ಬ್ರೇಕಿಂಗ್ ನ್ಯೂಸ್
28-09-22 01:17 pm Source: Vijayakarnataka ಕ್ರೀಡೆ
ಲಂಡನ್: ಭಾರತ ಮತ್ತು ಪಾಕಿಸ್ತಾನ ನಡುವಣ ದ್ವಿಪಕ್ಷೀಯ ಟೆಸ್ಟ್ ಸರಣಿಯನ್ನು ಆಯೋಜಿಸಲು ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ (ಇಸಿಬಿ) ಔಪಚಾರಿಕ ಪ್ರಸ್ತಾಪ ಮಾಡಿದೆ. ಆದರೆ ಸದ್ಯದಲ್ಲಿ ಇದು ಸಾಧ್ಯವಿಲ್ಲ ಎಂದು ಭಾರತೀಯ ಕ್ರಿಕೆಟ್ ಮಂಡಳಿ (ಬಿಸಿಸಿಐ) ಸ್ಪಷ್ಟ ಪಡಿಸಿದೆ ಕೂಡ. ಬ್ರಿಟಿಷ್ ದೈನಿಕ 'ಟೆಲಿಗ್ರಾಫ್' ವರದಿಯ ಪ್ರಕಾರ, ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿಯ ಉಪಾಧ್ಯಕ್ಷ ಮಾರ್ಟಿನ್ ಡಾರ್ಲೋ ಅವರು ಪ್ರಸ್ತುತ ಟಿ20 ಸರಣಿಯಲ್ಲಿ ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಜೊತೆ ಮಾತುಕತೆ ನಡೆಸಿದರು ಮತ್ತು ಭವಿಷ್ಯದಲ್ಲಿ ಇಂಗ್ಲೆಂಡ್‌ನಲ್ಲಿ ಮೂರು ಪಂದ್ಯಗಳ ಸರಣಿಯನ್ನು ಆಯೋಜಿಸಲು ಪ್ರಸ್ತಾಪಿಸಿದರು.
ಇಸಿಬಿ ತನ್ನ ಲಾಭಕ್ಕಾಗಿ ಈ ಪ್ರಸ್ತಾಪ ಮುಂದಿಟ್ಟಿದೆ. ಅಂದಹಾಗೆ ಮುಂದಿನ ಕೆಲವು ವರ್ಷಗಳಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ಟೆಸ್ಟ್ ಕ್ರಿಕೆಟ್ ಸರಣಿ ಬಿಸಿಸಿಐ ಹೇಳಿದೆ. ಮಂಗಳವಾರ ಗೌಪ್ಯತೆಯ ಷರತ್ತಿನ ಕುರಿತು ಬಿಸಿಸಿಐ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದರು, “ಮೊದಲ ವಿಷಯವೆಂದರೆ ಇಂಡೋ-ಪಾಕ್ ಸರಣಿಗೆ ಸಂಬಂಧಿಸಿದಂತೆ ಇಸಿಬಿ ಪಿಸಿಬಿಯೊಂದಿಗೆ ಮಾತನಾಡಿದ್ದು, ಇದು ಸ್ವಲ್ಪ ವಿಚಿತ್ರವಾಗಿದೆ. ಏನೇ ಆಗಲಿ, ಪಾಕಿಸ್ತಾನ ವಿರುದ್ಧದ ಸರಣಿಯ ನಿರ್ಧಾರವನ್ನು ಬಿಸಿಸಿಐ ನಿರ್ಧರಿಸುವುದಿಲ್ಲ ಆದರೆ ಸರ್ಕಾರವು ನಿರ್ಧರಿಸುತ್ತದೆ. ಯಥಾಸ್ಥಿತಿ ಇನ್ನೂ ಹಾಗೇ ಇದೆ. ಬಹುರಾಷ್ಟ್ರೀಯ ಪಂದ್ಯಗಳಲ್ಲಿ ಮಾತ್ರ ನಾವು ಪಾಕಿಸ್ತಾನದ ವಿರುದ್ಧ ಆಡುತ್ತೇವೆ.
ಭಾರತ ಮತ್ತು ಪಾಕಿಸ್ತಾನ ಕೊನೆಯ ಬಾರಿ 2012ರಲ್ಲಿ ದ್ವಿಪಕ್ಷೀಯ ಸರಣಿಯನ್ನು ಆಡಿದ್ದವು. ಭಾರತದ ಆತಿಥ್ಯದಲ್ಲಿ ನಡೆದ ಸೀಮಿತ ಓವರ್‌ಗಳ ಸರಣಿ ಅದಾಗಿತ್ತು. ಇನ್ನು 2007ರಲ್ಲಿ ಭಾರತ-ಪಾಕ್ ನಡುವೆ ಕೊನೆಯ ಟೆಸ್ಟ್ ಸರಣಿ ನಡೆದಿತ್ತು. ಇದೀಗ ಇದ್ದಕ್ಕಿದ್ದಂತೆ ಭಾರತ-ಪಾಕಿಸ್ತಾನ ನಡುವಣ ಟೆಸ್ಟ್ ಕ್ರಿಕೆಟ್ ಸರಣಿಯನ್ನು ಆಯೋಜಿಸಲು ಇಸಿಬಿ ಮುಂದಾಗಿರುವುದಕ್ಕೆ ಕಾರಣವಾದರೂ ಏನು? ಎಂದು ಡೇಲಿ ಮೇಲ್ ಪ್ರಶ್ನೆ ಕೂಡ ಮಾಡಿದೆ.
"ದಕ್ಷಿಣ ಏಷ್ಯಾ ರಾಷ್ಟ್ರಗಳ ಜನರು ಹೆಚ್ಚಿನ ಜನಸಂಖ್ಯೆಯಲ್ಲಿ ಇಲ್ಲಿದ್ದಾರೆ. ಇದರಿಂದ ಯುಕೆಯಲ್ಲಿ ಈ ಪಂದ್ಯಗಳು ಹೆಚ್ಚಿನ ಸಂಖ್ಯೆಯ ಪ್ರೇಕ್ಷಕರನ್ನು ಆಕರ್ಷಿಸುತ್ತವೆ. ಇದರ ಹೊರತಾಗಿ, ಪಂದ್ಯಗಳಿಗೆ ದೊಡ್ಡ ಪ್ರಾಯೋಜಕತ್ವದ ಹಣ ಕೂಡ ಸಿಗುತ್ತದೆ ಮತ್ತು ಟೆಲಿವಿಷನ್ ಪ್ರಸಾರದಲ್ಲೂ ಸಾಕಷ್ಟು ವೀಕ್ಷಕರು ಕಾಣುತ್ತಾರೆ," ಎಂದು ಇಸಿಬಿ ಹೇಳಿದೆ.
ಈ ನಡುವೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಕೂಡ ಕೂಡ ಭಾರತದ ವಿರುದ್ಧ ತಟಸ್ಥ ಸ್ಥಳದಲ್ಲಿ ಸರಣಿಗಳನ್ನು ಆಡಲು ಒಲವು ಹೊಂದಿಲ್ಲ ಎಂದು ಸ್ಪಷ್ಟಪಡಿಸಿದೆ. ಆದರೆ ಆತಿಥ್ಯ ವಹಿಸಲು ಮುಂದೆ ಬಂದ ಇಸಿಬಿಗೆ ಕೃತಜ್ಞತೆ ಕೂಡ ಸಲ್ಲಿಸಿದೆ, ಇದು ಎರಡೂ ದೇಶಗಳ ಕ್ರಿಕೆಟ್ ಮಂಡಳಿಗಳ ನಡುವೆ ಬೆಳೆಯುತ್ತಿರುವ ನಿಕಟತೆಗೆ ಹಿಡಿದ ಕೈಗನ್ನಡಿ ಆಗಿದೆ.
ಟೆಸ್ಟ್ ಚಾಂಪಿಯನ್‌ಷಿಪ್‌ನಲ್ಲಿ ಭಾರತಕ್ಕೆ 4ನೇ ಸ್ಥಾನ
2021-2023ರ ಸಾಲಿನ ಐಸಿಸಿ ಟೆಸ್ಟ್ ವಿಶ್ವ ಚಾಂಪಿಯನ್‌ಷಿಪ್ ಟೂರ್ನಿಯ ಅಂಕಪಟ್ಟಿಯಲ್ಲಿ ಟೀಮ್ ಇಂಡಿಯಾ ಸದ್ಯ 4ನೇ ಸ್ಥಾನದಲ್ಲಿದೆ. ಈ ಅವಧಿಯಲ್ಲಿ ಭಾರತ ತಂಡ ಆಡಿದ 12 ಪಂದ್ಯಗಳಲ್ಲಿ 6 ಗೆಲುವು, 4 ಸೋಲು ಮತ್ತು 2 ಪಂದ್ಯಗಳಲ್ಲಿ ಡ್ರಾ ಫಲಿತಾಂಶ ಕಂಡಿದೆ. ಮತ್ತೊಂದೆಡೆ ಪಾಕಿಸ್ತಾನ ತಂಡ ಆಡಿದ 9 ಪಂದ್ಯಗಳಲ್ಲಿ 4 ಜಯ, 3 ಸೋಲು ಮತ್ತು 2 ಡ್ರಾ ಫಲಿತಾಂಶದೊಂದಿಗೆ ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದೆ. ಈ ಪಟ್ಟಿಯ ಮೊದಲ ಎರಡು ಸ್ಥಾನಗಳಲ್ಲಿ ಸದ್ಯ ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ತಂಡಗಳಿವೆ.
ಚೊಚ್ಚಲ ಆವೃತ್ತಿಯ ಐಸಿಸಿ ಟೆಸ್ಟ್ ವಿಶ್ವ ಚಾಂಪಿಯನ್‌ಷಿಪ್ ಟೂರ್ನಿಯಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಅಂಕಪಟ್ಟಿಯ ಮೊದಲೆರಡು ಸ್ಥಾನ ಪಡೆದು ಫೈನಲ್ ತಲುಪಿದ್ದವು. 2021ರ ಜೂನ್‌ನಲ್ಲಿ ಕ್ರಿಕೆಟ್ ಕಾಶಿ ಲಾರ್ಡ್ಸ್‌ನಲ್ಲಿ ನಡೆದ ಫೈನಲ್‌ನಲ್ಲಿ ಟೀಮ್ ಇಂಡಿಯಾಗೆ ಸೋಲುಣಿಸಿದ ಕಿವೀಸ್ ಟ್ರೋಫಿ ಗೆದ್ದು ಬೀಗಿತ್ತು.
Ind Vs Pak England Cricket Board Offers To Be Neutral Host For Future India-Pakistan Test Series.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
21-04-25 02:13 pm
HK News Desk
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm