ಬ್ರೇಕಿಂಗ್ ನ್ಯೂಸ್
13-10-22 01:41 pm Source: Vijayakarnataka ಕ್ರೀಡೆ
ಹೊಸದಿಲ್ಲಿ: ಮುಂಬರುವ 2022ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಭಾರತ ತಂಡದಲ್ಲಿ ಗಾಯಾಳು ಜಸ್‌ಪ್ರೀತ್ ಬುಮ್ರಾ ಸ್ಥಾನಕ್ಕೆ ಮೊಹಮ್ಮದ್ ಶಮಿ ಬದಲು ಮೊಹಮ್ಮದ್ ಸಿರಾಜ್‌ಗೆ ಅವಕಾಶ ಕಲ್ಪಿಸಬೇಕೆಂದು ಭಾರತೀಯ ಬ್ಯಾಟಿಂಗ್ ದಿಗ್ಗಜ ಸುನೀಲ್ ಗವಾಸ್ಕರ್ ಸಲಹೆ ನೀಡಿದ್ದಾರೆ.
ದಕ್ಷಿಣ ಆಫ್ರಿಕಾ ವಿರುದ್ಧ ಟಿ20 ಸರಣಿ ಆರಂಭಕ್ಕೂ ಒಂದು ದಿನ ಮೊದಲೇ ಜಸ್‌ಪ್ರೀತ್ ಬುಮ್ರಾ ಅಭ್ಯಾಸದ ವೇಳೆ ಬೆನ್ನು ನೋವಿಗೆ ಒಳಗಾಗಿದ್ದರು. ಈ ಹಿನ್ನೆಲೆಯಲ್ಲಿ ಅವರು ಈ ಸರಣಿಯಿಂದ ಹೊರ ಬಿದ್ದಿದ್ದರು. ನಂತರ ಅವರ ಗಾಯ ಗಂಭೀರವಾಗಿರುವ ಬಗ್ಗೆ ಸ್ಕ್ಯಾನ್ ವರದಿ ಬಹಿರಂಗಪಡಿಸಿತ್ತು. ಈ ಹಿನ್ನೆಲೆಯಲ್ಲಿ ಅವರು ಟಿ20 ವಿಶ್ವಕಪ್ ಟೂರ್ನಿಯಿಂದಲೂ ಹೊರ ಬಿದ್ದಿದ್ದರು.
ದಕ್ಷಿಣ ಆಫ್ರಿಕಾ ಟಿ20 ಸರಣಿಯಲ್ಲಿ ಜಸ್‌ಪ್ರೀತ್ ಬುಮ್ರಾ ಅವರ ಸ್ಥಾನವನ್ನು ಮೊಹಮ್ಮದ್ ಸಿರಾಜ್ ತುಂಬಿದ್ದರು ಹಾಗೂ ಒಡಿಐ ಸರಣಿಯಲ್ಲಿಯೂ ಅವರು ಹಾಗೆ ಮುಂದುವರಿದಿದ್ದರು. ಏಕದಿನ ಸರಣಿಯಲ್ಲಿ ಅತ್ಯುತ್ತಮ ಪ್ರದರ್ಶನ ತೋರಿದ್ದ ಸಿರಾಜ್ ಮೂರು ಪಂದ್ಯಗಳಿಂದ 5 ವಿಕೆಟ್ ಕಬಳಿಸುವ ಮೂಲಕ ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು.
ಟಿ20 ವಿಶ್ವಕಪ್ ಭಾರತ ತಂಡದ ಸ್ಟ್ಯಾಂಡ್ ಬೈನಲ್ಲಿ ಮೊಹಮ್ಮದ್ ಶಮಿ ಹೆಸರಿದೆ. ಆದರೆ, ಅವರು ಇತ್ತೀಚೆಗೆ ಯಾವುದೇ ಸ್ವರೂಪದಲ್ಲಿ ಕಾಣಿಸಿಕೊಂಡಿಲ್ಲ. ಆದರೆ, ಮೊಹಮ್ಮದ್ ಸಿರಾಜ್ ದಕ್ಷಿಣ ಆಫ್ರಿಕಾ ವಿರುದ್ಧ ಏಕದಿನ ಸರಣಿಯಲ್ಲಿ ಉತ್ತಮ ಪ್ರದರ್ಶನ ತೋರಿದ್ದಾರೆ ಹಾಗೂ ಫಾರ್ಮ್ ಕಂಡುಕೊಂಡಿದ್ದಾರೆ. ಹಾಗಾಗಿ ಬುಮ್ರಾ ಸ್ಥಾನಕ್ಕೆ ಸಿರಾಜ್ ಆಯ್ಕೆ ಸೂಕ್ತ ಎಂದು ಗವಾಸ್ಕರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
"ಜಸ್‌ಪ್ರೀತ್ ಬುಮ್ರಾ ಸ್ಥಾನಕ್ಕೆ ನಾನು ಮೊಹಮ್ಮದ್ ಸಿರಾಜ್ ಅವರನ್ನು ಆಯ್ಕೆ ಮಾಡುತ್ತೇನೆ. ಏಕೆಂದರೆ ಅವರು ಸದ್ಯ ಅತ್ಯುತ್ತಮವಾಗಿ ಬೌಲ್ ಮಾಡುತ್ತಿದ್ದಾರೆ. ಆದರೆ, ಮೊಹಮ್ಮದ್ ಶಮಿ ಇತ್ತೀಚಿನ ದಿನಗಳಲ್ಲಿ ಯಾವುದೇ ಸ್ವರೂಪದಲ್ಲಿ ಆಡಿಲ್ಲ," ಎಂದು ಬ್ಯಾಟಿಂಗ್ ದಿಗ್ಗಜ ಸ್ಟಾರ್ ಸ್ಪೋರ್ಟ್‌ಗೆ ತಿಳಿಸಿದ್ದಾರೆ.
"ನೀವು ನೇರವಾಗಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಆಡಬಹುದು. ಹೌದು ಭಾರತ ತಂಡಕ್ಕೆ ಕೆಲ ಅಭ್ಯಾಸ ಪಂದ್ಯಗಳಿವೆ. ಆದರೆ, ಇನ್ನೂ ಜಸ್‌ಪ್ರೀತ್ ಬುಮ್ರಾ ಬದಲಿಗೆ ತಂಡದ 15ನೇ ಆಟಗಾರ ಯಾರೆಂದು ಇನ್ನೂ ತಿಳಿದಿಲ್ಲ. ಯಾರನ್ನು ತಂಡದಲ್ಲಿ ಆಡಿಸಬಹುದು ಎಂದು ನನಗೂ ಕೂಡ ಇನ್ನು ಗೊತ್ತಿಲ್ಲ," ಎಂದು ಹೇಳಿದ್ದಾರೆ.
"ಮೊಹಮ್ಮದ್ ಶಮಿ ಗುಣಮಟ್ಟದ ಬೌಲರ್ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಆದರೆ, ಇಲ್ಲಿ ವಾಸ್ತಾಂಶವೇನೆಂದರೆ ಅವರು ಇತ್ತೀಚಿನ ದಿನಗಳಲ್ಲಿ ಯಾವುದೇ ಕ್ರಿಕೆಟ್ ಚುಟುವಟಿಕೆಗಳಲ್ಲಿ ಕಾಣಿಸಿಕೊಂಡಿಲ್ಲ. ಅಂದಹಾಗೆ ಕೊವಿಡ್-19ನಿಂದ ಕಮ್‌ಬ್ಯಾಕ್ ಮಾಡುವುದು ಅಷ್ಟೊಂದು ಸುಲಭವಲ್ಲ. ಸೋಂಕಿಗೆ ತುತ್ತಾದ ಬಳಿಕ ನಿಮ್ಮ ಶಕ್ತಿ ಸ್ವಲ್ಪ ಇಳಿದಿರುತ್ತದೆ. ಟಿ20 ಕ್ರಿಕೆಟ್‌ನಲ್ಲಿ 4 ಓವರ್ ಪಂದ್ಯ ಎಂದು ನನಗೂ ಗೊತ್ತಿದೆ. ಆದರೆ, ಮೊಹಮ್ಮದ್ ಸಿರಾಜ್ ಬೌಲ್ ಮಾಡುತ್ತಿರುವ ಹಾದಿ ಅದ್ಭುತವಾಗಿದೆ," ಎಂದು ಸುನೀಲ್ ಗವಾಸ್ಕರ್ ತಿಳಿಸಿದ್ದಾರೆ.
ಟಿ20 ವಿಶ್ವಕಪ್ ಟೂರ್ನಿಗೆ ತಯಾರಿ ನಡೆಸಲು 14 ಸದಸ್ಯರ ಭಾರತ ತಂಡ ಈಗಾಗಲೇ ಆಸ್ಟ್ರೇಲಿಯಾದಲ್ಲಿ ಬೀಡು ಬಿಟ್ಟಿದೆ. ಆದರೆ, ಇನ್ನೂ ಜಸ್‌ಪ್ರೀತ್ ಬುಮ್ರಾ ಅವರ ಸ್ಥಾನಕ್ಕೆ ಟೀಮ್ ಮ್ಯಾನೇಜ್‌ಮೆಂಟ್ ಬದಲಿ ಆಟಗಾರನನ್ನು ಅಂತಿಮಗೊಳಿಸಿಲ್ಲ. ಮೊಹಮ್ಮದ್ ಶಮಿ ಆಸ್ಟ್ರೇಲಿಯಾಗೆ ಪ್ರಯಾಣ ಬೆಳೆಸಿದ್ದಾರೆ. ಇವರ ಜೊತೆಗೆ ಮೊಹಮ್ಮದ್ ಸಿರಾಜ್ ಹಾಗೂ ಶಾರ್ದುಲ್ ಠಾಕೂರ್ ಅವರು ಕೂಡ ಆಸ್ಟ್ರೇಲಿಯಾಗೆ ತೆರಳಲಿದ್ದಾರೆಂದು ವರದಿಯಾಗಿದೆ.
T20 World Cup 2022 Batting Legend Sunil Gavaskar Picks Siraj Over Shami To Replace Jasprit Bumrah In India Squad.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
21-04-25 02:13 pm
HK News Desk
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm