ಬ್ರೇಕಿಂಗ್ ನ್ಯೂಸ್
05-10-22 12:56 pm Source: Vijayakarnataka ಕ್ರೀಡೆ
ಇಂದೋರ್: ಬೆನ್ನು ನೋವಿನ ಗಂಭೀರ ಸಮಸ್ಯೆಯಿಂದ ಬಳಲುತ್ತಿರುವ ಭಾರತ ತಂಡದ ಪ್ರಮುಖ ವೇಗಿ ಜಸ್ಪ್ರೀತ್ ಬುಮ್ರಾ ಅವರು ಮುಂಬರುವ 2022ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಿಂದ ಅಧಿಕೃತವಾಗಿ ಹೊರಬಿದ್ದಿದ್ದಾರೆ. ಈ ಹಿನ್ನೆಲೆಯಲ್ಲಿ ಟೂರ್ನಿ ಆರಂಭಕ್ಕೂ ಎರಡು ವಾರಗಳ ಮೊದಲೇ ಟೀಮ್ ಇಂಡಿಯಾಗೆ ಭಾರಿ ಹಿನ್ನಡೆಯಾಗಿದೆ.
ಜಸ್ಪ್ರೀತ್ ಬುಮ್ರಾ ಅವರ ಅಲಭ್ಯತೆಯು ಭಾರತ ತಂಡದ ಟಿ20 ವಿಶ್ವಕಪ್ ಟೂರ್ನಿಯ ಯೋಜನೆಯಲ್ಲಿ ಭಾರಿ ಹಿನ್ನಡೆಯಾಗಿದೆ. ಅಂದಹಾಗೆ ಭಾರತ ತಂಡ ಅಕ್ಟೋಬರ್ 6 ರಂದು ಆಸ್ಟ್ರೇಲಿಯಾಗೆ ಪ್ರಯಾಣ ಬೆಳೆಸಲಿದೆ. ನಂತರ, ಜಸ್ಪ್ರೀತ್ ಬುಮ್ರಾಗೆ ಬದಲಿ ಆಟಗಾರನನ್ನು ಆಯ್ಕೆ ಮಾಡುತ್ತೇವೆಂದು ನಾಯಕ ರೋಹಿತ್ ಶರ್ಮಾ ಹೇಳಿದ್ದಾರೆ.
ಮಹತ್ವದ ಟೂರ್ನಿಯಲ್ಲಿ ಜಸ್ಪ್ರೀತ್ ಬುಮ್ತಾ ಅವರ ಸ್ಥಾನವನ್ನು ತುಂಬಲು ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ ಹಾಗೂ ದೀಪಕ್ ಚಹರ್ ಎದುರು ನೋಡುತ್ತಿದ್ದಾರೆ. ಈ ಮೂವರಲ್ಲಿ ಒಬ್ಬರಿಗೆ ಟಿ20 ವಿಶ್ವಕಪ್ ಭಾರತ ತಂಡದಲ್ಲಿ ಸ್ಥಾನ ನಿಡಬಹುದೆಂದು ಅಂದಾಜಿಸಲಾಗಿದೆ. ಆದರೆ, ದಕ್ಷಿಣ ಆಫ್ರಿಕಾ ವಿರುದ್ಧ ಮೂರನೇ ಟಿ20 ಪಂದ್ಯದಲ್ಲಿ ಮೊಹಮ್ಮದ್ ಸಿರಾಜ್, ಹರ್ಷಲ್ ಪಟೇಲ್ ಹಾಗೂ ದೀಪಕ್ ಚಹರ್ ಅವರು 40 ಕ್ಕೂ ಹೆಚ್ಚಿನ ರನ್ಗಳನ್ನು ಬಿಟ್ಟುಕೊಟ್ಟಿದ್ದಾರೆ.
ಮಂಗಳವಾರ ಮೂರನೇ ಟಿ20 ಪಂದ್ಯದಲ್ಲಿ ಭಾರತ ತಂಡ 49 ರನ್ಗಳಿಂದ ಸೋಲು ಅನುಭವಿಸಿತು. ಇದರ ಹೊರತಾಗಿಯೂ ಆರಂಭಿಕ ಎರಡು ಪಂದ್ಯಗಳ ಗೆಲುವಿನ ಆಧಾರದ ಮೇಲೆ 2-1 ಅಂತರದಲ್ಲಿ ಟಿ20 ಸರಣಿ ಮುಡಿಗೇರಿಸಿಕೊಂಡಿತು. ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್ನಲ್ಲಿ ಮಾತನಾಡುವಾಗ ರೋಹಿತ್ ಶರ್ಮಾಗೆ ಇದೇ ಪ್ರಶ್ನೆ ಎದುರಾಯಿತು. ಇದಕ್ಕೆ ಪ್ರತಿಕ್ರಿಯಿಸಿದ ಇಂಡಿಯಾ ಕ್ಯಾಪ್ಟನ್, ನಾವು ಆಸ್ಟ್ರೇಲಿಯಾಗೆ ತಲಪಿದ ಬಳಿಕ ಅಲ್ಲಿನ ಕಂಡೀಷನ್ಸ್ ನೋಡಿಕೊಂಡು ಈ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.
"ಜಸ್ಪ್ರೀತ್ ಬುಮ್ರಾ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಿಂದ ಅಧಿಕೃತವಾಗಿ ಹೊರ ಬಿದ್ದಿದ್ದಾರೆ. ಹಾಗಾಗಿ ಆಸ್ಟ್ರೇಲಿಯಾದಲ್ಲಿ ಬೌಲ್ ಮಾಡಿದ ಅನುಭವ ಇರುವ ವೇಗಿಯ ಅಗತ್ಯವಿದೆ. ಯಾವ ಬೌಲರ್ ಆಯ್ಕೆಯಾಗುತ್ತಾರೆ ನನಗೆ ಗೊತ್ತಿಲ್ಲ. ಒಮ್ಮೆ ಆಸ್ಟ್ರೇಲಿಯಾ ತಲುಪಿದ ಬಳಿಕ ಇಲ್ಲಿನ ಕಂಡೀಷನ್ಸ್ ನೋಡಿಕೊಂಡು ಒಬ್ಬರನ್ನು ಆಯ್ಕೆ ಮಾಡುತ್ತೇವೆ," ಎಂದು ರೋಹಿತ್ ಶರ್ಮಾ ತಿಳಿಸಿದ್ದಾರೆ.
ಇದೀಗ ತಂಡದ ಸ್ಟ್ಯಾಂಡ್ ಬೈನಲ್ಲಿ ಮೊಹಮ್ಮದ್ ಶಮಿ ಹಾಗೂ ದೀಪಕ್ ಚಹರ್ ಇದ್ದಾರೆ ಹಾಗೂ ತಂಡದೊಂದಿಗೆ ಆಸ್ಟ್ರೇಲಿಯಾಗೆ ಪ್ರಯಾಣ ಬೆಳೆಸಲಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ದ ಟಿ20 ಸರಣಿಗೆ ಗಾಯಾಳು ಬುಮ್ರಾ ಸ್ಥಾನಕ್ಕೆ ಕೊನೆಯ ಗಳಿಗೆಯಲ್ಲಿ ಮೊಹಮ್ಮದ್ ಸಿರಾಜ್ ಅವರನ್ನು ಆಯ್ಕೆ ಮಾಡಲಾಗಿತ್ತು. ಆದರೆ, ಅವರು ಮೂರನೇ ಟಿ20 ಪಂದ್ಯದಲ್ಲಿ ಹೆಚ್ಚಿನ ರನ್ಗಳನ್ನು ಬಿಟ್ಟುಕೊಟ್ಟಿದ್ದರು.
ಚಹರ್ ಹಾಗೂ ಸಿರಾಜ್ ಅವರಿಗಿಂತ ಮೊಹಮ್ಮದ್ ಶಮಿ ಹೆಚ್ಚಿನ ಅನುಭವವನ್ನು ಹೊಂದಿದ್ದಾರೆ. ಅಂದಹಾಗೆ ಸಿರಾಜ್ 2020-21ರಲ್ಲಿ ಆಸ್ಟ್ರೇಲಿಯಾದಲ್ಲಿ ಟೆಸ್ಟ್ ಗೆಲುವಿನಲ್ಲಿ ಮಹತ್ತರ ಪಾತ್ರವಹಿಸಿದ್ದರು. ಮತ್ತೊಂದೆಡೆ ದೀಪಕ್ ಚಹರ್ ಅವರು ಕಳೆದ ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ಟಿ20 ಸರಣಿಗಳ ಭಾರತ ತಂಡದಲ್ಲಿದ್ದರು. ಈ ಮೂವರು ವೇಗಿಗಳಲ್ಲಿ ಒಬ್ಬರನ್ನು ಬುಮ್ರಾ ಸ್ಥಾನಕ್ಕೆ ಆಯ್ಕೆ ಮಾಡುವ ಸಾಧ್ಯತೆ ಇರುತ್ತದೆ.
Siraj, Shami, Or Chahar? Skipper Rohit Sharma Drops Big Update On Bumrahs Replacement For T20 World Cup.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
17-09-25 12:25 pm
Bangalore Correspondent
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm