ಭಾರತ-ಶ್ರೀಲಂಕಾ ಪಂದ್ಯಕ್ಕೆ ಮಳೆ ವಿಲನ್ ಆಗುತ್ತಾ? ಇಲ್ಲಿದೆ ವೆದರ್​ ರಿಪೋರ್ಟ್​, ಪಿಚ್​ ವರದಿ

07-01-23 12:26 pm       Source: news18   ಕ್ರೀಡೆ

ಹಾರ್ದಿಕ್ ಪಾಂಡ್ಯ ನಾಯಕತ್ವದ ಟೀಮ್ ಇಂಡಿಯಾ ಎರಡನೇ T20 ಪಂದ್ಯದಲ್ಲಿ ಸೋತಿದೆ. ಆದರೆ ಇಂದಿನ ಪಂದ್ಯವನ್ನು ಗೆದ್ದರೆ ಮಾತ್ರ ಸರಣಿ ಗೆಲ್ಲಲಿದೆ. ಆದರೆ ಇಂದಿನ ಪಂದ್ಯಕ್ಕೆ ಮಳೆ ವಿಲನ್ ಆಗುತ್ತದೆಯೇ ಎಂಬ ಮಾಹಿತಿ ಇಲ್ಲಿದೆ ನೋಡಿ.

ಪ್ರವಾಸಿ ಶ್ರೀಲಂಕಾ ತಂಡವು ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ​​ಸ್ಟೇಡಿಯಂನಲ್ಲಿ (ಎಸ್‌ಸಿಎ ಸ್ಟೇಡಿಯಂ) ಮೊದಲ ಬಾರಿಗೆ ಟಿ20 ಪಂದ್ಯವನ್ನು ಆಡಲಿದೆ. ಆತಿಥೇಯ ಭಾರತ ಇಲ್ಲಿ 4 ಟಿ20 ಪಂದ್ಯಗಳನ್ನು ಆಡಿದ್ದು, ಅದರಲ್ಲಿ 3ರಲ್ಲಿ ಗೆದ್ದು ಒಂದು ಪಂದ್ಯದಲ್ಲಿ ಸೋತಿದೆ. ಇಂದು ಭಾರತ ಮತ್ತು ಶ್ರೀಲಂಕಾ ನಡುವೆ ನಡೆಯಲಿರುವ ಮೂರನೇ T20 ಪಂದ್ಯದಲ್ಲಿ ರಾಜ್‌ಕೋಟ್‌ನಲ್ಲಿ ಹವಾಮಾನವು ಉತ್ತಮವಾಗಿರುತ್ತದೆ ಎಂದು ತಿಳಿದುಬಂದಿದೆ. ದಿನದ ಗರಿಷ್ಠ ತಾಪಮಾನವು 28 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನವು 24 ಡಿಗ್ರಿ ಸೆಲ್ಸಿಯಸ್ ಆಗಿರುತ್ತದೆ. ಇಡೀ ದಿನ ಮಳೆಯಾಗುವ ಸಾಧ್ಯತೆ ಇಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂತಹ ಪರಿಸ್ಥಿತಿಯಲ್ಲಿ ಕ್ರಿಕೆಟ್ ಪ್ರೇಮಿಗಳಿಗೆ ಸಂಪೂರ್ಣ ಪಂದ್ಯ ವೀಕ್ಷಿಸುವ ಅವಕಾಶ ಸಿಗಲಿದೆ.

ರಾಜ್‌ಕೋಟ್‌ನ ಪಿಚ್ ರಿಪೋರ್ಟ್​:

India vs Bangladesh: Rajkot curator reveals nature of pitch ahead of second  T20I | Cricket - Hindustan Times

ರಾಜ್‌ಕೋಟ್‌ನ ಪಿಚ್ ಬ್ಯಾಟ್ಸ್​ಮನ್​ಗಳಿಗೆ ಹೆಚ್ಚು ಸಹಾಯಕವಾಗಿದೆ. ಫ್ಲಾಟ್ ವಿಕೆಟ್‌ನಲ್ಲಿ, ಬೌಲರ್‌ಗಳು ವಿಕೆಟ್‌ಗಳನ್ನು ಪಡೆಯಲು ಸಾಕಷ್ಟು ಕಠಿಣ ಪರಿಶ್ರಮವನ್ನು ಮಾಡಬೇಕಾಗುತ್ತದೆ. ಬ್ಯಾಟರ್‌ಗಳು ಸಣ್ಣ ಬೌಂಡರಿಗಳ ಲಾಭವನ್ನು ಪಡೆಯಬಹುದು. ಅಂತಹ ಪರಿಸ್ಥಿತಿಯಲ್ಲಿ, ಈ ಪಿಚ್‌ನಲ್ಲಿ ಹೆಚ್ಚಿನ ಸ್ಕೋರಿಂಗ್ ಸ್ಪರ್ಧೆಯನ್ನು ಕಾಣಬಹುದು. ಇತ್ತೀಚಿನ ದಿನಗಳಲ್ಲಿ ದಕ್ಷಿಣ ಆಫ್ರಿಕಾ ಹೊರತುಪಡಿಸಿ, ಇಲ್ಲಿ ಮೊದಲು ಬ್ಯಾಟ್​ ಮಾಡಿದ ತಂಡ ದೊಡ್ಡ ಸ್ಕೋರ್‌ ಮಾಡಿದೆ. ಕಳೆದ ವರ್ಷ ಭಾರತ ವಿರುದ್ಧದ ಟಿ20ಯಲ್ಲಿ ದಕ್ಷಿಣ ಆಫ್ರಿಕಾ ತಂಡ 87 ರನ್‌ಗಳಿಗೆ ಆಲೌಟ್ ಆಗಿತ್ತು. ಹೀಗಾಗಿ ನಾಳೆ ಟಾಸ್​ ಗೆದ್ದ ನಾಯಕ ಮೊದಲು ಬ್ಯಾಟಿಂಗ್​ ಮ=ಆಯ್ಕೆ ಮಾಡುವ ಸಾಧ್ಯತೆ ಇದೆ.

IND vs SL 3rd T20I: Rajkot Weather Forecast and Pitch Report for the T20I  match between India and Sri Lanka, January 7

ಭಾರತ ಮತ್ತು ಶ್ರೀಲಂಕಾ ಹೆಡ್ ಟು ಹೆಡ್:

ಭಾರತ ಮತ್ತು ಶ್ರೀಲಂಕಾ ನಡುವೆ ಈವರೆಗೆ ಒಟ್ಟು 28 ಟಿ20 ಅಂತಾರಾಷ್ಟ್ರೀಯ ಪಂದ್ಯಗಳು ನಡೆದಿವೆ. ಟೀಂ ಇಂಡಿಯಾ 18 ಪಂದ್ಯಗಳನ್ನು ಗೆದ್ದಿದ್ದರೆ, ಶ್ರೀಲಂಕಾ 9 ಪಂದ್ಯಗಳನ್ನು ಗೆದ್ದಿದೆ. ಈ ಸಂದರ್ಭದಲ್ಲಿ ಒಂದು ಪಂದ್ಯ ರದ್ದಾಗಿತ್ತು. ಶ್ರೀಲಂಕಾ ವಿರುದ್ಧದ ಟಿ20ಯಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡ 7 ಪಂದ್ಯಗಳನ್ನು ಗೆದ್ದಿದ್ದರೆ, ಶ್ರೀಲಂಕಾ 2 ಪಂದ್ಯಗಳನ್ನು ಗೆದ್ದಿದೆ. ಚೇಸಿಂಗ್ ಸಮಯದಲ್ಲಿ ಟೀಂ ಇಂಡಿಯಾ ಶ್ರೀಲಂಕಾ ವಿರುದ್ಧ 10 ಪಂದ್ಯಗಳನ್ನು ಗೆದ್ದಿದ್ದರೆ, ಪ್ರವಾಸಿ ತಂಡದ ಖಾತೆಯಲ್ಲಿ 7 ಗೆಲುವುಗಳಿವೆ.

ಭಾರತ ಸಂಭಾವ್ಯ ಪ್ಲೇಯಿಂಗ್​ 11: ಹಾರ್ದಿಕ್ ಪಾಂಡ್ಯ (ನಾಯಕ), ಇಶಾನ್ ಕಿಶನ್, ರುತುರಾಜ್ ಗಾಯಕ್ವಾಡ್, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಹರ್ಷಲ್ ಪಟೇಲ್, ಉಮ್ರಾನ್ ಮಲಿಕ್ , ಶಿವಂ ಮಾವಿ.

ಶ್ರೀಲಂಕಾ ಸಂಭಾವ್ಯ ಪ್ಲೇಯಿಂಗ್​ 11: ಪಾತುಮ್ ನಿಸ್ಸಾಂಕ, ಕುಸಲ್ ಮೆಂಡಿಸ್, ಧನಂಜಯ ಡಿ ಸಿಲ್ವಾ, ಚರಿತ್ ಅಸಲಂಕಾ, ಭಾನುಕ ರಾಜಪಕ್ಸೆ, ದಸುನ್ ಶಾನಕ(ನಾಯಕ), ವನಿಂದು ಹಸರಂಗ, ಚಮಿಕಾ ಕರುಣಾರತ್ನೆ, ಮಹೀಶ್ ತೀಕ್ಷಣ, ಕಸುನ್ ರಜಿತಾ, ದಿಲ್ಶನ್ ಮಧುಶಂಕ.

India vs Sri Lanka 3rd T20 pitch report and weather forecast updates.