇದಿಕೆಯಲ್ಲಿ ಬಿಜೆಪಿ ಕಾರ್ಯಕರ್ತನೊಬ್ಬ ಚೀಲದಲ್ಲಿ ಹಣ ತರುತ್ತಿರುವ ಕುರಿತು ಹೇಳಿಕೆ ನೀಡಿರುವುದರಿಂದ ಹಣದ ಮೂಲ ಬಹಿರಂಗವಾಗಬೇಕು. ಹೀಗಾಗಿ ಶಾಸಕರ ಕಚೇರಿ ಹಾಗೂ ಮನೆಯನ್ನು ಶೋಧ ನಡೆಸಬೇಕು. ಪ್ರಧಾನಿ ಮೋದಿ ನೋಟು ಅಮಾನ್ಯೀಕರಣ ಮಾಡಿದ ಬಳಿಕ ಅಗತ್ಯಕ್ಕಿಂತ ಹೆಚ್ಚು ಹಣವನ್ನು ಇಟ್ಟುಕೊಳ್ಳುವಂತಿಲ್ಲ. ಆದರೆ ಇಲ್ಲಿನ ಶಾಸಕರು ಇಷ್ಟೊಂದು ಹಣವನ್ನು ಹೇಗೆ ಇಟ್ಟುಕೊಂಡಿದ್ದಾರೆ ಎಂದು ಶೇಖರ್ ಲಾಯ್ಲ ಪ್ರಶ್ನೆ ಮಾಡಿದ್ದಾರೆ.
Belthangady MLA Harish Poonja gets money to home in Gunny Bags, speech video goes viral. A speech made a BJP member stating Harish Poonja also shares his money to his associates in lakhs goes viral. A case has been filed to the ACB against MLA by Communist party secretary Shekar Laila.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 04:38 pm
HK News Desk
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm