ಬ್ರೇಕಿಂಗ್ ನ್ಯೂಸ್
03-09-22 03:36 pm Source: Vijayakarnataka ಕ್ರೀಡೆ
ದುಬೈ: ಎರಡನೇ ಬಾರಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಹಾಗೂ ಪಾಕಿಸ್ತಾನ ನಡುವಣ ಪಂದ್ಯವನ್ನು ಕಣ್ತುಂಬಿಸಿಕೊಳ್ಳಲು ಅಭಿಮಾನಿಗಳಿಗೆ ಮತ್ತೊಂದು ಅವಕಾಶ ಲಭಿಸಿದೆ. ಭಾನುವಾರ ಸಂಜೆ 07: 30ಕ್ಕೆ ದುಬೈ ಇಂಟರ್‌ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡಯುವ 2022ರ ಏಷ್ಯಾ ಕಪ್ ಟೂರ್ನಿಯ ಸೂಪರ್-4ರ ಹಂತದ ಪಂದ್ಯದಲ್ಲಿ ಉಭಯ ತಂಡಗಳು ಮುಖಾಮುಖಿ ಕಾದಾಟ ನಡೆಸಲಿವೆ.
ಭಾರತ ತಂಡ ಟೂರ್ನಿಯ 'ಎ' ಗುಂಪಿನಲ್ಲಿ ಆಡಿದ ಎರಡೂ ಪಂದ್ಯಗಳಲ್ಲಿ ಗೆಲುವು ಪಡೆಯುವ ಮೂಲಕ ಸೂಪರ್-4ರ ಹಂತಕ್ಕೆ ಪ್ರವೇಶ ಮಾಡಿತ್ತು. ಆದರೆ, ಪಾಕಿಸ್ತಾನ ಮೊದಲನೇ ಪಂದ್ಯದಲ್ಲಿ ಭಾರತ ತಂಡದ ವಿರುದ್ಧ ಸೋತರೂ, ಶುಕ್ರವಾರ ತನ್ನ ಎರಡನೇ ಪಂದ್ಯದಲ್ಲಿ ಹಾಂಕಾಂಗ್ ವಿರುದ್ಧ 155 ರನ್‌ಗಳ ಅಂತರದಲ್ಲಿ ಭರ್ಜರಿ ಗೆಲುವು ಪಡೆದಿತ್ತು. ಆ ಮೂಲಕ ಸೂಪರ್-4ರ ಹಂತಕ್ಕೆ ಪ್ರವೇಶಿಸಿತ್ತು.
ಮೊದಲನೇ ಪಂದ್ಯದಲ್ಲಿ ಭಾರತದ ವಿರುದ್ಧ 5 ವಿಕೆಟ್‌ಗಳ ಸೋಲು ಅನುಭವಿಸಿದ್ದ ಪಾಕಿಸ್ತಾನ ತಂಡ, ಹಾಂಕಾಂಗ್ ವಿರುದ್ಧ ಭರ್ಜರಿ ಗೆಲುವಿನ ಮೂಲಕ ವಿಶ್ವಾಸವನ್ನು ಹೆಚ್ಚಿಸಿಕೊಂಡಿದೆ. ಆ ಮೂಲಕ ಟೀಮ್ ಇಂಡಿಯಾ ವಿರುದ್ದ ಸೂಪರ್-4ರ ಹಂತದಲ್ಲಿ ಸೇಡು ತೀರಿಸಿಕೊಳ್ಳಲು ಎದುರು ನೋಡುತ್ತಿದೆ.
ಭಾರತ ತಂಡದ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳು ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನ ತೋರುತ್ತಿದ್ದಾರೆ. ಆದರೆ, ಓಪನರ್‌ಗಳಾದ ಕೆ.ಎಲ್ ರಾಹುಲ್ ಹಾಗೂ ರೋಹಿತ್ ಶರ್ಮಾ ಅವರಿಂದ ಇನ್ನೂ ಹೇಳಿಕೊಳ್ಳುವಂಥಾ ಪ್ರದರ್ಶನ ಮೂಡಿ ಬಂದಿಲ್ಲ. ಅದರಲ್ಲೂ ಕೆ.ಎಲ್ ರಾಹುಲ್ ಪಾಕಿಸ್ತಾನ ವಿರುದ್ಧ ಗೋಲ್ಡನ್ ಡಕ್‌ಔಟ್ ಆಗಿದ್ದರೆ, ಹಾಂಕಾಂಗ್ ವಿರುದ್ಧ 34 ರನ್ ಗಳಿಸಲು 39 ಎಸೆತಗಳನ್ನು ತೆಗೆದುಕೊಂಡಿದ್ದರು.
ಪಾಕ್ ವಿರುದ್ಧದ ಪಂದ್ಯಕ್ಕೆ ಎಡಗೈ ಹಾಗೂ ಬಲಗೈ ಬ್ಯಾಟ್ಸ್‌ಮನ್‌ಗಳ ಕಾಂಬಿನೇಷನ್ ಅನ್ನು ಟೀಮ್ ಮ್ಯಾನೇಜ್‌ಮೆಂಟ್ ಬಯಸಿದರೆ, ಕೆ.ಎಲ್ ರಾಹುಲ್ ಅವರು ಬೆಂಚ್ ಕಾಯುವ ಮೂಲಕ ರಿಷಭ್ ಪಂತ್‌ಗೆ ತನ್ನ ಸ್ಥಾನವನ್ನು ಬಿಟ್ಟುಕೊಡಬಹುದು.
ಮತ್ತೊಂದೆಡೆ ತಮ್ಮ ಬಲ ಮೊಣಕಾಲಿಗೆ ಗಾಯವಾಗಿರುವ ಹಿನ್ನೆಲೆಯಲ್ಲಿ ರವೀಂದ್ರ ಜಡೇಜಾ ಅವರು ಟೂರ್ನಿಯ ಇನ್ನುಳಿದ ಭಾಗದಿಂದ ಹೊರ ನಡೆದಿದ್ದಾರೆ. ಅವರ ಸ್ಥಾನಕ್ಕೆ ಅಕ್ಷರ್ ಪಟೇಲ್ ತಂಡಕ್ಕೆ ಸೇರ್ಪಡೆಯಾಗಿದ್ದು, ನೇರವಾಗಿ ಪ್ಲೇಯಿಂಗ್‌ಗೆ ಸೇರಿಕೊಳ್ಳುವ ಸಾಧ್ಯತೆ ಇದೆ. ಆ ಮೂಲಕ ಪಾಕ್ ವಿರುದ್ಧದ ಪಂದ್ಯಕ್ಕೆ ಭಾರತ ತಂಡದ ಪ್ಲೇಯಿಂಗ್ ಇಲೆವೆನ್‌ನಲ್ಲಿ ನಾವು ಎರಡು ಬದಲಾವಣೆ ನಿರೀಕ್ಷಿಸಬಹುದು.
ಪಿಚ್ ರಿಪೋರ್ಟ್: ಭಾರತ ತಂಡ ಸೂಪರ್-4ರ ತನ್ನ ಮೊದಲನೇ ಪಂದ್ಯವನ್ನು ಕೂಡ ದುಬೈ ಇಂಟರ್‌ನ್ಯಾಷನಲ್ ಸ್ಟೇಡಿಯಂನಲ್ಲಿಯೇ ಆಡಲಿದೆ. ಈಗಾಗಲೇ ಈ ಮೈದಾನದಲ್ಲಿ ಎರಡು ಪಂದ್ಯಗಳನ್ನು ಆಡಿರುವ ಅನುಭವವನ್ನು ಹೊಂದಿರುವ ಟೀಮ್ ಇಂಡಿಯಾ ಭಾನುವಾರದ ಪಂದ್ಯದಲ್ಲಿ ಹೇಗೆ ಆಡಬೇಕೆಂದು ಅರಿತುಕೊಂಡಿದೆ. ಅಂದಹಾಗೆ ಇಲ್ಲಿನ ಪಿಚ್‌ನಲ್ಲಿ ಹೊಸ ಚೆಂಡಿನಲ್ಲಿ ಸ್ವಿಂಗ್ ಹಾಗೂ ಬೌನ್ಸ್ ಇದ್ದೇ ಇರುತ್ತದೆ. ಹಾಗಾಗಿ ಬ್ಯಾಟ್ಸ್‌ಮನ್‌ಗಳು ಆರಂಭದಲ್ಲಿ ಸ್ವಲ್ಪ ಎಚ್ಚರಿಕೆಯಿಂದ ಆಡಬೇಕಾಗುತ್ತದೆ. ಇಲ್ಲಿನ ಪಿಚ್‌ಗೆ ಬ್ಯಾಟ್ಸ್‌ಮನ್‌ಗಳು ಹೊಂದಾಣಿಕೆ ಸಾಧಿಸಿದರೆ, ದೊಡ್ಡ ಮೊತ್ತವನ್ನು ಕಲೆ ಹಾಕಬಹುದಾಗಿದೆ. ಮಧ್ಯಮ ಓವರ್‌ಗಳಲ್ಲಿ ಸ್ಪಿನ್ನರ್‌ಗಳು ಕೂಡ ಪ್ರಾಬಲ್ಯ ಸಾಧಿಸಬಹುದಾಗಿದೆ.
ಭಾರತ: ರೋಹಿತ್ ಶರ್ಮಾ(ನಾಯಕ), ಕೆ.ಎಲ್ ರಾಹುಲ್/ರಿಷಭ್ ಪಂತ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್(ವಿ.ಕೀ), ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಆವೇಶ್ ಖಾನ್, ಅರ್ಷದೀಪ್ ಸಿಂಗ್, ಯುಜ್ವೇಂದ್ರ ಚಹಲ್
ಪಾಕಿಸ್ತಾನ: ಮೊಹಮ್ಮದ್ ರಿಝ್ವಾನ್, ಬಾಬರ್ ಆಝಮ್(ನಾಯಕ), ಫಖಾರ್ ಝಮಾನ್, ಖುಷ್ದಿಲ್ ಶಾ, ಇಫ್ತಿಕರ್ ಅಹ್ಮದ್, ಮೊಹಮ್ಮದ್ ನಜಾಝ್, ಹ್ಯಾರಿಸ್ ರೌಫ್, ನಸೀಮ್ ಶಾ, ಶಹನವಾಝ್ ದಹಾನಿ
ಭಾರತ vs ಪಾಕಿಸ್ತಾನ
ದಿನಾಂಕ: ಸೆ.4, 2022
ಸಮಯ: ಸಂಜೆ 07:30ಕ್ಕೆ (ಭಾರತೀಯ ಕಾಲಮಾನ)
ಸ್ಥಳ: ದುಬೈ ಇಂಟರ್‌ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂ, ದುಬೈ
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್
ಒಟ್ಟು ಆಡಿರುವ ಪಂದ್ಯಗಳು: 16
ಭಾರತ ತಂಡದ ಗೆಲುವು: 9
ಪಾಕಿಸ್ತಾನ ತಂಡದ ಗೆಲುವು: 5
ರದ್ದು: 2
Asia Cup 2022 Ind Vs Pak Match Preview, Ind Vs Pak Probable Playing Xi, Pitch Report, Head Head To Record, Date, Time.
21-04-25 07:10 pm
Bangalore Correspondent
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
21-04-25 02:13 pm
HK News Desk
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
21-04-25 07:08 pm
Mangalore Correspondent
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm