ಬ್ರೇಕಿಂಗ್ ನ್ಯೂಸ್
09-03-23 01:31 pm Source: news18 ಕ್ರೀಡೆ
ಇನ್ನು ಸತತ 3 ಪಂದ್ಯವಾಡಿದ್ದ ವೇಗದ ಬೌಲರ್ ಮೊಹಮ್ಮದ್ ಸಿರಾಜ್ಗೆ ವಿಶ್ರಾಂತಿ ನೀಡಿ, ಬದಲಿಗೆ ಮೊಹಮ್ಮದ್ ಶಮಿ ಅವಕಾಶ ನೀಡಲಾಗಿದೆ. ಭಾರತ ಈ ಪಂದ್ಯದಲ್ಲೂ 3 ಸ್ಪಿನ್ನರ್ಗಳೊಂದಿಗೆ ಕಣಕ್ಕಿಳಿಯುತ್ತಿದೆ. ಅಶ್ವಿನ್, ಅಕ್ಷರ್ ಪಟೇಲ್ ಹಾಗೂ ರವೀಂದ್ರ ಜಡೇಜಾ ತಂಡದಲ್ಲಿದ್ದಾರೆ, ವೇಗಿಗಳ ವಿಭಾಗದಲ್ಲಿ ಶಮಿ ಜೊತೆಗೆ ಉಮೇಶ್ ಯಾದವ್ ತಂಡದಲ್ಲಿ ಅವಕಾಶ ಪಡೆದಿದ್ದಾರೆ.
ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ತಲುಪಿರುವ ಆಸೀಸ್
ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಆರಂಭಿಕ ಎರಡು ಪಂದ್ಯಗಳಲ್ಲಿ ಗೆಲುವು ಪಡೆಯುವ ಮೂಲಕ 2-0 ಮುನ್ನಡೆ ಪಡೆದುಕೊಂಡಿದ್ದ ಭಾರತ ತಂಡಕ್ಕೆ ಮೂರನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ 9 ವಿಕೆಟ್‌ಗಳಿಂದ ಗೆಲುವು ಸಾಧಿಸಿ ತಿರುಗೇಟು ನೀಡಿತ್ತು. ಆ ಮೂಲಕ ಪ್ರವಾಸಿ ತಂಡ ಅಧಿಕೃತವಾಗಿ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಅರ್ಹತೆ ಪಡೆದುಕೊಂಡಿದ್ದರು.
ಇದೀಗ ಭಾರತ ತಂಡದ ಈ ಪಂದ್ಯವನ್ನು ಗೆದ್ದರೆ 2023ರ ವಿಶ್ವಟೆಸ್ಟ್ ಚಾಂಪಿಯನ್ಶಿಪ್ಗೆ ನೇರ ಅರ್ಹತೆ ಗಿಟ್ಟಿಸಿಕೊಳ್ಳಲಿದೆ. ಈ ಪಂದ್ಯ ಸೋತರೆ ನ್ಯೂಜಿಲ್ಯಾಂಡ್ ಹಾಗೂ ಶ್ರೀಲಂಕಾ ನಡುವಿನ ಟೆಸ್ಟ್ ಸರಣಿಯಲ್ಲಿ ಫಲಿತಾಂಶದ ಮೇಲೆ ಭಾರತದ ಅರ್ಹತೆ ನಿರ್ಧಾರವಾಗಲಿದೆ.
ಪ್ರಧಾನ ಮಂತ್ರಿಗಳಿಂದ ಪಂದ್ಯ ವೀಕ್ಷಣೆ
75 ವರ್ಷದ ಇಂಡೋ-ಆಸ್ಟ್ರೇಲಿಯಾ ಬಾಂಧವ್ಯವನ್ನು ಗುರುತಿಸಲು ಭಾರತ ನರೇಂದ್ರ ಮೋದಿ ಮತ್ತು ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬೇನೀಸ್ ಪಂದ್ಯದ ಮೊದಲ ದಿನದಾಟ ವೀಕ್ಷಣೆ ಮಾಡಲಿದ್ದಾರೆ. ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾಂಧವ್ಯಕ್ಕೆ ಈ ವರ್ಷ 75 ವರ್ಷ ತುಂಬಲಿದೆ. ಅದರ ಸವಿನೆನಪಿಗಾಗಿ ಎರಡೂ ದೇಶಗಳ ಪ್ರಧಾನಿಗಳು ವಿಶ್ವದ ಅತಿದೊಡ್ಡ ಕ್ರೀಡಾಂಗಣದ ನಾಲ್ಕನೇ ಟೆಸ್ಟ್ ಪಂದ್ಯ ವೀಕ್ಷಿಸಲಿದ್ದಾರೆ. ಇಬ್ಬರೂ ಪ್ರಧಾನ ಮಂತ್ರಿಗಳು ಟಾಸ್ ಮಾಡುವ ಮೊದಲು ಉಭಯ ತಂಡಗಳ ನಾಯಕರಿಗೆ ಕ್ಯಾಪ್ ನೀಡಿದರು. ನಂತರ ವಿಶೇಷವಾಗಿ ಸಂಯೋಜಿಸಿದ್ದ ವಾಹನದಲ್ಲಿ ಮೈದಾನದ ಸುತ್ತಾ ಸುತ್ತು ಹಾಕಿ ಅಭಿಮಾನಿಗಳನ್ನು ಸ್ವಾಗತಿಸಿದರು.
ತಂಡಗಳ ವಿವರ
ಭಾರತ (ಪ್ಲೇಯಿಂಗ್ XI): ರೋಹಿತ್ ಶರ್ಮಾ(ನಾಯಕ), ಶುಭಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಶ್ರೀಕರ್ ಭರತ್(ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಮೊಹಮ್ಮದ್ ಶಮಿ, ಉಮೇಶ್ ಯಾದವ್
ಆಸ್ಟ್ರೇಲಿಯಾ (ಪ್ಲೇಯಿಂಗ್ XI): ಟ್ರಾವಿಸ್ ಹೆಡ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಶೇನ್, ಸ್ಟೀವನ್ ಸ್ಮಿತ್ (ನಾಯಕ), ಪೀಟರ್ ಹ್ಯಾಂಡ್ಸ್ಕಾಂಬ್, ಕ್ಯಾಮೆರಾನ್ ಗ್ರೀನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಮಿಚೆಲ್ ಸ್ಟಾರ್ಕ್, ಟಾಡ್ ಮರ್ಫಿ, ಮ್ಯಾಥ್ಯೂ ಕುಹ್ನೆಮನ್, ನಾಥನ್ ಲಿಯಾನ್
India vs Australia 4th test australia won the toss elected to bat first shami replaces sira.
24-01-26 08:31 pm
Mangaluru Staffer
ಸಿದ್ದರಾಮಯ್ಯ ಆಪ್ತ ಮರಿಗೌಡ ಮುಡಾದಿಂದ ಅಕ್ರಮ ನಿವೇಶನ...
23-01-26 03:21 pm
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
24-01-26 08:38 pm
HK staffer
ಮಂಜೇಶ್ವರ ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆ ; ಕೆಎಸ...
23-01-26 06:44 pm
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
24-01-26 11:23 pm
Mangaluru Staffer
ದೇಶದ ಅತಿ ಹಳೆಯ ತಾಂತ್ರಿಕ ಶಿಕ್ಷಣ ಸಂಸ್ಥೆ ಮಂಗಳೂರಿನ...
24-01-26 08:14 pm
ಬಹುಮುಖ ಪ್ರತಿಭೆಯ ಕಲಾವಿದ ಸ್ವಾತಿ ಸತೀಶ್ ಆತ್ಮಹತ್ಯೆ...
24-01-26 08:04 pm
ಯೆನಪೋಯ ವಿವಿಯಲ್ಲಿ ಮಾನಸಿಕ ಆರೋಗ್ಯ ನರ್ಸಿಂಗ್ ವಿಭಾಗ...
23-01-26 09:21 pm
National Conference on Neuropsychiatry Held a...
23-01-26 09:08 pm
25-01-26 10:11 pm
HK staffer
Indias Biggest Robbery in Belagavi: ಇಡೀ ದೇಶದಲ...
25-01-26 09:48 am
ರಾಮಕುಂಜ ; ತಂದೆ - ಮಗನ ಜಗಳ ದುರಂತ ಅಂತ್ಯ, ಚೂರಿ ಇರ...
24-01-26 11:18 pm
ಜನಾರ್ದನ ರೆಡ್ಡಿ ಮಾಡೆಲ್ ಹೌಸ್ ಗೆ ಬೆಂಕಿ ; ಎಂಟು ಮಂ...
24-01-26 08:53 pm
ಅವಧಿ ಮೀರಿದ ಮಾತ್ರೆ ನೀಡಿದ್ದಾಗಿ ವಿಡಿಯೋ ವೈರಲ್ ; ಕ...
24-01-26 02:13 pm