ಬ್ರೇಕಿಂಗ್ ನ್ಯೂಸ್
09-03-23 11:17 am HK News Desk ಕ್ರೀಡೆ
ಅಹಮದಾಬಾದ್, ಮಾ.9: ಬಾರ್ಡರ್- ಗವಾಸ್ಕರ್ ಟ್ರೋಫಿಯ ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಅಂತಿಮ 4ನೇ ಟೆಸ್ಟ್ ಪಂದ್ಯಕ್ಕೆ ಅಹ್ಮದಾಬಾದ್ನ ಪ್ರಧಾನಮಂತ್ರಿ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಚಾಲನೆ ದೊರೆತಿದ್ದು, ಈಗಾಗಲೇ ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಸರಣಿಯಲ್ಲಿ ರೋಹಿತ್ ಬಳಗ 2-1ರಿಂದ ಮುನ್ನಡೆಯಲ್ಲಿದ್ದರೂ ಈ ಪಂದ್ಯದಲ್ಲಿ ಗೆದ್ದರೆ ಮಾತ್ರ ಯಾರನ್ನು ಅವಲಂಬಿಸದೆ ಟೆಸ್ಟ್ ವಿಶ್ವಕಪ್ ಫೈನಲ್ ಗೇರಲು ಸಾಧ್ಯವಾಗುತ್ತದೆ. ಅತ್ತ ಆಸೀಸ್ ಇಂದೋರ್ ಟೆಸ್ಟ್ ಜಯದೊಂದಿಗೆ ವಿಶ್ವಕಪ್ಪ ಫೈನಲ್ ಸ್ಥಾನ ಖಚಿತ ಪಡಿಸಿಕೊಂಡಿದ್ದು, ಮತ್ತೊಂದು ಗೆಲುವಿನೊಂದಿಗೆ ಸರಣಿಯಲ್ಲಿ ಸಮಬಲ ಸಾಧಿಸಲು ಕಾಯುತ್ತಿದೆ.
ವಿಶೇಷ ಎಂದರೆ ಈ ಟೆಸ್ಟ್ ಪಂದ್ಯ ವೀಕ್ಷಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಆಲ್ಬನೀಸ್ ಉಪಸ್ಥಿತರಿದ್ದಾರೆ. ಲಕ್ಷಕ್ಕೂ ಹೆಚ್ಚು ಜನರ ಸಮ್ಮುಖದಲ್ಲಿ ಉಭಯ ರಾಷ್ಟ್ರಗಳ ಪ್ರಧಾನಮಮಂತ್ರಿಗಳು ಪಂದ್ಯ ವೀಕ್ಷಣೆ ಮಾಡಲಿದ್ದಾರೆ.
ಎರಡು ದೇಶಗಳ ಪ್ರಧಾನಿಗಳು ಹಾಗೂ ಲಕ್ಷಾಂತರ ಕ್ರೀಡಾಭಿಮಾನಿಗಳು ಸೇರುವ ಹಿನ್ನಲೆ ಕ್ರೀಡಾಂಗಣ ಸೇರಿದಂತೆ ನಗರದಾದ್ಯಂತ ಪೊಲೀಸರು ಬಿಗಿ ಭದ್ರತಾ ವ್ಯವಸ್ಥೆ ಮಾಡಲಾಗಿದೆ. ಸುಮಾರು 3,000 ಖಾಕಿ ಪಡೆಯನ್ನು ನಿಯೋಜನೆ ಮಾಡಲಾಗಿದೆ.
4ನೇ ಟೆಸ್ಟ್ ನಲ್ಲಿ ಭಾರತ ಗೆದ್ದಿದ್ದೇ ಆದರೆ, ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್'ಗೇರುವುದರ ಜೊತೆಗೆ ಟೆಸ್ಟ್ ರ್ಯಾಂಕಿಂಗ್ ನಲ್ಲೂ ಅಗ್ರಸ್ಥಾನಕ್ಕೇರಲಿದೆ. ಇದರೊಂದಿಗೆ ಏಕಕಾಲದಲ್ಲಿ ಮೂರು ಮಾದರಿಯಲ್ಲಿ ನ.1 ಸ್ಥಾನ ಪಡೆದ ಸಾಧನೆ ಮಾಡಲಿದೆ. ಸತತ 4ನೇ ಬಾರಿ ಬಾರ್ಡರ್-ಗವಾಸ್ತರ್ ಟ್ರೋಫಿ ಭಾರತದ ಪಾಲಾಗಲಿದೆ.
Indian prime minister Narendra Modi and his Australian counterpart Anthony Albanese were in attendance on Day 1 of the Border-Gavaskar Trophy Test in Ahmedabad on Thursday. The two prime ministers were felicitated upon their arrival at the stadium, and then proceeded to present Test caps to their respective country's cricket captains before taking a lap of honour around the stadium.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 10:46 pm
Mangalore Correspondent
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm