ಬ್ರೇಕಿಂಗ್ ನ್ಯೂಸ್
11-10-22 02:16 pm Source: Vijayakarnataka ಕ್ರೀಡೆ
ಪರ್ತ್: ಆಸ್ಟ್ರೇಲಿಯಾ ಆತಿಥ್ಯದಲ್ಲಿ ಅಕ್ಟೋಬರ್ 16 ರಿಂದ ಆರಂಭವಾಗುವ 2022ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೂ ಮೊದಲೇ ಭಾರತ ತಂಡದಲ್ಲಿ ಗಾಯಾಳುಗಳ ಸಮಸ್ಯೆ ಎದುರಾಗಿದೆ. ಕೀ ವೇಗಿ ಜಸ್‌ಪ್ರೀತ್ ಬುಮ್ರಾ, ಸ್ಟಾರ್ ಆಲ್‌ರೌಂಡರ್ ರವೀಂದ್ರ ಜಡೇಜಾ ಗಾಯದಿಂದಾಗಿ ಮಹತ್ವದ ಟೂರ್ನಿಯಿಂದ ಹೊರ ಬಿದ್ದಿದ್ದಾರೆ. ಈ ಹಿನ್ನೆಲೆಯಲ್ಲಿ ಭಾರತ ತಂಡಕ್ಕೆ ಭಾರಿ ಹಿನ್ನಡೆಯಾಗಿದೆ.
ಮತ್ತೊಂದೆಡೆ ಸ್ಟ್ಯಾಂಡ್ ಬೈನಲ್ಲಿದ್ದ ದೀಪಕ್ ಚಹರ್ ಕೂಡ ಟೂರ್ನಿಯಿಂದ ಹೊರ ನಡೆದಿದ್ದಾರೆ. ಈ ಹಿನ್ನೆಲೆಯಲ್ಲಿ ಇವರ ಸ್ಥಾನಕ್ಕೆ ಬಿಸಿಸಿಐ ಯಾರಿಗೆ ಅವಕಾಶ ನೀಡಬಹುದೆಂದು ಕಾದು ನೋಡಬೇಕಾಗಿದೆ. ಅಂದಹಾಗೆ ರವೀಂದ್ರ ಜಡೇಜಾ ಸ್ಥಾನಕ್ಕೆ ಸ್ಪಿನ್ ಆಲ್‌ರೌಂಡರ್ ಅಕ್ಷರ್ ಪಟೇಲ್ ಅವರನ್ನು ತುಂಬಲಾಗಿದೆ.

ಇತ್ತೀಚೆಗೆ ದೈನಿಕ್ ಜಾಗರಣ್ ಸಂದರ್ಶನದಲ್ಲಿ ಯುಜ್ವೇಂದ್ರ ಚಹಲ್ ಭಾರತ ತಂಡ ಎದುರಿಸುತ್ತಿರುವ ಗಾಯದ ಸಮಸ್ಯೆಯ ಬಗ್ಗೆ ಮಾತನಾಡಿದ್ದಾರೆ. ಇದರ ಜೊತೆಗೆ ಟಿ20 ವಿಶ್ವಕಪ್ ಭಾರತ ತಂಡದಲ್ಲಿ ಸ್ಟಾರ್ ಆಲ್‌ರೌಂಡರ್ ರವೀಂದ್ರ ಜಡೇಜಾ ಅವರ ಸ್ಥಾನವನ್ನು ತುಂಬಬಲ್ಲ ಸಾಮರ್ಥ್ಯವಿರುವ ಆಟಗಾರನನ್ನು ಹೆಸರಿಸಿದ್ದಾರೆ.
"ರವೀಂದ್ರ ಜಡೇಜಾ ವಿಶ್ವ ದರ್ಜೆಯ ಬೌಲರ್ ಹಾಗೂ ಇದರ ಜೊತೆಗೆ ಅವರ ಬ್ಯಾಟಿಂಗ್ ಕೂಡ ಅದ್ಭುತವಾಗಿದೆ. ಅಂದಹಾಗೆ ಗಾಯಗಳು ಆಟದ ಒಂದು ಭಾಗವಾಗಿದೆ. ಅವರ ಸ್ಥಾನವನ್ನು ತುಂಬಲು ಯಾರಿಂದಲೂ ಸಾಧ್ಯವಿಲ್ಲ. ಆದರೆ ಅಕ್ಷರ್ ಪಟೇಲ್ ಬೌಲ್ ಮಾಡುತ್ತಿರುವ ಹಾದಿ ನೋಡುತ್ತಿದ್ದರೆ, ಜಡೇಜಾ ಅವರ ಸ್ಥಾನಕ್ಕೆ ಸೂಕ್ತ ಆಟಗಾರ ಲಭಿಸಿದ್ದಾನೆಂದು ನಾನು ಭಾವಿಸುತ್ತೇನೆ. ಅದರಂತೆ ಅಕ್ಷರ್ ಕಳೆದ ಪಂದ್ಯಗಳಲ್ಲಿ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ," ಎಂದು ಯುಜ್ವೇಂದ್ರ ಚಹಲ್ ತಿಳಿಸಿದ್ದಾರೆ.

ಯುಜ್ವೇಂದ್ರ ಚಹಲ್ ಹೇಳಿದಂತೆ ರವೀಂದ್ರ ಜಡೇಜಾ ಅವರ ಸ್ಥಾನವನ್ನು ತುಂಬಬಲ್ಲ ಸಾಮರ್ಥ್ಯ ಅಕ್ಷರ್ ಪಟೇಲ್‌ಗೆ ಇದೆ. ಬೌಲಿಂಗ್ ಜೊತೆಗೆ ಕೆಳ ಮಧ್ಯಮ ಕ್ರಮಾಂಕದಲ್ಲಿ ಅವರು ಅತ್ಯುತ್ತಮವಾಗಿ ಬ್ಯಾಟ್ ಮಾಡಬಲ್ಲರು. ದಕ್ಷಿಣ ಆಫ್ರಿಕಾ ವಿರುದ್ಧ ಕಳೆದ ಟಿ20 ಸರಣಿಯ ಭಾರತ ತಂಡದಲ್ಲಿಯೂ ಅಕ್ಷರ್ ಪಟೇಲ್ ಆಡಿದ್ದರು. ಈ ಸರಣಿಯಲ್ಲಿ ಭಾರತ 2-1 ಗೆದ್ದಿತ್ತು. ಈ ಸರಣಿಯಲ್ಲಿ ಅವರು ಒಟ್ಟು 9 ಓವರ್‌ಗಳನ್ನು ಬೌಲ್ ಮಾಡಿ ಎರಡು ವಿಕೆಟ್ ಪಡೆದಿದ್ದರು ಹಾಗೂ 9.11 ಎಕಾನಮಿಯಲ್ಲಿ ರನ್‌ಗಳನ್ನು ಬಿಟ್ಟುಕೊಟ್ಟಿದ್ದರು.
ಅಭ್ಯಾಸ ಪಂದ್ಯದಲ್ಲಿ ಭಾರತ ತಂಡಕ್ಕೆ ಜಯ: ಟಿ20 ವಿಶ್ವಕಪ್ ಟೂರ್ನಿಯ ಸಲುವಾಗಿ ಆಸ್ಟ್ರೇಲಿಯಾದಲ್ಲಿ ಬೀಡು ಬಿಟ್ಟಿರುವ ಭಾರತ ತಂಡ ಸೋಮವಾರ ವೆಸ್ಟರ್ನ್ ಆಸ್ಟ್ರೇಲಿಯಾ ವಿರುದ್ದ ಅಭ್ಯಾಸ ಪಂದ್ಯವಾಡಿತ್ತು ಹಾಗೂ 13 ರನ್‌ಗಳಿಂದ ಜಯ ಗಳಿಸಿತ್ತು. ಈ ಪಂದ್ಯದಲ್ಲಿ ಅತ್ಯುತ್ತಮ ಬ್ಯಾಟ್ ಮಾಡಿದ್ದ ಸೂರ್ಯಕುಮಾರ್ ಯಾದವ್ 52 ರನ್ ಗಳಿಸಿದರೆ, ಬೌಲಿಂಗ್‌ನಲ್ಲಿ ಮಿಂಚಿದ ಅರ್ಷದೀಪ್ ಸಿಂಗ್ ಕೇವಲ 6 ರನ್ ನೀಡಿ ಪ್ರಮುಖ 3 ವಿಕೆಟ್ ಕಬಳಿಸಿದ್ದರು.
ಅಕ್ಟೋಬರ್ 16 ರಿಂದ 2022ರ ಟಿ20 ವಿಶ್ವಕಪ್ ಟೂರ್ನಿಯ ಮೊದಲು ಸುತ್ತು ಆರಂಭವಾಗಲಿದೆ. ಭಾರತ ತಂಡ ಅಕ್ಟೋಬರ್ 23 ರಂದು ಪಾಕಿಸ್ತಾನ ವಿರುದ್ಧ ಸೂಪರ್ 12ರ ಪಂದ್ಯದಲ್ಲಿ ಸೆಣಸುವ ಮೂಲಕ ಟೂರ್ನಿಯಲ್ಲಿ ತನ್ನ ಅಭಿಯಾನವನ್ನು ಆರಂಭಿಸಲಿದೆ.
ಟಿ20 ವಿಶ್ವಕಪ್ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆ.ಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡ, ರಿಷಭ್ ಪಂತ್ (ವಿಕೆಟ್‌ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್‌ಕೀಪರ್), ಹಾರ್ದಿಕ್ ಪಾಂಡ್ಯ, ಆರ್. ಅಶ್ವಿನ್, ಯುಜ್ವೇಂದ್ರ ಚಹಲ್, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್.
T20 World Cup 2022 Ravindra Jadeja Is A World Class Bowler Yuzvendra Chahal Names India Star To Fill All Rounders Boots At T20 Wc.
24-10-25 06:04 pm
HK News Desk
ಧರ್ಮಸ್ಥಳ ಪ್ರಕರಣಕ್ಕೆ ಕ್ಲೈಮ್ಯಾಕ್ಸ್ ; ಇದೇ ತಿಂಗಳಾ...
24-10-25 01:11 pm
ಪ್ರಿಯಾಂಕ ಖರ್ಗೆ ಹೊಸ ಸಂಪುಟದಲ್ಲಿ ಉಪ ಮುಖ್ಯಮಂತ್ರಿ...
23-10-25 03:42 pm
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
ಸಿಎಂ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಅರ್ಹ ವ್ಯಕ್ತಿ ;...
22-10-25 08:12 pm
24-10-25 05:43 pm
HK News Desk
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
24-10-25 07:57 pm
Mangalore Correspondent
Police Commissioner Sudheer Reddy, Mangalore:...
24-10-25 11:57 am
ಎಸ್ ಸಿಎಸ್ ಆಸ್ಪತ್ರೆಯ 38ನೇ ವರ್ಷದ ಸಂಭ್ರಮಾಚರಣೆ ;...
23-10-25 10:52 pm
ಸತ್ತು ಬದುಕಿದ ಸುದ್ದಿ ಬಗ್ಗೆ ಯೇನಪೋಯ ಆಸ್ಪತ್ರೆ ಸ್ಪ...
23-10-25 10:46 pm
ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾ...
23-10-25 07:35 pm
24-10-25 08:20 pm
Mangalore Correspondent
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am