ಬ್ರೇಕಿಂಗ್ ನ್ಯೂಸ್
24-10-22 01:33 pm Source: Vijayakarnataka ಕ್ರೀಡೆ
ಮೆಲ್ಬೋರ್ನ್:ಪಾಕಿಸ್ತಾನ ವಿರುದ್ದ 2022ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಸೂಪರ್-12ರ ಪಂದ್ಯದಲ್ಲಿ ಸ್ಪೋಟಕ ಬ್ಯಾಟಿಂಗ್ ಪ್ರದರ್ಶನ ತೋರುವ ಮೂಲಕ ಭಾರತ ತಂಡದ 4 ವಿಕೆಟ್ ರೋಚಕ ಗೆಲುವಿನಲ್ಲಿ ಮಹತ್ತರ ಪಾತ್ರವಹಿಸಿದ ವಿರಾಟ್ ಕೊಹ್ಲಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.
ಭಾನುವಾರ ಇಲ್ಲಿನ ಮೆಲ್ಬೋರ್ನ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ಪಾಕಿಸ್ತಾನ ನೀಡಿದ್ದ 160 ರನ್ ಗುರಿ ಹಿಂಬಾಲಿಸಿದ ಭಾರತ ತಂಡ ಒಂದು ಹಂತದಲ್ಲಿ 31 ರನ್‌ಗಳಿಗೆ 4 ವಿಕೆಟ್‌ಗಳನ್ನು ಕಳೆದುಕೊಂಡಿತ್ತು. ಆ ಮೂಲಕ ಇನ್ನೇನು ಭಾರತ ತಂಡ ಸೋಲು ಅನುಭವಿಸುವುದು ಬಹುತೇಕ ಖಚಿತ ಎಂದೇ ಭಾವಿಸಲಾಗಿತ್ತು. ಆದರೆ, ವಿರಾಟ್ ಕೊಹ್ಲಿ ತಮ್ಮ ವೃತ್ತಿ ಜೀವನದ ಶ್ರೇಷ್ಠ ಇನಿಂಗ್ಸ್ ಆಡುವ ಮೂಲಕ ಎಲ್ಲರ ಲೆಕ್ಕಾಚಾರಗಳನ್ನು ತಲೆ ಕೆಳಗಾಗುವಂತೆ ಮಾಡಿದರು.

ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶನ ತೋರಿದ ವಿರಾಟ್ ಕೊಹ್ಲಿ ಪಾಕಿಸ್ತಾನ ಬೌಲರ್‌ಗಳ ಸವಾಲನ್ನು ಮೆಟ್ಟಿ ನಿಂತರು, ಎದುರಿಸಿದ ಕೇವಲ 53 ಎಸೆತಗಳಲ್ಲಿ 4 ಭರ್ಜರಿ ಸಿಕ್ಸರ್ ಹಾಗೂ 6 ಬೌಂಡರಿಗಳೊಂದಿಗೆ ಅಜೇಯ 82 ರನ್ ಸಿಡಿಸಿದರು ಹಾಗೂ ಹಾರ್ದಿಕ್ ಪಾಂಡ್ಯ ಅವರ ಜೊತೆ 113 ರನ್ ನಿರ್ಣಾಯಕ ಜೊತೆಯಾಟವನ್ನು ಆಡಿದರು. ಆ ಮೂಲಕ ಭಾರತ ತಂಡದ ಗೆಲುವಿಗೆ ನೆರವಾದರು.
ಅಂದಹಾಗೆ ಭಾರತ ತಂಡ ಗೆಲುವು ಪಡೆಯುತ್ತಿದ್ದಂತೆ ಮೆಲ್ಬೋರ್ನ್ ಸ್ಟೇಡಿಯಂನಲ್ಲಿದ್ದ ಸಾವಿರಾರು ಅಭಿಮಾನಿಗಳು ಎದ್ದು ನಿಂತು ಕಿಂಗ್ ಕೊಹ್ಲಿಗೆ ಗೌರವ ಸಲ್ಲಿಸಿದರು. ಪಾಕಿಸ್ತಾನ ತಂಡ ಸೋಲು ಅನುಭವಿಸಿದ ನೋವಿನ ಹೊರತಾಗಿಯೂ ಪಾಕ್‌ನ ಕೆಲ ಅಭಿಮಾನಿಗಳು ವಿರಾಟ್ ಕೊಹ್ಲಿ ಬ್ಯಾಟಿಂಗ್ ಪ್ರದರ್ಶನವನ್ನು ಮೆಚ್ಚಿಕೊಂಡರು.
A packed MCG chanting for Virat Kohli 🏟
— ICC (@ICC) October 23, 2022
Raw vision: Behind the scenes of India’s sensational win 📹
Goosebumps. #T20WorldCup | #INDvPAK pic.twitter.com/MNjmOLKO7r
ವಿರಾಟ್ ಕೊಹ್ಲಿ ತಮ್ಮ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ಬಳಿಕ ತಮ್ಮ ಹೆಲ್ಮೆಟ್ ಅನ್ನು ಬಿಚ್ಚಿ ಬ್ಯಾಟ್ ಅನ್ನು ಆಕಾಶಕ್ಕೆ ತೋರಿಸಿ ಸಂಭ್ರಮಿಸಿದರು. ಈ ವೇಳೆ ವಿರಾಟ್ ಕೊಹ್ಲಿ ತಮ್ಮ ಭಾವನೆಗಳನ್ನು ನಿಯಂತ್ರಿಸಲಾಗದೆ ಕಣ್ಣೀರಿಟ್ಟರು. ಇದಾದ ಬಳಿಕ ಡ್ರೆಸಿಂಗ್ ಕೊಠಡಿಗೆ ತೆರಳುತ್ತಿದ್ದ ವೇಳೆ ಎದುರಾದ ಹೆಡ್ ಕೋಚ್ ರಾಹುಲ್ ದ್ರಾವಿಡ್, ಮ್ಯಾಚ್ ವಿನ್ನರ್ ವಿರಾಟ್ ಕೊಹ್ಲಿಯನ್ನು ಅಪ್ಪಿಕೊಂಡರು ಹಾಗೂ ಬೆನ್ನು ತಟ್ಟಿದರು. ಈ ಕ್ಷಣ ನಿಜಕ್ಕೂ ಅಭೂತಪೂರ್ವವಾಗಿತ್ತು. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ಅಭಿಮಾನಿಗಳು ಇದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ರಾಹುಲ್ ದ್ರಾವಿಡ್ ಬಳಿಕ, ಕೆ.ಎಲ್ ರಾಹುಲ್, ಯುಜ್ವೇಂದ್ರ ಚಹಲ್, ರಿಷಭ್ ಪಂತ್ ಸೇರಿದಂತೆ ಭಾರತ ತಂಡದ ಆಟಗಾರರು ಹಾಗೂ ಸಹಾಯಕ ಸಿಬ್ಬಂದಿ ವಿರಾಟ್ ಕೊಹ್ಲಿಯನ್ನು ಅಭಿನಂದಿಸಿದರು. 2016ರ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ದ ವಿರಾಟ್ ಕೊಹ್ಲಿ ಇದೇ ರೀತಿಯ ಇನಿಂಗ್ಸ್ ಅನ್ನು ಆಡಿದ್ದರು. ಇದೀಗ ಮೆಲ್ಬೋರ್ನ್‌ನಲ್ಲಿ ಮತ್ತೊಂದು ಶ್ರೇಷ್ಠ ಇನಿಂಗ್ಸ್ ಅನ್ನು ಕಿಂಗ್ ಕೊಹ್ಲಿ ಆಡಿದ್ದಾರೆ.
ಅಂದಹಾಗೆ ವಿರಾಟ್ ಕೊಹ್ಲಿ 2022ರ ಏಷ್ಯಾ ಕಪ್ ಟೂರ್ನಿಗೂ ಮುನ್ನ ಸಾಕಷ್ಟು ಟೀಕೆಗಳನ್ನು ಎದುರಿಸಿದ್ದರು. ಸತತ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ ಹೊರತಾಗಿಯೂ ಏಷ್ಯಾ ಕಪ್ ಭಾರತ ತಂಡದಲ್ಲಿ ವಿರಾಟ್ ಕೊಹ್ಲಿಗೆ ಅವಕಾಶ ನೀಡಿದ್ದರಿಂದ ಹಲವರು ಟೀಕಿಸಿದ್ದರು. ಆದರೆ, ಏಷ್ಯಾ ಕಪ್ ಟೂರ್ನಿಯಲ್ಲಿ ಕೊಹ್ಲಿ ಒಂದು ಶತಕ ಹಾಗೂ ಎರಡು ಅರ್ಧಶತಕದ ಮೂಲಕ ಭರ್ಜರಿ ಕಮ್‌ಬ್ಯಾಕ್ ಮಾಡಿದ್ದರು.
ನಂತರ, ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ವಿರುದ್ದ ಎರಡು ಟಿ20 ಸರಣಿಗಳಲ್ಲಿಯೂ ವಿರಾಟ್ ಕೊಹ್ಲಿ ಅದೇ ಲಯವನ್ನು ಮುಂದುವರಿಸಿದ್ದರು. ಇದೀಗ 2022ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಪಂದ್ಯದಲ್ಲಿ ಟಿ20 ವೃತ್ತಿ ಜೀವನದ ಶ್ರೇಷ್ಠ ಇನಿಂಗ್ಸ್ ಅನ್ನು ಆಡಿದರು. ಆ ಮೂಲಕ ಟೀಕಾಕಾರರಿಗೆ ಸೂಕ್ತ ತಿರುಗೇಟು ನೀಡಿದರು.
T20 World Cup 2022 Head Coach Rahul Dravid Embraces Emotional Virat Kohli At Mcg After India Win Thriller Vs Pakistan.
23-10-25 03:42 pm
HK News Desk
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
ಸಿಎಂ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಅರ್ಹ ವ್ಯಕ್ತಿ ;...
22-10-25 08:12 pm
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
23-10-25 03:39 pm
HK News Desk
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
23-10-25 10:52 pm
Mangalore Correspondent
ಸತ್ತು ಬದುಕಿದ ಸುದ್ದಿ ಬಗ್ಗೆ ಯೇನಪೋಯ ಆಸ್ಪತ್ರೆ ಸ್ಪ...
23-10-25 10:46 pm
ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾ...
23-10-25 07:35 pm
ಜಾನುವಾರು ಸಾಗಾಟಕ್ಕೆ ಪೊಲೀಸರ ತಡೆ ; ಲಾರಿಯಿಂದ ಹಗ್ಗ...
22-10-25 09:55 pm
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
23-10-25 06:53 pm
Mangalore Correspondent
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm