ಭಾರತ-ನ್ಯೂಜಿಲ್ಯಾಂಡ್​ 2ನೇ ಏಕದಿನ ಪಂದ್ಯ, ಎಲ್ಲಿ? ಎಷ್ಟು ಗಂಟೆಗೆ? ಪ್ಲೇಯಿಂಗ್​ 11 ವಿವರ

21-01-23 12:22 pm       Source: news18   ಕ್ರೀಡೆ

ಲಭಾರತ ಮತ್ತು ನ್ಯೂಜಿಲೆಂಡ್ (IND vs NZ) ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ 2ನೇ ಪಂದ್ಯ ಇಂದು ನಡೆಯಲಿದೆ. ಮೊದಲ ಪಂದ್ಯವನ್ನು ಗೆಲ್ಲುವ ಮೂಲಕ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿರುವ ಟೀಂ ಇಂಡಿಯಾ (Team India) ಸರಣಿ ವಶಪಡಿಸಿಕೊಳ್ಳಲು ಭರ್ಜರಿ ಸಿದ್ಧತೆ ನಡೆಸುತ್ತಿದೆ.

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ODI ಯಾವಾಗ ನಡೆಯಲಿದೆ?
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಏಕದಿನ ಪಂದ್ಯ ಇಂದು ಮಧ್ಯಾಹ್ನ ನಡೆಯಲಿದೆ.

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 2ನೇ ಏಕದಿನ ಪಂದ್ಯ ಎಲ್ಲಿ ನಡೆಯಲಿದೆ?
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಏಕದಿನ ಪಂದ್ಯವು ರಾಯ್‌ಪುರದ ಶಹೀದ್ ವೀರ್ ನಾರಾಯಣ ಸಿಂಗ್ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ.

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 2ನೇ ಏಕದಿನ ಪಂದ್ಯ ಎಷ್ಟು ಗಂಟೆಗೆ ಆರಂಭವಾಗಲಿದೆ?
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಏಕದಿನ ಪಂದ್ಯವು ಭಾರತೀಯ ಕಾಲಮಾನ ಮಧ್ಯಾಹ್ನ 1.30ಕ್ಕೆ ಪ್ರಾರಂಭವಾಗಲಿದೆ. ಪಂದ್ಯ ಆರಂಭವಾಗುವ ಅರ್ಧ ಗಂಟೆ ಮೊದಲು ಅಂದರೆ ಮಧ್ಯಾಹ್ನ 1 ಗಂಟೆಗೆ ಟಾಸ್ ಮಾಡಲಾಗುತ್ತದೆ.

Ind vs NZ 2nd ODI Live Streaming: दूसरे वनडे से जुड़ी सारी जानकारी, कब,  कहां और कैसे देखें मैच - india vs new zealand 2nd odi when and where to watch  live

ಭಾರತ-ನ್ಯೂಜಿಲೆಂಡ್ 2ನೇ ODI ಅನ್ನು ನೀವು ಯಾವ ಚಾನಲ್‌ನಲ್ಲಿ ಲೈವ್ ವೀಕ್ಷಿಸಬಹುದು?
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ODI ನ ನೇರ ಪ್ರಸಾರವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ವಿವಿಧ ಚಾನಲ್‌ಗಳಲ್ಲಿ ವೀಕ್ಷಿಸಬಹುದು. ಅದೇ ಸಮಯದಲ್ಲಿ ದೂರದರ್ಶನದ ಡಿಡಿ ಸ್ಪೋರ್ಟ್ಸ್ ಚಾನೆಲ್‌ನಲ್ಲಿಯೂ ಪಂದ್ಯ ಪ್ರಸಾರವಾಗಲಿದೆ.

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 2ನೇ ODI ನ ಲೈವ್ ಸ್ಟ್ರೀಮಿಂಗ್ ಅನ್ನು ಎಲ್ಲಿ ವೀಕ್ಷಿಸಬೇಕು?
ಹಾಟ್‌ಸ್ಟಾರ್‌ನಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ODI ನ ಲೈವ್ ಸ್ಟ್ರೀಮಿಂಗ್ ಅನ್ನು ವೀಕ್ಷಿಸಬಹುದು.

IND Vs NZ 2nd ODI Live Streaming When Where To Watch India Vs New Zealand  Match Live Telecast Online TV

ಭಾರತ ತಂಡದಲ್ಲಿ ಬದಲಾವಣೆ:

ಇನ್ನು, ಎರಡನೇ ಪಂದ್ಯದಲ್ಲಿ ನಾಯಕ  ರೋಹಿತ್  ಶರ್ಮಾ ಪ್ಲೇಯಿಂಗ್​ 11ನಲ್ಲಿ ಬದಲಾವಣೆ ತರುವ ಸಾಧ್ಯತೆಗಳಿವೆ. ಹೀಗಾಗಿ ಶಾರ್ದೂಲ್​ ಠಾಕೂರ್​ ಬದಲಿಗೆ ಇಂದಿನ ಪಂದ್ಯದಲ್ಲಿ ಉಮ್ರಾನ್​ ಮಲಿಕ್​ ಅವರನ್ನು ತಂಡಕ್ಕೆ ಆಯ್ಕೆ ಮಾಡುವ ಸಾಧ್ಯತೆ ಹೆಚ್ಚಿದೆ.

ಭಾರತ ಮತ್ತು ನ್ಯೂಜಿಲೆಂಡ್ ಸಂಭಾವ್ಯ ತಂಡ:

ಭಾರತ ಸಂಭಾವ್ಯ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಉಮ್ರಾನ್ ಮಲಿಕ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್

ನ್ಯೂಜಿಲೆಂಡ್ ಸಂಭಾವ್ಯ ತಂಡ: ಟಾಮ್ ಲ್ಯಾಥಮ್ (ನಾಯಕ), ಫಿನ್ ಅಲೆನ್, ಡೆವೊನ್ ಕಾನ್ವೇ, ಹೆನ್ರಿ ನಿಕೋಲ್ಸ್, ಡೇರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಬ್ರೇಸ್‌ವೆಲ್, ಮಿಚೆಲ್ ಸ್ಯಾಂಟ್ನರ್, ಇಶ್ ಸೋಧಿ, ಲಾಕಿ ಫರ್ಗುಸನ್, ಬ್ಲೇರ್ ಟಿಕ್ನರ್.

IND vs NZ 2nd odi when and where to watch live Streaming.