ಬ್ರೇಕಿಂಗ್ ನ್ಯೂಸ್
04-02-23 11:22 am Source: news18 ಕ್ರೀಡೆ
ಬಿಸಿಸಿಐ ಮೂಲಗಳ ಪ್ರಕಾರ, ಪಾಕಿಸ್ತಾನವು ಸೆಪ್ಟೆಂಬರ್‌ನಲ್ಲಿ ಏಷ್ಯಾಕಪ್ ಅನ್ನು ಆಯೋಜಿಸುವ ಅವಕಾಶವಿಲ್ಲ. ಪಂದ್ಯಾವಳಿಯು ಯುನೈಟೆಡ್ ಅರಬ್ ಎಮಿರೇಟ್ಸ್ (UAE) ನಲ್ಲಿ ನಡೆಯಲಿದೆ ಮತ್ತು ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಹೋಸ್ಟಿಂಗ್ ಹಕ್ಕುಗಳನ್ನು ಉಳಿಸಿಕೊಳ್ಳುತ್ತದೆ, ಅಥವಾ ಶ್ರೀಲಂಕಾ ಮತ್ತೊಂದು ಆಯ್ಕೆಯಾಗಿರಬಹುದು ಎಂದು ಹೇಳಲಾಗುತ್ತಿದೆ.
ಜಯ್ ಶಾ ಪ್ರಸ್ತುತ ಎಸಿಸಿ ಸಭೆಗಾಗಿ ಬಹ್ರೇನ್‌ನಲ್ಲಿದ್ದಾರೆ. ಬಿಸಿಸಿಐ ತನ್ನ ನಿಲುವು ಬದಲಿಸುವುದಿಲ್ಲ. ಸರ್ಕಾರದಿಂದ ಒಪ್ಪಿಗೆ ಸಿಗದ ಕಾರಣ ನಾವು ಪಾಕಿಸ್ತಾನಕ್ಕೆ ಹೋಗುವುದಿಲ್ಲ. ಪೇಶಾವರದಲ್ಲಿ ಇತ್ತೀಚೆಗೆ ನಡೆದ ಬಾಂಬ್ ಸ್ಫೋಟವು ಪಾಕಿಸ್ತಾನದಲ್ಲಿ ಕ್ರಿಕೆಟ್ ಪಂದ್ಯಾವಳಿಗಳನ್ನು ಪುನರಾರಂಭಿಸುವ ಬಗ್ಗೆ ಭದ್ರತಾ ಕಳವಳವನ್ನು ಹೆಚ್ಚಿಸಿದೆ ಎಂದು ಹೇಳಿದ್ದಾರೆ. ಕಳೆದ ವರ್ಷ ಡಿಸೆಂಬರ್‌ನಲ್ಲಿ ಎಸಿಸಿ ಅಧ್ಯಕ್ಷ ಶಾ ಅವರು ಕಾಂಟಿನೆಂಟಲ್ ಪಂದ್ಯಾವಳಿಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದರು ಮತ್ತು ಏಷ್ಯಾಕಪ್ ನಡೆಯುವ ಸ್ಥಳವನ್ನು ಉಲ್ಲೇಖಿಸಲಾಗಿಲ್ಲ. ಇದಾದ ಬಳಿಕ ಷಾ ಏಕಪಕ್ಷೀಯ ನಿರ್ಧಾರ ಕೈಗೊಂಡಿದ್ದಾರೆ ಎಂದು ಸೇಥಿ ಆರೋಪಿಸಿದರು. ಈ ಹಿಂದೆ ಏಷ್ಯಾದಲ್ಲಿ ನಡೆಯಲಿರುವ ಈ ಪ್ರತಿಷ್ಠಿತ ಟೂರ್ನಿಗೆ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಮಾರ್ಗಸೂಚಿ ಸಿದ್ಧಪಡಿಸಿತ್ತು.

18 ವರ್ಷಗಳ ಹಿಂದೆ ಕೊನೆಯ ಪ್ರವಾಸ:
2005-06ರಲ್ಲಿ ಕೊನೆಯ ಬಾರಿಗೆ ಭಾರತ ಕ್ರಿಕೆಟ್ ತಂಡ ಪಾಕಿಸ್ತಾನ ಪ್ರವಾಸಕ್ಕೆ ತೆರಳಿತ್ತು. ನಂತರ ಭಾರತ ಏಕದಿನ ಸರಣಿಯಲ್ಲಿ ಪಾಕಿಸ್ತಾನವನ್ನು 4-1 ಅಂತರದಿಂದ ಸೋಲಿಸಿತು. ಅಂದಿನಿಂದ ಇದುವರೆಗೂ ಟೀಂ ಇಂಡಿಯಾ ಪಾಕಿಸ್ತಾನಕ್ಕೆ ಹೋಗಿಲ್ಲ. ಅದೇ ಸಮಯದಲ್ಲಿ, ಪಾಕಿಸ್ತಾನ ತಂಡವು 2012 ರಲ್ಲಿ ಕೊನೆಯ ಬಾರಿಗೆ ಭಾರತಕ್ಕೆ ಬಂದಿತ್ತು. ನಂತರ ಉಭಯ ದೇಶಗಳ ನಡುವೆ ಟಿ20 ಹಾಗೂ ಏಕದಿನ ಸರಣಿ ನಡೆದಿಲ್ಲ. ಕೇವಲ ಐಸಿಸಿ ಟೂರ್ನಿಗಳಲ್ಲಿ ಮಾತ್ರ ಉಭಯ ತಂಡಗಳು ಮುಖಾಮುಖಿಯಾಗುತ್ತಿವೆ.
ದ್ವಿಪಕ್ಷೀಯ ಸರಣಿ ಸಹ ಇಲ್ಲ:
ಬಹುರಾಷ್ಟ್ರಗಳ ಪಂದ್ಯಾವಳಿಯ ಹೊರತಾಗಿಯೂ. ಭಾರತೀಯ ಪುರುಷರ ಕ್ರಿಕೆಟ್ ತಂಡವು 2023-2027ರಿಂದ 38 ಟೆಸ್ಟ್ ಪಂದ್ಯಗಳನ್ನು ಆಡಲಿದೆ. ಇದರಲ್ಲಿ 20 ಸ್ವದೇಶದಲ್ಲಿ ಮತ್ತು 18 ವಿದೇಶಿ ನೆಲದಲ್ಲಿ ಸೇರಿವೆ. ಟೀಂ ಇಂಡಿಯಾ ತವರಿನಲ್ಲಿ 21 ಪಂದ್ಯಗಳನ್ನು ಆಡಲಿದ್ದು. ವಿದೇಶದಲ್ಲೂ ಅಷ್ಟೇ ಸಂಖ್ಯೆಯ ಏಕದಿನ ಪಂದ್ಯಗಳನ್ನು ಆಡಲಿದೆ. ಈ ಅವಧಿಯಲ್ಲಿ ಭಾರತ ತವರಿನಲ್ಲಿ 31 ಮತ್ತು ವಿದೇಶದಲ್ಲಿ 30 ಟಿ20 ಪಂದ್ಯಗಳನ್ನು ಆಡಬೇಕಿದೆ. ಹೀಗಾಗಿ ಟೀಂ ಇಂಡಿಯಾ ಶಡ್ಯೂಲ್ ಸಖತ್ ಬ್ಯುಸಿಯಾಗಿದ್ದು, ಪಾಕ್ ಜೊತೆಗಿನ ದ್ವಿಪಕ್ಷೀಯ ಸರಣಿ ಬಹುತೇಕ 2027ರವರೆಗೆ ನಡೆಯುವುದು ಡೌಟ್ ಎನ್ನಲಾಗುತ್ತಿದೆ.
Today will be the Final Decision whether India will go to Pakistan for Asia Cup 2023 or Not.
10-12-25 12:58 pm
Bangalore Correspondent
ಮಹಿಳಾ ಉದ್ಯೋಗಿಗಳಿಗೆ ಋತುಚಕ್ರ ರಜೆ ; ಹೊಟೇಲುಗಳ ಸಂಘ...
09-12-25 08:56 pm
ಶಾಲಾ ಬಸ್ಸಿನಡಿಗೆ ಬಿದ್ದು ಎಂಟು ವರ್ಷದ ಬಾಲಕಿ ದುರಂತ...
09-12-25 08:53 pm
ಕಾಂಗ್ರೆಸ್ ಗ್ಯಾರಂಟಿ ವಿರುದ್ಧ ಸುಪ್ರೀಂ ಕೋರ್ಟಿಗೆ ಅ...
08-12-25 10:39 pm
DK Shivakumar, Yathindras: ಡಿಸಿಎಂ ಡಿಕೆಶಿ ತಮಗೊ...
08-12-25 06:58 pm
10-12-25 01:17 pm
HK News Desk
ಮಾಜಿ ಸಿಜೆಐ ಗವಾಯಿಗೆ ಶೂ ಎಸೆದಿದ್ದ ವಕೀಲ ರಾಕೇಶ್ ಕಿ...
09-12-25 11:03 pm
Goa Fire Accident, 23 dead: ಗೋವಾದ ನೈಟ್ಕ್ಲಬ್...
07-12-25 02:04 pm
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
09-12-25 07:30 pm
HK News Desk
ರಿಷಬ್ ಶೆಟ್ಟಿ ತೊಡೆಯ ಮೇಲೆ ಮಲಗಿದ ದೈವ ! ಹರಕೆ ನೇಮದ...
09-12-25 05:21 pm
ಎರಡೂವರೆ ಗಂಟೆ ಕಾದರೂ ಸಿಗದ ಆಂಬುಲೆನ್ಸ್ ; ಗೂಡ್ಸ್ ಟ...
09-12-25 11:55 am
ಭಗವದ್ಗೀತೆ ಮತ್ತು ಮಹಿಳೆ ಬಗ್ಗೆ ಅವಹೇಳನ ಪೋಸ್ಟ್ ; ವ...
08-12-25 10:11 pm
Mangalore, Puttur, Mahesh Shetty Timarodi: ಪ್...
08-12-25 04:52 pm
09-12-25 04:33 pm
Mangalore Correspondent
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am
ಗಡಿಭಾಗ ತಲಪಾಡಿಯಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ; ಎರ...
08-12-25 09:29 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm
Ganesh Gowda, Chikkamagaluru, Congress, Murde...
06-12-25 02:43 pm