ಬ್ರೇಕಿಂಗ್ ನ್ಯೂಸ್
11-08-22 09:12 pm Source: Vijayakarnataka ಕ್ರೀಡೆ
ಹೊಸದಿಲ್ಲಿ: ಕಳೆದ ಹಲವು ದಿನಗಳಿಂದ ವಿಶ್ರಾಂತಿ ಪಡೆದಿದ್ದ ಟೀಮ್ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ 2022ರ ಏಷ್ಯಾ ಕಪ್ ಟೂರ್ನಿಯ ನಿಮಿತ್ತ ಗುರುವಾರ ತಯಾರಿ ಆರಂಭಿಸಿದ್ದಾರೆ. ಸ್ಪ್ರಿಂಟ್ ಮಾಡುತ್ತಿರುವ ವಿಡಿಯೋವನ್ನು ಬಲಗೈ ಬ್ಯಾಟ್ಸ್‌ಮನ್ ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಹಂಚಿಕೊಂಡಿದ್ದಾರೆ.
ಇಂಗ್ಲೆಂಡ್ ವಿರುದ್ಧ ಸೀಮಿತ ಓವರ್‌ಗಳ ಸರಣಿಯ ಬಳಿಕ ವಿರಾಟ್ ಕೊಹ್ಲಿ, ಈಗಾಗಲೇ ಮುಗಿದಿರುವ ವೆಸ್ಟ್ ಇಂಡೀಸ್ ಪ್ರವಾಸ ಹಾಗೂ ಮುಂಬರುವ ಜಿಂಬಾಬ್ವೆ ಪ್ರವಾಸಕ್ಕೆ ವಿಶ್ರಾಂತಿ ತೆಗೆದುಕೊಂಡಿದ್ದಾರೆ. ಇನ್ನು ಆಗಸ್ಟ್ 27 ರಂದು ಆರಂಭವಾಗುವ ಏಷ್ಯಾ ಕಪ್ ಟೂರ್ನಿಗೆ ಇನ್ನು ಕೆಲವೇ ದಿನಗಳು ಮಾತ್ರ ಬಾಕಿ ಇವೆ. ಈ ಹಿನ್ನೆಲೆಯಲ್ಲಿ ಅವರು ತಯಾರಿ ಆರಂಭಿಸಿದ್ದಾರೆ.
ಅದರಂತೆ ಗುರುವಾರ ಒಳಾಂಗಣದಲ್ಲಿ ಸ್ಟಂಪ್ಸ್‌ಗಳ ನಡುವೆ ಸ್ಪ್ರಿಂಟ್ ಮಾಡುತ್ತಿರುವ ವಿಡಿಯೋವನ್ನು ವಿರಾಟ್ ಕೊಹ್ಲಿ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯ ಸ್ಟೋರಿಯಲ್ಲಿ ಹಂಚಿಕೊಂಡಿದ್ದಾರೆ. ಅಂದಹಾಗೆ ಚುಟುಕು ಸ್ವರೂಪದಲ್ಲಿನ ತಮ್ಮ ಬ್ಯಾಟಿಂಗ್ ವೈಫಲ್ಯದಿಂದಾಗಿ ವಿರಾಟ್ ಕೊಹ್ಲಿ ಸಾಕಷ್ಟು ಟೀಕೆಗಳಿಗೆ ಒಳಗಾಗಿದ್ದಾರೆ.
ಮುಂಬರುವ ಏಷ್ಯಾ ಕಪ್ ಟೂರ್ನಿಯ ನಿಮಿತ್ತ ಬಿಸಿಸಿಐ ಆಯ್ಕೆ ಸಮಿತಿಯು ಸೋಮವಾರ 15 ಸದಸ್ಯರ ಭಾರತ ತಂಡವನ್ನು ಪ್ರಕಟಿಸಿತ್ತು. ಸತತ ವೈಫಲ್ಯದ ಹೊರತಾಗಿಯೂ ವಿರಾಟ್ ಕೊಹ್ಲಿಗೆ ತಂಡದಲ್ಲಿ ಸ್ಥಾನ ಕಲ್ಪಿಸಲಾಗಿದೆ. ಆದರೆ, ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್ ಹಾಗೂ ದೀಪಕ್ ಚಹರ್ ಅವರನ್ನು ಸ್ಟ್ಯಾಂಡ್ ಬೈ ಆಗಿ ಉಳಿಸಿಕೊಳ್ಳಲಾಗಿದೆ.
ಏಷ್ಯಾ ಕಪ್ ವಿರಾಟ್ ಕೊಹ್ಲಿಗೆ ನಿರ್ಣಾಯಕ: ಅಕ್ಟೋಬರ್-ನವೆಂಬರ್ ಅವಧಿಯಲ್ಲಿ ಆಸ್ಟ್ರೇಲಿಯಾ ಆತಿಥ್ಯದಲ್ಲಿ ನಡೆಯುವ 2022ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿ ನಿಮಿತ್ತ ಏಷ್ಯಾ ಕಪ್ ಟೂರ್ನಿಯು ವಿರಾಟ್‌ಕೊಹ್ಲಿಗೆ ಪಾಲಿಗೆ ಅತ್ಯಂತ ನಿರ್ಣಾಯಕವಾಗಿದೆ. ಈ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ತೋರುವಲ್ಲಿ ವಿಫಲರಾದರೆ, ಅವರು ಟಿ20 ವಿಶ್ವಕಪ್ ಭಾರತ ತಂಡದಲ್ಲಿನ ತಮ್ಮ ಸ್ಥಾನಕ್ಕೆ ಅಪಾಯ ಎದುರಾಗಬಹುದು. ಏಕೆಂದರೆ ವಿರಾಟ್ ಕೊಹ್ಲಿ ಸ್ಥಾನ ತುಂಬಲು ಹಲವು ಯುವ ಆಟಗಾರರು ಎದುರು ನೋಡುತ್ತಿದ್ದಾರೆ.
ಕಳೆದ ಹಲವು ದಿನಗಳ ಹಿಂದೆ ಸ್ಟಾರ್ ಸ್ಪೋರ್ಟ್ಸ್ ಜೊತೆ ಮಾತನಾಡಿದ್ದ ವಿರಾಟ್ ಕೊಹ್ಲಿ, "ನನ್ನ ಮುಖ್ಯ ಗುರಿ ಏಷ್ಯಾ ಕಪ್ ಹಾಗೂ ವಿಶ್ವಕಪ್ ಗೆಲ್ಲಲು ಭಾರತ ತಂಡಕ್ಕೆ ನೆರವಾಗುವುದು. ಇದಕ್ಕಾಗಿ ತಾನು ಏನು ಬೇಕಾದರೂ ಮಾಡುತ್ತೇನೆಂದು," ಹೇಳಿದ್ದರು.
2022ರ ಏಷ್ಯಾ ಕಪ್ ಟೂರ್ನಿಯ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪ ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿ.ಕೀ), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಆರ್ ಅಶ್ವಿನ್, ಯುಜ್ವೇಂದ್ರ ಚಹಲ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್ , ಅರ್ಷದೀಪ್ ಸಿಂಗ್, ಅವೇಶ್ ಖಾನ್.
ಸ್ಟ್ಯಾಂಡ್ ಬೈ ಆಟಗಾರರು: ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್ ಹಾಗೂ ದೀಪಕ್ ಚಹರ್.
Former India Captain Virat Kohli Hit The Training Ground Ahead Of Return To T20i Set Up At Asia Cup 2022.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm