ಬ್ರೇಕಿಂಗ್ ನ್ಯೂಸ್
08-02-23 01:48 pm Source: news18 ಕ್ರೀಡೆ
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC 2023) ಅಂಗವಾಗಿ ಆಸೀಸ್ ವಿರುದ್ಧದ ಸರಣಿ ಭಾರತಕ್ಕೆ ಅತ್ಯಂತ ಮಹ್ವತದ್ದಾಗಿದೆ. ಫೈನಲ್‌ಗೆ ತಲುಪಬೇಕಾದರೆ ಬಲಿಷ್ಠ ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡ ಗೆಲ್ಲಲೇಬೇಕಾಗಿದೆ. ಮೊದಲ ಟೆಸ್ಟ್ ಫೆಬ್ರವರಿ 9 ರಿಂದ ನಾಗ್ಪುರದಲ್ಲಿ ನಡೆಯಲಿದೆ. ಈ ಕ್ರಮದಲ್ಲಿ ಉಭಯ ತಂಡಗಳ ಆಟಗಾರರು ನಾಗ್ಪುರದಲ್ಲಿ ಅಭ್ಯಾಸ ಆರಂಭಿಸಿದ್ದಾರೆ. ಭಾರತ ತಂಡ ಸಹ ಈಗಾಗಲೇ ಸರಣಿಗಾಗಿ ಭರ್ಜರಿ ಸಿದ್ಧತೆ ನಡೆಸಿದೆ.
ಭಾರತೀಯ ಪಿಚ್‌ಗಳಲ್ಲಿ ಸಹಜ ಸ್ಪಿನ್‌ಗೆ ಸಿದ್ಧವಾಗಿದ್ದೇವೆ ಎಂದು ಆಸ್ಟ್ರೇಲಿಯಾ ತಂಡ ಹೇಳಿದೆ. ಈ ಕ್ರಮದಲ್ಲಿ ಉಭಯ ತಂಡಗಳ ನಡುವಿನ ಟೆಸ್ಟ್ ಸರಣಿ ಕುತೂಹಲ ಮೂಡಿಸುವುದು ಖಚಿತ ಎಂದಾಗಿದೆ. ಆಸ್ಟ್ರೇಲಿಯ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೆ ಅಂತಿಮ ತಂಡದ ಆಯ್ಕೆಯನ್ನು ನಿರ್ಧರಿಸಲು ರೋಹಿತ್ಗೆ ನಾಯಕನಾಗಿ ಕಷ್ಟಕರವಾಗಬಹುದು. ಯಾರನ್ನು ಆಡಿಸಬೇಕು, ಯಾರನ್ನು ಬೆಂಚ್ಗೆ ಸೀಮಿತಗೊಳಿಸಬೇಕು ಎಂಬ ಗೊಂದಲದಲ್ಲಿ ಕೋಚ್ ದ್ರಾವಿಡ್ ಹಾಗೂ ನಾಯಕ ಇದ್ದಾರೆ.
ಮೂವರು ಸ್ಪಿನ್ನರ್‌ಗಳು, ಇಬ್ಬರು ವೇಗಿಗಳ ಸೂತ್ರದಲ್ಲಿ ಭಾರತ ಕಣಕ್ಕಿಳಿಯಬಹುದು. ಇಲ್ಲವಾದರೆ ಮೂವರು ಸ್ಪಿನ್ನರ್‌ಗಳು, ಮೂವರು ವೇಗಿಗಳನ್ನು ಕಣಕ್ಕಿಳಿಸಬಹುದು. ಆದರೆ ಪಿಚ್ ಸ್ಪಿನ್‌ಗೆ ಹೆಚ್ಚು ಸಹಾಯಕವಾಗಿರುವುದರಿಂದ ಇಬ್ಬರು ವೇಗಿಗಳೊಂದಿಗೆ ಕಣಕ್ಕೆ ಇಳಿಯುವ ಸಾಧ್ಯತೆ ಇದೆ. ಆ ಮೂಲಕ ಮೊದಲ ಟೆಸ್ಟ್ ನ ಅಂತಿಮ ತಂಡದಲ್ಲಿ ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್ ಮತ್ತು ಅಕ್ಷರ್ ಪಟೇಲ್ ಬೆಂಚ್ಗೆ ಸೀಮಿತವಾಗಲಿದ್ದಾರೆ. ರಿಷಭ್ ಪಂತ್ ಅನುಪಸ್ಥಿತಿಯಲ್ಲಿ ವಿಕೆಟ್ ಕೀಪರ್ ಆಗಿ ಇಶಾನ್ ಕಿಶನ್ ಬದಲಿಗೆ ಎಸ್. ಭರತ್ ಪದಾರ್ಪಣೆ ಮಾಡುವ ಸಾಧ್ಯತೆ ಇದೆ.
ಟಿ20 ಮಾದರಿಯಲ್ಲಿ ಅಬ್ಬರಿಸುವ ಮೂಲಕ ಆಲ್ ಫಾರ್ಮೆಟ್ ಆಟಗಾರ ಎನಿಸಿಕೊಂಡಿರುವ ಸೂರ್ಯಕುಮಾರ್ ಯಾದವ್ ಟೆಸ್ಟ್ ಗೆ ಪದಾರ್ಪಣೆ ಮಾಡಲು ಇನ್ನು ಕೆಲವು ದಿನ ಕಾಯಬೇಕಿದೆ. ಗಿಲ್ ಮತ್ತು ರೋಹಿತ್ ಶರ್ಮಾ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ. ರಾಹುಲ್ ಐದನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವ ಸಾಧ್ಯತೆ ಇದೆ.
IND vs AUS 1st test border Gavaskar Trophy team India Predicted Playing 11.
03-09-25 09:00 pm
HK News Desk
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
ಪ್ರೀಮಿಯಂ ಬ್ರಾಂಡ್ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ ;...
03-09-25 02:30 pm
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
04-09-25 08:47 pm
HK News Desk
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
04-09-25 11:07 pm
Mangalore Correspondent
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
Mangalore, Loudspeaker Ban: ರಾತ್ರಿ ವೇಳೆ ಧ್ವನಿ...
04-09-25 07:39 pm
KMC Attavar Performs Rare, Life-Saving Surger...
03-09-25 11:03 pm
04-09-25 01:10 pm
Udupi Correspondent
Udupi Crime, Baby Sale Racket: ಮಂಗಳೂರಿನ ಪ್ರತಿ...
04-09-25 12:25 pm
Bagalur Police, Drugs, Crime: ಬ್ಯುಸಿನೆಸ್ ವೀಸಾ...
03-09-25 05:40 pm
Gold Theft, Mangalore, Airport: ವಿಮಾನ ಪ್ರಯಾಣಿ...
02-09-25 07:09 pm
Valachil, Rape, College, Mangalore Crime: ಇನ್...
02-09-25 04:31 pm