ಬ್ರೇಕಿಂಗ್ ನ್ಯೂಸ್
21-10-22 01:28 pm Source: Vijayakarnataka ಕ್ರೀಡೆ
ಮೆಲ್ಬೋರ್ನ್: ಆಸ್ಟ್ರೇಲಿಯಾ ಆತಿಥ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ 2022ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಮೊದಲನೇ ಸುತ್ತು ಈಗಾಗಲೇ ನಡೆಯುತ್ತಿದೆ. ಆದರೆ, ಟೂರ್ನಿಯ ಪ್ರಮುಖ ಹಂತವಾದ ಸೂಪರ್-12ರ ಪಂದ್ಯಗಳು ಅ.22 ರಿಂದ ಶುರುವಾಗಲಿದೆ. ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ, ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಭಾನುವಾರ(ಅ.23) ಮೆಲ್ಬೋರ್ನ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ಸೆಣಸಲಿದೆ.
ವಿಶ್ವಕಪ್ ಟೂರ್ನಿಯ ಮುಖಾಮುಖಿ ದಾಖಲೆಯಲ್ಲಿ ಮೇಲುಗೈ ಸಾಧಿಸಿರುವ ಭಾರತ ತಂಡ ತನ್ನ ಮೊದಲನೇ ಪಂದ್ಯದಲ್ಲಿ ಗೆಲ್ಲುವ ನೆಚ್ಚಿನ ತಂಡವಾಗಿದೆ. ಆದರೆ, 2021ರಲ್ಲಿ ಯುಎಇ ಹಾಗೂ ಒಮಾನ್ ಆತಿಥ್ಯದಲ್ಲಿ ನಡೆದಿದ್ದ ಕೊನೆಯ ಚುಟುಕು ವಿಶ್ವಕಪ್ ಹಾಗೂ ಏಷ್ಯಾಕಪ್ ಟೂರ್ನಿಗಳಲ್ಲಿ ಭಾರತ ತಂಡ ಸೋಲು ಅನುಭವಿಸಿದೆ. ಹಾಗಾಗಿ ಈ ಬಾರಿ ಸಾಂಪ್ರದಾಯಿಕ ಎದುರಾಳಿ ಮೇಲೆ ಸೋಲಿನ ಸೇಡು ತೀರಿಸಿಕೊಳ್ಳಲು ರೋಹಿತ್ ಪಡೆ ಎದುರು ನೋಡುತ್ತಿದೆ.
ಪಾಕಿಸ್ತಾನ ವಿರುದ್ಧ ಕಳೆದ ಪಂದ್ಯಗಳಲ್ಲಿ ಭಾರತ ಸೋಲಲು ಪ್ರಮುಖ ಕಾರಣ ಆರ್‌ಆರ್‌ಎಸ್(ರೋಹಿತ್ ಶರ್ಮಾ, ಕೆ.ಎಲ್ ರಾಹುಲ್, ಸೂರ್ಯಕುಮಾರ್ ಯಾದವ್) ವೈಫಲ್ಯ. ಒಂದು ವೇಳೆ ಭಾನುವಾರದ ಪಂದ್ಯದಲ್ಲಿ ಟೀಮ್ ಇಂಡಿಯಾದ ಆರಂಭಿಕರಾದ ನಾಯಕ ರೋಹಿತ್ ಶರ್ಮಾ, ಉಪನಾಯಕ ಕೆ.ಎಲ್.ರಾಹುಲ್ ಹಾಗೂ ಯುವ ಸ್ಫೋಟಕ ಬ್ಯಾಟ್ಸ್‌ಮನ್ ಸೂರ್ಯಕುಮಾರ್ ಯಾದವ್ ಅವರು ಸಿಡಿದರೆ ಪಾಕಿಸ್ತಾನ ಸೋಲುವುದು ಕಟ್ಟಿಟ್ಟ ಬುತ್ತಿ.
ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ, ಇಂಗ್ಲೆಂಡ್‍ನಂತಹ ಘಟಾನುಘಟಿ ದೇಶಗಳ ವಿರುದ್ಧ ರನ್ ಹೊಳೆ ಹರಿಸಿರುವ ಈ ಆಟಗಾರರು ಪಾಕಿಸ್ತಾನದ ಡೆಡ್ಲಿ ಬೌಲಿಂಗ್ ಅಟ್ಯಾಕ್ ವಿರುದ್ಧ ಮಾತ್ರ ಮಂಕಾಗಿದ್ದಾರೆ. ಆರಂಭಿಕ ಜೋಡಿ ಒಳ್ಳೆಯ ಇನಿಂಗ್ಸ್ ಕಟ್ಟಿದರೆ ಚುಟುಕು ವಿಶ್ವಕಪ್‍ನಲ್ಲಿ ಸುಲಭವಾಗಿ 200 ರನ್‍ಗಳ ರೇಖೆಯನ್ನು ದಾಟಬಹುದು. ಆದರೆ, ರೋಹಿತ್ ಶರ್ಮಾ, ಕೆ.ಎಲ್.ರಾಹುಲ್ ಅವರು ಪಾಕಿಸ್ತಾನದ ವಿರುದ್ಧ ಅಕ್ಷರಶಃ ಕಳೆದ ಮೂರು ಪಂದ್ಯಗಳಲ್ಲಿ ಎಡವಿದ್ದಾರೆ.
ಒಂದೆಡೆ ಚೇಸ್ ಮಾಸ್ಟರ್ ಖ್ಯಾತಿಯ ವಿರಾಟ್ ಕೊಹ್ಲಿ ವಿರಾಟ ಪ್ರದರ್ಶನ ಪ್ರದರ್ಶಿಸುತ್ತಿದ್ದರೆ, ರೋಹಿತ್ ಶರ್ಮಾ, ಕನ್ನಡಿಗ ಕೆ.ಎಲ್ ರಾಹುಲ್ ಹಾಗೂ ಸೂರ್ಯಕುಮಾರ್ ಯಾದವ್ ಮಂಕಾಗಿರುವುದರಿಂದ ಭಾರತ ಕಳೆದ ಪಂದ್ಯಗಳಲ್ಲಿ ಹಿನ್ನಡೆ ಅನುಭವಿಸಲು ಕಾರಣವ ಎಂದರೆ ತಪ್ಪಾಗಲಾರದು.
ಕೆ ಎಲ್ ರಾಹುಲ್ ಪಾಕಿಸ್ತಾನ ವಿರುದ್ಧ ಕಳೆದ 3 ಪಂದ್ಯಗಳಿಂದ 106.89ರ ಸ್ಟ್ರೈಕ್‍ರೇಟ್‍ನಲ್ಲಿ ಗಳಿಸಿರುವುದು ಕೇವಲ 31 ರನ್‍ಗಳು ಮಾತ್ರ. ಅದು 10.33ರ ಸರಾಸರಿಯಲ್ಲಿ. ಚುಟುಕು ಮಾದರಿಯಲ್ಲಿ 4 ಶತಕ ಸಿಡಿಸಿ ಸ್ಫೋಟಕ ಆಟಕ್ಕೆ ಹೆಸರಾಗಿರುವ ರೋಹಿತ್ ಶರ್ಮಾ, ಪಾಕ್ ವಿರುದ್ಧ ಮಾತ್ರ ದೊಡ್ಡ ಇನ್ನಿಂಗ್ಸ್ ಕಟ್ಟಲು ಪದೇ-ಪದೆ ಎಡವುತ್ತಿದ್ದಾರೆ. ಪಾಕ್ ವಿರುದ್ಧ ಇದುವರೆಗೂ ಆಡಿರುವ 9 ಇನಿಂಗ್ಸ್‌ಗಳಲ್ಲಿ ಟೀಮ್ ಇಂಡಿಯಾ ನಾಯಕ ಗಳಿಸಿರುವುದು ಕೇವಲ 110 ರನ್ ಮಾತ್ರ.
ಎಂತಹ ಕ್ಲಿಷ್ಟ ಸಂದರ್ಭಗಳಲ್ಲಿಯೂ ಏಕಾಂಗಿ ಹೋರಾಟ ನಡೆಸಿ ಪಂದ್ಯವನ್ನು ಗೆಲ್ಲಿಸುವ ಸಾಮರ್ಥ್ಯ ಹೊಂದಿರುವ ಸೂರ್ಯಕುಮಾರ್ ಯಾದವ್ ಬೇರೆಲ್ಲಾ ತಂಡಗಳ ವಿರುದ್ಧ ಆರ್ಭಟಿಸಿದ್ದಾರೆ. ಆದರೆ ಪಾಕಿಸ್ತಾನ ವಿರುದ್ಧ ಮಾತ್ರ ಅವರ ಬ್ಯಾಟ್ ಸದ್ದು ಮಾಡುತ್ತಲೇ ಇಲ್ಲ. ಬಾಬರ್ ಆಝಮ್ ನಾಯಕತ್ವದ ತಂಡದ ವಿರುದ್ಧ ಇದುವರೆಗೂ ಆಡಿರುವ 3 ಪಂದ್ಯಗಳಲ್ಲಿ ಸೂರ್ಯ, 116.66ರ ಸ್ಟ್ರೈಕ್‍ರೇಟ್ ಹಾಗೂ 14ರ ಸರಾಸರಿಯಲ್ಲಿ ಗಳಿಸಿರುವುದು 42 ರನ್‍ಗಳು ಮಾತ್ರ.
ಅಂದಹಾಗೆ ರೋಹಿತ್ ಶರ್ಮಾ ನಾಯಕತ್ವದ ಟೀಮ್ ಇಂಡಿಯಾ ಭಾನುವಾರ ಮೆಲ್ಬೋರ್ನ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾರತೀಯ ಕಾಲಮಾನ 01: 30ಕ್ಕೆ ಪಾಕಿಸ್ತಾನ ವಿರುದ್ಧ ಕಣಕ್ಕೆ ಇಳಿಯಲಿದೆ. ಈ ಹೈವೋಲ್ಟೇಜ್ ಪಂದ್ಯದಲ್ಲಿ ರೋಹಿತ್ ಶರ್ಮಾ, ಕೆ.ಎಲ್ ರಾಹುಲ್ ಹಾಗೂ ಸೂರ್ಯಕುಮಾರ್ ಯಾದವ್ ಮಿಂಚಲಿದ್ದಾರೆಯೇ ಅಥವಾ ಇಲ್ಲವೆ ಎಂಬುದು ಅಭಿಮಾನಿಗಳಲ್ಲಿ ಆತಂಕ ಮನೆ ಮಾಡಿದೆ. ಪಾಕ್ ವಿರುದ್ಧ ಪಂದ್ಯದಲ್ಲಿ ಈ ಮೂವರು ಸ್ಟಾರ್ ಬ್ಯಾಟ್ಸ್‌ಮನ್‌ಗಳು ಅಬ್ಬರಿಸಿ ಭಾರತಕ್ಕೆ ಗೆಲುವು ತಂದುಕೊಡುತ್ತಾರಾ? ಎಂಬುದು ಅಭಿಮಾನಿಗಳ ಪಾಲಿಗೆ ಯಕ್ಷ ಪ್ರಶ್ನೆ.
T20 World Cup 2022 Skipper Rohit Sharma, Kl Rahul, Suryakumar Yadav Can Give Good Performance Against Pakistan.
23-11-24 07:43 pm
Bangalore Correspondent
B Y Vijayendra, DK Shivkumar: ವಿಜಯೇಂದ್ರಗೆ ತೀವ...
23-11-24 02:15 pm
Karnataka Bypolls Live Updates Congress: ಉಪ ಚ...
23-11-24 11:35 am
ಲಾರಿ ಡ್ರೈವರ್ ಎಡವಟ್ಟಿಗೆ ಫಾರ್ಚುನರ್ ಕಾರು ಡಿಕ್ಕ...
22-11-24 05:16 pm
Kodava News, children : ಕೊಡವ ಜನಸಂಖ್ಯೆ ಹೆಚ್ಚಿಸ...
22-11-24 03:53 pm
23-11-24 05:34 pm
HK News Desk
ಮಹಾರಾಷ್ಟ್ರದಲ್ಲಿ ಕೇಸರಿ ಕಮಾಲ್ ; ನಿರೀಕ್ಷೆಗೂ ಮೀರಿ...
23-11-24 04:33 pm
ಭಾರೀ ವಿವಾದ ಸೃಷ್ಟಿಸಿದ್ದ 'ಎಮರ್ಜೆನ್ಸಿ' ಚಿತ್ರ ಬಿಡ...
18-11-24 03:54 pm
ಶ್ರದ್ಧಾ ವಾಳ್ಕರ್ ಹತ್ಯೆಗೆ ಸೇಡು ತೀರಿಸಲು ಬಿಷ್ಣೋಯಿ...
18-11-24 01:09 pm
ಭಾರತೀಯ ರೈಲ್ವೇ ಹೊಸ ಇತಿಹಾಸದತ್ತ ಹೆಜ್ಜೆ ; ವಿದ್ಯುತ...
14-11-24 11:11 pm
23-11-24 12:20 pm
Mangalore Correspondent
Ut Khader, Mangalore: ನೇತ್ರಾವತಿ ತೀರದಲ್ಲಿ ತಡೆಗ...
22-11-24 10:33 pm
Kuthar, Mangalore News: ಕುತ್ತಾರಿನಲ್ಲಿ ಜೆಸಿಬಿ...
22-11-24 10:17 pm
Brijesh Chowta, MIR group, Mangalore: ಸಂಸದ ಕ್...
22-11-24 09:04 pm
BJP Vijay Kumar shetty, Mangalore video: ಬಿಜೆ...
22-11-24 08:21 pm
23-11-24 10:49 am
Mangaluru Correspondent
ಟ್ರಾಯ್ ಕಂಪನಿ ಸೋಗಿನಲ್ಲಿ ಕರೆ ; ಅಮೆರಿಕಾದ ಸಾಫ್ಟ್...
22-11-24 10:47 pm
Mangalore crime, Sexual Harrasment, Police: ಮ...
22-11-24 09:37 pm
Bangalore crime, Stabbing: ಬೈಕ್ ಪಾರ್ಕಿಂಗ್ ವಿಚ...
22-11-24 04:14 pm
Belthangady, Mangalore, Crime : ಟೋರ್ನ್ ಜೀನ್ಸ್...
22-11-24 03:04 pm