ಬ್ರೇಕಿಂಗ್ ನ್ಯೂಸ್
16-03-23 12:58 pm Source: news18 ಕ್ರೀಡೆ
ವುಮೆನ್ಸ್ ಪ್ರೀಮಿಯರ್ ಲೀಗ್ನಲ್ಲಿ RCB ತಂಡದ ಪಾಲಿಗೆ ಮರೀಚಿಕೆಯಾಗಿದ್ದ ಗೆಲುವು ಇಂದು ಅಂತಿಮವಾಗಿ ದೊರಕಿದೆ. WPL 2023ರ ಮೊದಲ ಗೆಲುವನ್ನು ಆರ್ಸಿಬಿ ದಕ್ಕಿಸಿಕೊಂಡಿದೆ. ಆಡಿರುವ 6 ಪಂದ್ಯಗಳಲ್ಲಿ ಸ್ಮೃತಿ ಮಂಧಾನ ಪಡೆ 1 ಗೆಲುವನ್ನು ದಾಖಲಿಸಿದೆ. ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್ನ 13ನೇ ಪಂದ್ಯದಲ್ಲಿ ಯುಪಿ ವಾರಿಯರ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಿದ್ದವು. ಟಾಸ್ ಗೆದ್ದ ಆರ್ಸಿಬಿ ಮೊದಲು ಬೌಲಿಂಗ್ ಆಯ್ದುಕೊಂಡಿತು.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಯುಪಿ ವಾರಿಯರ್ಸ್ ತಂಡವು 19.3 ಓವರ್ಗಳಲ್ಲಿ 135 ರನ್ಗಳಿಗೆ ತನ್ನೆಲ್ಲಾ 10 ವಿಕೆಟ್ ಕಳೆದುಕೊಂಡಿತು. ಯುಪಿ ಪರ ಗ್ರ್ಯಾಸಿ ಹಾರೀಸ್ 46 ರನ್ ಗಳಿಸಿದ್ದರು. ಬೆಂಗಳೂರು ಪರ ಸೋಫಿ ಡಿವೈನ್ ಮತ್ತು ಆಶಾ ಶೋಬನಾ ತಲಾ 2 ವಿಕೆಟ್, ಮೇಗನ್ ಶುಟ್ ಮತ್ತು ಶ್ರೇಯಾಂಕಾ ಪಾಟೀಲ್ 1 ವಿಕೆಟ್ ಪಡೆದರೆ ಎಲ್ಲಿಸ್ ಪೆರ್ರಿ 3 ವಿಕೆಟ್ ಪಡೆಯುವ ಮೂಲಕ ಯುಪಿ ಬ್ಯಾಟರ್ಗಳಿಗೆ ಕಡಿವಾಣ ಹಾಕುವಲ್ಲಿ ಯಶಸ್ವಿಯಾದರು.
ಯುಪಿ ವಿರುದ್ಧ ಅಂತಿಮವಾಗಿ ಆರ್ಸಿಬಿ ಚೊಚ್ಚಲ ಗೆಲುವನ್ನು ದಾಖಲಿಸಿದೆ. ಆರ್ಸಿಬಿ ತಂಡ 18 ಓವರ್ನಲ್ಲಿ 5 ವಿಕೆಟ್ ನಷ್ಟಕ್ಕೆ 136 ರನ್ ಗಳಿಸಿತು. ಆರ್ಸಿಬಿ ಪರ ಕನ್ನಿಕಾ 46 ರನ್ ಮತ್ತು ರಿಚಾ ಘೋಷ್ 31 ರನ್ ಗಳಿಸುವ ಮೂಲಕ ಪಂದ್ಯದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಇದರ ನಡುವೆ ಇಂದಿನ ಗೆಲುವಿನ ಜೊತೆ ಆರ್ಸಿಬಿ ತಂಡ ಉಳಿದಿರುವ 2 ಪಂದ್ಯಗಳಲ್ಲಿ ಗೆದ್ದರೆ ಎಲಿಮಿನೇಟರ್ ಹಂತಕ್ಕೇರಬಹುದು. ಇದು ಉಳಿದ ತಂಡಗಳ ಫಲಿತಾಂಶಗಳ ಮೇಲೆ ಅವಲಂಭಿತವಾಗಿದೆ. ಅಲ್ಲದೇ ಯುಪಿ ವಾರಿಯರ್ಸ್ ತಂಡವು ಮುಂದಿನ ಎಲ್ಲಾ ಪಂದ್ಯಗಳನ್ನೂ ಸೋಲಬೇಕು.
ಜೊತೆಗೆ ಗುಜರಾತ್ ಜೈಂಟ್ಸ್ ಸಹ ಕನಿಷ್ಠ 2 ಪಂದ್ಯ ಸೋಲಬೇಕಿದೆ. ಆಗ ಮಾತ್ರ ಆರ್ಸಿಬಿಗೆ ನೆಟ್ ರನ್ ರೇಟ್ ಮೂಲಕ ಎಲಿಮಿನೇಟರ್ ಹಂತಕ್ಕೆ ತಲುಪಲಿದೆ. ಪಾಯಿಂಟ್ ಟೇಬಲ್ನಲ್ಲಿ 2ನೇ ಹಾಗೂ 3ನೇ ಸ್ಥಾನದ ತಂಡ ಎಲಿಮಿನೇಟರ್ ಪಂದ್ಯ ಆಡಲಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಯಿಂಗ್ 11: ಸ್ಮೃತಿ ಮಂಧಾನ (ನಾಯಕಿ), ಸೋಫಿ ಡಿವೈನ್, ಎಲ್ಲಿಸ್ ಪೆರ್ರಿ, ಹೀದರ್ ನೈಟ್, ರಿಚಾ ಘೋಷ್ (ವಿಕೆಟ್ ಕೀಪರ್), ಶ್ರೇಯಾಂಕಾ ಪಾಟೀಲ್, ದಿಶಾ ಕಸತ್, ಮೇಗನ್ ಶುಟ್, ಆಶಾ ಶೋಬನಾ, ರೇಣುಕಾ ಠಾಕೂರ್ ಸಿಂಗ್, ಕನಿಕಾ ಅಹುಜಾ.
wpl 2023 up warriorz vs royal challengers bangaluru match rcb won by 5 wickets.
03-09-25 09:00 pm
HK News Desk
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
ಪ್ರೀಮಿಯಂ ಬ್ರಾಂಡ್ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ ;...
03-09-25 02:30 pm
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
04-09-25 08:47 pm
HK News Desk
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
04-09-25 07:57 pm
Mangalore Correspondent
Mangalore, Loudspeaker Ban: ರಾತ್ರಿ ವೇಳೆ ಧ್ವನಿ...
04-09-25 07:39 pm
KMC Attavar Performs Rare, Life-Saving Surger...
03-09-25 11:03 pm
Kmc Attavar, Mangalore News: 43 ವರ್ಷದ ಮಹಿಳೆಗೆ...
03-09-25 10:52 pm
Sullia, Sampaje Accident: ಸಂಪಾಜೆ ಬಳಿ ಭೀಕರ ಅಪಘ...
03-09-25 08:09 pm
04-09-25 01:10 pm
Udupi Correspondent
Udupi Crime, Baby Sale Racket: ಮಂಗಳೂರಿನ ಪ್ರತಿ...
04-09-25 12:25 pm
Bagalur Police, Drugs, Crime: ಬ್ಯುಸಿನೆಸ್ ವೀಸಾ...
03-09-25 05:40 pm
Gold Theft, Mangalore, Airport: ವಿಮಾನ ಪ್ರಯಾಣಿ...
02-09-25 07:09 pm
Valachil, Rape, College, Mangalore Crime: ಇನ್...
02-09-25 04:31 pm