ಅಪಘಾತದ ಬಳಿಕ ರಿಷಭ್ ಪಂತ್ ಮೊದಲ ಸಂದೇಶ, "ನಾನು ಸುಧಾರಿಸಿಕೊಳ್ಳುತ್ತಿದ್ದೇನೆ" ಎಂದ ಕ್ರಿಕೆಟಿಗ!

17-01-23 01:20 pm       Source: news18   ಕ್ರೀಡೆ

ಭೀಕರ ಅಪಘಾತದಲ್ಲಿ ಗಾಯಗೊಂಡ ಖ್ಯಾತ ಕ್ರಿಕೆಟಿಗ ರಿಷಭ್ ಪಂತ್ (Rishabh Pant) ಇದೀಗ ಕೊಂಚ ಚೇತರಿಸಿಕೊಳ್ಳುತ್ತಿದ್ದಾರೆ. 2022ರ ಡಿಸೆಂಬರ್ 30ರಂದು ಟೀಂ ಇಂಡಿಯಾದ (Team India) ಯುವ ವಿಕೆಟ್ ಕೀಪರ್ (Wicket Keeper) ರಿಷಭ್ ಪಂತ್ ಕಾರು ಅಪಘಾತಕ್ಕೀಡಾಗಿತ್ತು (Car Accident).

ಸದ್ಯ ಕಳೆದ 18 ದಿನಗಳಿಂದ ಚಿಕಿತ್ಸೆ ಪಡೆಯುತ್ತಿರುವ ರಿಷಭ್ ಪಂತ್, ಇದೀಗ ತಮ್ಮ ಆರೋಗ್ಯದ ಕುರಿತು ತಾವೇ ಟ್ವೀಟ್ ಹಾಗೂ ಇನ್ಸ್‌ಸ್ಟಾ ಗ್ರಾಮ್‌ನಲ್ಲಿ ಮೆಸೇಜ್ ಮಾಡಿದ್ದಾರೆ. “ನಾನು ಎಲ್ಲರಿಗೂ ವಿನಮ್ರ ಮತ್ತು ಕೃತಜ್ಞನಾಗಿದ್ದೇನೆ. ನಿಮ್ಮ ಅಪಾರ ಬೆಂಬಲಕ್ಕೆ ನನ್ನ ಅನಂತಾನಂತ ಧನ್ಯವಾದಗಳು. ನನ್ನ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ಇದೀಗ ನಾನು ಅನಾರೋಗ್ಯದಿಂದ ಸುಧಾರಿಸಿಕೊಳ್ಳುತ್ತಿದ್ದೇನೆ. ಇವನ್ನೆಲ್ಲ ನಿಮಗೆ ಹೇಳಬೇಕು ಅಂತ ಅನಿಸಿತು. ನಾನು ನಿಮಗೆ ಕೃತಜ್ಞನಾಗಿದ್ದೇನೆ. ಇದು ನನ್ನ ಆರೋಗ್ಯದ ಚೇತರಿಕೆಯ ಹಾದಿ. ನಿಮ್ಮೆಲ್ಲರಿಗೂ ನನ್ನ ಕೃತಜ್ಞತೆಗಳು. ಈ ರೀತಿಯ ಪದಗಳಲ್ಲಿ ಕೃತಜ್ಞತೆ ಹೇಳುವುದಕ್ಕೆ ಸಾಲುವುದದೇ ಇಲ್ಲ. ನಿಮ್ಮ ಬೆಂಬಲವೇ ನನಗೆ ಒಂದು ರೀತಿಯ ನೆಗೆಟಿವ್ ಎನರ್ಜಿ ಇದ್ದಂತೆ. ಈ ಕಷ್ಟದ ಸಮಯದಲ್ಲಿ ನನಗೆ ಅದೇ ಶಕ್ತಿ” ಅಂತ ರಿಷಭ್ ಪಂತ್ ಅಭಿಮಾನಿಗಳಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ಟ್ವೀಟ್ ಮೂಲಕವೂ ಧನ್ಯವಾದ ಅರ್ಪಣೆ

ಇನ್ನು ಟ್ವೀಟ್ ಮೂಲಕವೂ ರಿಷಭ್ ಪಂತ್ ಅಭಿಮಾನಿಗಳಿಗೆ ಧನ್ಯವಾದ ಅರ್ಪಿಸಿದ್ದಾರೆ. “ಎಲ್ಲಾ ಬೆಂಬಲ ಮತ್ತು ಶುಭ ಹಾರೈಕೆಗಳಿಗಾಗಿ ನಾನು ವಿನಮ್ರ ಮತ್ತು ಕೃತಜ್ಞನಾಗಿದ್ದೇನೆ. ನನ್ನ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ ಎಂದು ತಿಳಿಸಲು ನನಗೆ ಸಂತೋಷವಾಗಿದೆ. ಚೇತರಿಕೆಯ ಹಾದಿ ಪ್ರಾರಂಭವಾಗಿದೆ ಮತ್ತು ಮುಂಬರುವ ಸವಾಲುಗಳಿಗೆ ನಾನು ಸಿದ್ಧನಿದ್ದೇನೆ” ಅಂತ ಪಂತ್ ಟ್ವೀಟ್ ಮಾಡಿದ್ದಾರೆ.

Rishabh Pant issues first public message after accident

ಕೋಕಿಲಾ ಬೆನ್ ಆಸ್ಪತ್ರೆಯಲ್ಲಿ ಮುಂದುವರೆದ ಚಿಕಿತ್ಸೆ

ಅಂಧೇರಿ ಪಶ್ಚಿಮದಲ್ಲಿರುವ ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆಯಲ್ಲಿ ರಿಷಭ್ ಪಂತ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಆಸ್ಪತ್ರೆಯ ಸ್ಪೋರ್ಟ್ಸ್ ಮೆಡಿಸಿನ್ ಕೇಂದ್ರದ ಮುಖ್ಯಸ್ಥ ಮತ್ತು ಆರ್ತ್ರೋಸ್ಕೊಪಿ ಮತ್ತು ಭುಜದ ಸೇವೆಯ ನಿರ್ದೇಶಕ ಡಾ ಪಾರ್ದಿವಾಲಾ ಅವರ ಮೇಲ್ವಿಚಾರಣೆಯಲ್ಲಿ ಶಸ್ತ್ರಚಿಕಿತ್ಸೆ ನಡೆದಿದೆ.

Rishabh Pant Became Active On Social Media For The First Time After The Car  Accident - Latest Cricket News of today India

ಪಂತ್‌ಗೆ ಯಶಸ್ವಿ ಶಸ್ತ್ರ ಚಿಕಿತ್ಸೆ

ರಿಷಭ್ ಪಂತ್ ಈ ತಿಂಗಳ ಆರಂಭದಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. "ರಿಷಭ್ ಪಂತ್ ಅವರು ಶುಕ್ರವಾರ ಮೊಣಕಾಲಿನ ಅಸ್ಥಿರಜ್ಜು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಅವರು ವೀಕ್ಷಣೆಯಲ್ಲಿದ್ದಾರೆ. ಮುಂದಿನ ಕ್ರಮ ಮತ್ತು ಪುನರ್ವಸತಿಯನ್ನು ಡಾ ದಿನ್‌ಶಾ ಪರ್ದಿವಾಲಾ ಮತ್ತು ಬಿಸಿಸಿಐ ಕ್ರೀಡಾ ವಿಜ್ಞಾನ ಮತ್ತು ಔಷಧ ತಂಡವು ಅನುಸರಿಸುತ್ತದೆ" ಎಂದು ಬಿಸಿಸಿಐ ಮೂಲವು ಪಿಟಿಐಗೆ ತಿಳಿಸಿದೆ.

ಡಿಸೆಂಬರ್ 30ರಂದು ನಡೆದಿದ್ದ ಅಪಘಾತ

ಡಿಸೆಂಬರ್ 30 ರ ಮುಂಜಾನೆ ತನ್ನ ದೆಹಲಿಯಿಂದ ಡೆಹ್ರಾಡೂನ್‌ನಲ್ಲಿರುವ ತಮ್ಮ ಮನೆಗೆ ರಿಷಭ್ ಪಂತ್ ಮರಳುತ್ತಿದ್ದರು. ಹೊಸ ವರ್ಷಕ್ಕೆ ತಾಯಿಗೆ ಸಪ್‌ಪ್ರೈಸ್ ಕೊಡಬೇಕು ಅಂತ ವೇಗವಾಗಿ ಬರುತ್ತಿದ್ದ ರಿಷಭ್ ಪಂತ್ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡಿತ್ತು. ಅದೃಷ್ಟವಶಾತ್ ಪಂತ್ ಅಂದು ಪ್ರಾಣಾಪಾಯದಿಂದ ಪಾರಾಗಿದ್ದರು.

Cricket Rishabh Pant has recovered and thanked his fans through a Instagram Message.