JNU ಕನ್ನಡ ಭಾಷಾ ವಿಭಾಗದ ಮುಖ್ಯಸ್ಥರಾಗಿ ಮೈಸೂರಿನ ಡಾ.ವಿಶ್ವನಾಥ್ ನೇಮಕ

22-08-20 04:40 pm       Mysore Reporter   ಸ್ಪೆಷಲ್ ಕೆಫೆ

ನವದೆಹಲಿಯ ಪ್ರತಿಷ್ಠಿತ ಜವಾಹರಲಾಲ್‌ ನೆಹರೂ ವಿಶ್ವವಿದ್ಯಾಲಯದ, ‘ಭಾರತೀಯ ಭಾಷಾ ಕೇಂದ್ರ ಮತ್ತು ಸಾಹಿತ್ಯ ಮತ್ತು ಸಂಸ್ಕೃತಿ ಅಧ್ಯಯನ ಕನ್ನಡ ಭಾಷಾ ವಿಭಾಗದ ಪ್ರಾಧ್ಯಾಪಕ ಹಾಗೂ ಮುಖ್ಯಸ್ಥರಾಗಿ ಡಾ.ವಿಶ್ವನಾಥ್ ನೇಮಕಗೊಂಡಿದ್ದಾರೆ.

ಮೈಸೂರು, ಆಗಸ್ಟ್‌ 22: ನವದೆಹಲಿಯ ಪ್ರತಿಷ್ಠಿತ ಜವಾಹರಲಾಲ್‌ ನೆಹರೂ ವಿಶ್ವವಿದ್ಯಾಲಯದ, ‘ಭಾರತೀಯ ಭಾಷಾ ಕೇಂದ್ರ ಮತ್ತು ಸಾಹಿತ್ಯ ಮತ್ತು ಸಂಸ್ಕೃತಿ ಅಧ್ಯಯನ’ ಕೇಂದ್ರದ (ಎಸ್‌ಎಲ್‌ಎಲ್‌ ಅಂಡ್‌ ಸಿಎಸ್‌) ಕನ್ನಡ ಭಾಷಾ ವಿಭಾಗದ ಪ್ರಾಧ್ಯಾಪಕ ಹಾಗೂ ಮುಖ್ಯಸ್ಥರಾಗಿ ಡಾ.ವಿಶ್ವನಾಥ್ ನೇಮಕಗೊಂಡಿದ್ದಾರೆ.

ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಹೊಳಗಳರಹಳ್ಳಿ ಗ್ರಾಮದವರಾದ ವಿಶ್ವನಾಥ್, ಸದ್ಯ ಮೈಸೂರಿನ ಮಹಾರಾಜ ಪದವಿ ಕಾಲೇಜಿನಲ್ಲಿ ಕನ್ನಡ ವಿಭಾಗದ ಮುಖ್ಯಸ್ಥರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇವರು 27 ವರ್ಷಗಳ ಬೋಧನಾ ಅನುಭವ ಹೊಂದಿದ್ದು, 14 ಜನರಿಗೆ ಪಿಎಚ್‌.ಡಿ ಪ್ರಬಂಧ ಮಂಡಿಸಲು ಮಾರ್ಗದರ್ಶಕರಾಗಿದ್ದಾರೆ.

ಈ ಹಿಂದೆ ಮುಖ್ಯಸ್ಥರಾಗಿದ್ದ ಡಾ.ಪುರುಷೋತ್ತಮ ಬಿಳಿಮಲೆ ಅವರ ಅವಧಿ ಆ.20ಕ್ಕೆ ಪೂರ್ಣಗೊಂಡಿದ್ದು, 36 ಜನರು ಮುಖ್ಯಸ್ಥರ ಹುದ್ದೆಗಾಗಿ ಸಂದರ್ಶನದಲ್ಲಿ ಭಾಗಿಯಾಗಿದ್ದರು. ಅದರಲ್ಲಿ ಡಾ.ವಿಶ್ವನಾಥ್ ಆಯ್ಕೆಯಾಗಿದ್ದಾರೆ.