Virat Kohli Might Retire From T20is After World Cup To Extend His Longevity In Other Formats Shoaib Akhtar.
">ಬ್ರೇಕಿಂಗ್ ನ್ಯೂಸ್
15-09-22 04:27 pm Source: Vijayakarnataka ಕ್ರೀಡೆ
ಬೆಂಗಳೂರು: ವಿರಾಟ್ ಕೊಹ್ಲಿ, ಭಾರತ ತಂಡದಲ್ಲಿ ಸ್ಥಾನ ಕಳೆದುಕೊಳ್ಳದಂತೆ ಆಗದೇ ಇರಲಿ. ಅವರು ಶ್ರೇಷ್ಠ ಲಯದಲ್ಲಿ ಇರುವಾಗಲೇ ನಿವೃತ್ತಿ ನೀಡಬೇಕು ಎಂದು ಕೆಲ ದಿನಗಳ ಹಿಂದಷ್ಟೇ ಹೇಳಿದ್ದ ಪಾಕಿಸ್ತಾನ ತಂಡದ ಮಾಜಿ ನಾಯಕ ಹಾಗೂ ಆಲ್‌ರೌಂಡರ್ ಶಾಹಿದ್ ಅಫ್ರಿದಿ ಹೇಳಿಕೆ ನೀಡಿ ಸಿಕ್ಕಾಪಟ್ಟೆ ಟ್ರೋಲಾಗಿದ್ದರು. ಇದೀಗ ಮಾಜಿ ವೇಗಿ ಶೊಯೇಬ್ ಅಖ್ತರ್ ಕೂಡ ಟ್ರೋಲಿಗರ ಕೆಂಗಣ್ಣಿಗೆ ಗುರಿಯಾಗುವ ಸಾಧ್ಯತೆ ಇದೆ. ಏಕೆಂದರೆ ಮುಂಬರುವ ಐಸಿಸಿ ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿ ಬಳಿಕ ವಿರಾಟ್ ಕೊಹ್ಲಿ, ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ ವೃತ್ತಿಬದುಕಿಗೆ ನಿವೃತ್ತಿ ಘೋಷಿಸಲಿದ್ದಾರೆ ಎಂದು ಅಖ್ತರ್ ಭವಿಷ್ಯ ನುಡಿದಿದ್ದಾರೆ.
ಈ ವರ್ಷ ಆಸ್ಟ್ರೇಲಿಯಾದ ಆತಿಥ್ಯದಲ್ಲಿ ಐಸಿಸಿ ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಆಯೋಜನೆ ಆಗಲಿದ್ದು, ಅಕ್ಟೋಬರ್ 16ರಿಂದ ನವೆಂಬರ್ 13ರವರೆಗೆ ಟೂರ್ನಿ ನಡೆಯಲಿದೆ. ಟೂರ್ನಿ ಸಲುವಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ), ಸೆಪ್ಟೆಂಬರ್ 12ರಂದು (ಸೋಮವಾರ) ರೋಹಿತ್ ಶರ್ಮಾ ಸಾರಥ್ಯದ 15 ಆಟಗಾರರ ತಂಡ ಪ್ರಕಟ ಮಾಡಿತ್ತು.
"Virat Kohli may announce his retirement after the next T20 World Cup. Virat Kohli will bid adieu to the T20I cricket career in order to play more time in the remaining two formats of the game. If I had been in Kohli's place, I would have thought about it on a large scale and taken a decision," Akhtar said in an interview to India.com website.
ಇತ್ತೀಚೆಗೆ ಅಂತ್ಯಗೊಂಡ ಏಷ್ಯಾ ಕಪ್ 2022 ಕ್ರಿಕೆಟ್ ಟೂರ್ನಿಯಲ್ಲಿ ಮಿಂಚಿದ ವಿರಾಟ್ ಕೊಹ್ಲಿ, ಆಡಿದ 5 ಪಂದ್ಯಗಳಲ್ಲಿ ಒಮ್ಮೆ ಡಕ್‌ಔಟ್ ಆದರೂ, ಒಟ್ಟಾರೆ 276 ರನ್‌ಗಳನ್ನು ಬಾರಿಸಿದ್ದರು. ಇದರಲ್ಲಿ 2 ಅರ್ಧಶತಕ ಮತ್ತೊಂದು ಅರ್ಧಶಕ ಸೇರಿವೆ. ಅಫಘಾನಿಸ್ತಾನ ಎದುರು ನಡೆದ ಸೂಪರ್ ಫೋರ್ ಪಂದ್ಯದಲ್ಲಿ ಅಜೇಯ 122 ರನ್ ಸಿಡಿಸಿದ ವಿರಾಟ್ ಕೊಹ್ಲಿ, ಟಿ20-ಐ ಕೆರಿಯರ್‌ನಲ್ಲಿ ತಮ್ಮ ಮೊದಲ ಶತಕ ದಾಖಲಿಸಿದರು. ಈ ಮೂಲಕ 2019ರ ನವೆಂಬರ್ ಬಳಿಕ ಅನುಭವಿಸಿದ್ದ ಶತಕಗಳ ಬರಕ್ಕೆ ತೆರೆ ಎಳೆದಿದ್ದಾರೆ. ತಮ್ಮ 71ನೇ ಅಂತಾರಾಷ್ಟ್ರೀಯ ಶತಕ ದಕ್ಕಿಸಿಕೊಂಡು ಹಲವು ದಾಖಲೆಗಳನ್ನು ನುಚ್ಚು ನೂರು ಮಾಡಿದ್ದಾರೆ.
ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿಗೆ ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಕೆ.ಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡ, ರಿಷಭ್ ಪಂತ್ (ವಿಕೆಟ್‌ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್‌ಕೀಪರ್), ಹಾರ್ದಿಕ್ ಪಾಂಡ್ಯ, ಆರ್. ಅಶ್ವಿನ್, ಯುಜ್ವೇಂದ್ರ ಚಹಲ್, ಅಕ್ಷರ್ ಪಟೇಲ್, ಜಸ್‌ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್.
ಕಾಯ್ದಿರಿಸಿದ ಆಟಗಾರರು: ಮೊಹಮ್ಮದ್ ಶಮಿ, ಶ್ರೇಯಸ್ ಅಯ್ಯರ್, ದೀಪಕ್ ಚಹರ್, ರವಿ ಬಿಷ್ಣೋಯ್
ಟೂರ್ನಿ ಅಕ್ಟೋಬರ್ 16ರಿಂದ ನವೆಂಬರ್ 13ರವರೆಗೆ ಆಸ್ಟ್ರೇಲಿಯಾ ಆತಿಥ್ಯದಲ್ಲಿ ನಡೆಯಲಿದ್ದು, ಭಾರತ ತಂಡ ಅಕ್ಟೋಬರ್ 10ಕ್ಕೆ ಕಾಂಗರೂ ನಾಡಿಗೆ ತೆರಳಲಿದೆ.
Virat Kohli Might Retire From T20is After World Cup To Extend His Longevity In Other Formats Shoaib Akhtar.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
21-04-25 02:13 pm
HK News Desk
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm