ಬ್ರೇಕಿಂಗ್ ನ್ಯೂಸ್
09-02-23 12:31 pm Source: news18 ಕ್ರೀಡೆ
2023ರ ಮಹಿಳಾ ಟಿ20 ವಿಶ್ವಕಪ್‌ನ ಮೊದಲ ಅಭ್ಯಾಸ ಪಂದ್ಯದಲ್ಲಿ ಟೀಂ ಇಂಡಿಯಾ ಮಹಿಳಾ ತಂಡ ಕಳಪೆ ಪ್ರದರ್ಶನ ನೀಡಿದ್ದು ಗೊತ್ತೇ ಇದೆ. ಆಸ್ಟ್ರೇಲಿಯಾ ಕೈಯಲ್ಲಿ ಕೇವಲ 85 ರನ್‌ಗಳಿಗೆ ಕುಸಿದು ನಿರಾಸೆ ಮೂಡಿಸಿತು. ಆದರೆ, ಬಾಂಗ್ಲಾದೇಶ ವಿರುದ್ಧದ ಎರಡನೇ ಅಭ್ಯಾಸ ಪಂದ್ಯದಲ್ಲಿ ಭಾರತ ಭರ್ಜರಿ ಪ್ರದರ್ಶನ ನೀಡಿದೆ. ಅದರಲ್ಲೂ ವಿಕೆಟ್ ಕೀಪರ್ ಬ್ಯಾಟರ್ ರಿಚಾ ಘೋಷ್ ಅದ್ಭುತ ಪ್ರದರ್ಶನ ನೀಡಿದ್ದಾರೆ.
ಅವರು ಕೇವಲ 56 ಎಸೆತಗಳಲ್ಲಿ ಅಜೇಯ 91 ರನ್ ಗಳಿಸಿದರು. ಇದರಲ್ಲಿ 3 ಬೌಂಡರಿ ಹಾಗೂ 9 ಸಿಕ್ಸರ್‌ಗಳು ಬಂದಿದ್ದವು. ಇದೇ ವೇಳೆ ಬಾಂಗ್ಲಾದೇಶದ ಹಿರಿಯ ಬೌಲರ್ ಜಹನಾರಾ ಅವರಿಗೆ 4 ಓವರ್‌ಗಳಲ್ಲಿ 54 ರನ್ ನೀಡಿದರು. ರಿಚಾ ಘೋಷ್ ಇತ್ತೀಚೆಗೆ ಟಿ20 ಮಾದರಿಯಲ್ಲಿ ಸೂಪರ್ ಫಾರ್ಮ್‌ನಲ್ಲಿದ್ದಾರೆ. ಅದರಲ್ಲೂ ಟಿ20 ಮಾದರಿಯಲ್ಲಿ ಫಿನಿಶರ್ ಪಾತ್ರವನ್ನು ಉತ್ತಮವಾಗಿ ನಿರ್ವಹಿಸುತ್ತಿದ್ದಾರೆ. ರಿಚಾ ಘೋಷ್ ಕಳೆದ ವರ್ಷ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಲ್ಲಿ ಫಿನಿಶರ್ ಆಗಿ ಉತ್ತಮ ಪ್ರದರ್ಶನ ನೀಡಿದ್ದರು.


ಇದೀಗ ಅಭಿಮಾನಿಗಳು ಅವರಿಗೆ ಲೇಡಿ ಧೋನಿ ಎಂಬ ಟ್ಯಾಗ್ ನೀಡಿದ್ದಾರೆ. ಈ ಪಂದ್ಯದಲ್ಲಿ ರಿಚಾ ಘೋಷ್ ಅವರೊಂದಿಗೆ ಜೆಮಿಮಾ ರಾಡ್ರಿಗಸ್ 27 ಎಸೆತಗಳಲ್ಲಿ 6 ಬೌಂಡರಿ, 1 ಸಿಕ್ಸರ್ ಮೂಲಕ 41 ರನ್ಗಳಿಸಿದರು. ಇದರಿಂದಾಗಿ ಭಾರತ 20 ಓವರ್‌ಗಳಲ್ಲಿ 5 ವಿಕೆಟ್‌ಗೆ 183 ರನ್ ಗಳಿಸಿತು. ಬಳಿಕ ಬಾಂಗ್ಲಾದೇಶ 20 ಓವರ್‌ಗಳಲ್ಲಿ 8 ವಿಕೆಟ್‌ಗೆ 131 ರನ್‌ಗಳಿಸುವ ಮೂಲಕ ಸೋಲನ್ನಪ್ಪಿತು. ಭಾರತದ ಬೌಲರ್‌ಗಳ ಪೈಕಿ ದೇವಿಕಾ ವೈದ್ಯ ಎರಡು ವಿಕೆಟ್ ಪಡೆದರು. ಈ ಟೂರ್ನಿಯಲ್ಲಿ ಭಾರತ ನೆಚ್ಚಿನ ತಂಡಗಳಲ್ಲಿ ಒಂದಾಗಿ ಕಣಕ್ಕಿಳಿಯುತ್ತಿದೆ.


ಆಸ್ಟ್ರೇಲಿಯಾದಲ್ಲಿ ನಡೆದ 2020ರ ಟಿ20 ವಿಶ್ವಕಪ್‌ನ ಫೈನಲ್‌ನಲ್ಲಿ ಟೀಂ ಇಂಡಿಯಾ ಸೋತಿತ್ತು. ನಂತರ ಆಸ್ಟ್ರೇಲಿಯಾ ವಿರುದ್ಧ ಸೋತ ಭಾರತ ರನ್ನರ್ ಅಪ್ ಆಗಿತ್ತು. ಹೀಗಾಗಿ ಈ ಬಾಋಇಯಾದರೂ ವಿಶ್ವಕಪ್ ಗೆಲ್ಲಬೇಕೆಂಬ ಹಠದಲ್ಲಿ ಟೀಂ ಇಂಡಿಯಾ ಕಣಕ್ಕಿಳಿದಿದೆ. ಭಾರತ ತನ್ನ ಮೊದಲ ಪಂದ್ಯದಲ್ಲಿ ತನ್ನ ಬಹುಕಾಲದ ಎದುರಾಳಿ ಪಾಕಿಸ್ತಾನವನ್ನು ಎದುರಿಸಲಿದೆ. ಫೆ.12ರಂದು ನಡೆಯಲಿರುವ ಈ ಪಂದ್ಯದಲ್ಲಿ ಭಾರತ ಪಾಕಿಸ್ತಾನವನ್ನು ಎದುರಿಸಲಿದೆ. ಈ ಪಂದ್ಯ ಭಾರತೀಯ ಕಾಲಮಾನದ ಪ್ರಕಾರ ಸಂಜೆ ನಡೆಯಲಿದೆ. 6.30ಕ್ಕೆ ಆರಂಭವಾಗಲಿದೆ.
Womens T20 World Cup 2023 India Win against Bangladesh in Warm up Match.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 11:45 am
HK News Staffer
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm