ಬ್ರೇಕಿಂಗ್ ನ್ಯೂಸ್
08-03-23 02:57 pm Source: news18 ಕ್ರೀಡೆ
ಬಹುನಿರೀಕ್ಷಿತ ಮಹಿಳಾ ಪ್ರೀಮಿಯರ್ ಲೀಗ್ (wpl 2023) ಈಗಾಗಲೇ ಮಾರ್ಚ್ 4 ರಿಂದ ಆರಂಭವಾಗಿದೆ. ಈಗಾಗಲೇ 5 ಪಂದ್ಯಗಳ ಯಶಸ್ವಿಯಾಗಿ ಮುಗಿದಿವೆ. ವುಮೆನ್ಸ್ ಪ್ರೀಮಿಯರ್ ಲೀಗ್ ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಇಂದು ನಡೆಯುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಜೇಂಟ್ಸ್ ನಡುವಿನ ಪಂದ್ಯಕ್ಕೆ ಬಿಸಿಸಿಐ ಪ್ರತಿಯೊಬ್ಬರಿಗೂ ಉಚಿತ ಟಿಕೆಟ್ ಘೋಷಣೆ ಮಾಡಿದೆ.
ಮಹಿಳಾ ದಿನಾಚರಣೆಯನ್ನ ವಿಶೇಷವಾಗಿ ಆಚರಿಸಲು ಬಿಸಿಸಿಐ ನಿರ್ಧರಿಸಿದ್ದು ಇಂದಿನ ಪಂದ್ಯಕ್ಕೆ ಉಚಿತ ಪ್ರವೇಶ ಕಲ್ಪಿಸಿದೆ. ಇದು ವಿಶೇಷ ದಿನವನ್ನು ಮತ್ತಷ್ಟು ವಿಶೇಷವಾಗಿ ಮಾಡುವ ಮಾರ್ಗ ಎಂದು ಟ್ವಿಟರ್ನಲ್ಲಿ ಬರೆದುಕೊಂಡಿದೆ. ಮಹಿಳೆಯರ ಕ್ರಿಕೆಟ್ ಉತ್ತೇಜನಗೊಳಿಸಲು ಈಗಾಗಲೆ ಟೂರ್ನಿಯಲ್ಲಿ ಮಹಿಳೆಯರಿಗೆ ಉಚಿತ ಟಿಕೆಟ್ಗಳನ್ನು ನೀಡಲಾಗುತ್ತಿದೆ. ಪುರುಷರಿಗೆ ಮಾತ್ರ 100 ರಿಂದ 400 ರೂಗಳಿಗೆ ಟಿಕೆಟ್ ಮಾರಾಟ ಮಾಡಲಾಗುತ್ತಿದೆ.


ಇದೀಗ ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಪುರುಷರಿಗೂ ಕೂಡ ಉಚಿತ ಟಿಕೆಟ್ ಸಿಗಲಿದೆ. ಮುಂಬೈನ ಬ್ರಬೌರ್ನ್ ಸ್ಟೇಡಿಯಂನಲ್ಲಿ ಇಂದು ಸಂಜೆ 8ಗಂಟೆಗ ಗುಜರಾತ್ ಮತ್ತು ಬೆಂಗಳೂರು ನಡುವೆ ಪಂದ್ಯ ನಡೆಯಲಿದೆ. ಮೊದಲು ಬಂದವರಿಗೆ ಮೊದಲ ಆದ್ಯತೆ ಎಂದು ತಿಳಿಸಲಾಗಿದೆ. ಹೀಗಾಗಿ ಸ್ಟೇಡಿಯಂ ತುಂಬಿದ ಬಳಿಕ ಬಂದವರಿಗೆ ಗ್ಯಾಲರಿಯಲ್ಲಿ ಕೂತು ಪಂದ್ಯವನ್ನು ವೀಕ್ಷಿಸಲು ಅವಕಾಶ ಇರುವುದಿಲ್ಲ. ಇನ್ನು ಟೂರ್ನಿಗೆ ಬರುವುದಾದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ ಎರಡು ಸೋಲುಗಳಿಂದ ಕಂಗೆಟ್ಟಿದೆ. ಮೊದಲ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 60 ರನ್ಗಳ ಸೋಲು ಕಂಡರೆ, 2ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 9 ವಿಕೆಟ್ಗಳ ಸೋಲು ಕಂಡಿತ್ತು.


ಇದೀಗ ಸೆಮಿಫೈನಲ್ ಪ್ರವೇಶಿಸಲು ಉಳಿದ ಎಲ್ಲಾ ಪಂದ್ಯಗಳನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಇತ್ತ ಗುಜರಾತ್ ಜೇಂಟ್ಸ್ ಕೂಡ ಆಡಿರುವ 2 ಪಂದ್ಯಗಳಲ್ಲಿ ಸೋಲು ಕಂಡಿದೆ. ಎರಡೂ ತಂಡಗಳೂ ಮೊದಲ ಗೆಲುವಿನ ನಿರೀಕ್ಷೆಯಲ್ಲಿವೆ.
WPL 2023 BCCI announces free tickets for GG vs RCB on international womens day.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm