ಬ್ರೇಕಿಂಗ್ ನ್ಯೂಸ್
20-03-23 12:13 pm Source: news18 ಕ್ರೀಡೆ
ಆಸ್ಟ್ರೇಲಿಯಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 10 ವಿಕೆಟ್‌ಗಳ ಹೀನಾಯ ಸೋಲು ಕಂಡಿದೆ. ಈ ಪಂದ್ಯದಲ್ಲಿ ತಂಡ 50 ರನ್ ಗಳಿಸುವಷ್ಟರಲ್ಲಿ 5 ವಿಕೆಟ್ ಕಳೆದುಕೊಂಡಿತ್ತು. ಎಡಗೈ ವೇಗದ ಬೌಲರ್ ಮಿಚೆಲ್ ಸ್ಟಾರ್ಕ್ ಸರಣಿಯ ಎರಡೂ ಪಂದ್ಯಗಳಲ್ಲಿ ಹೊಸ ಚೆಂಡಿನೊಂದಿಗೆ ಭಾರತೀಯ ಬ್ಯಾಟ್ಸ್‌ಮನ್‌ಗಳಿಗೆ ಸಾಕಷ್ಟು ತೊಂದರೆ ನೀಡಿದ್ದಾರೆ. ಎರಡನೇ ಏಕದಿನ ಪಂದ್ಯದಲ್ಲೂ ಒಟ್ಟು 5 ವಿಕೆಟ್ ಕಬಳಿಸಿದರು.ಈ ವರ್ಷ ಭಾರತ ತಂಡಕ್ಕೆ 2 ಐಸಿಸಿ ಟ್ರೋಫಿ ಗೆಲ್ಲುವ ಅವಕಾಶವಿದೆ. ಭಾರತ ತಂಡ ಈಗಾಗಲೇ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಫೈನಲ್ ತಲುಪಿದೆ. ಅದೇ ಸಮಯದಲ್ಲಿ, ODI ವಿಶ್ವಕಪ್ ಅಕ್ಟೋಬರ್-ನವೆಂbರ್ನಲ್ಲಿ ತವರಿನಲ್ಲಿ ನಡೆಯಲಿದೆ. ಆದರೆ ತಂಡದ ದೊಡ್ಡ ಕೊರತೆ ಈ ಬಾರಿಯೂ ದೊಡ್ಡ ಹೊಡೆತ ನೀಡಬಹುದು.
ಮುಂಬೈನಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಮಿಚೆಲ್ ಸ್ಟಾರ್ಕ್ ಆರಂಭದಲ್ಲಿಯೇ 3 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದರು. ಎಡಗೈ ವೇಗದ ಬೌಲರ್‌ಗಳು ಟೀಂ ಇಂಡಿಯಾವನ್ನು ಸದಾ ಕಾಡುತ್ತಲೇ ಇದ್ದಾರೆ. 2017ರ ಚಾಂಪಿಯನ್ಸ್ ಟ್ರೋಫಿ ಫೈನಲ್‌ನಿಂದ 2019ರ ODI ವಿಶ್ವಕಪ್‌ನ ಸೆಮಿಫೈನಲ್‌ವರೆಗೂ ಈ ಸಮಸ್ಯೆ ಕಾಡುತ್ತಲೇ ಇದೆ.2019ರ ಏಕದಿನ ವಿಶ್ವಕಪ್‌ನ ಸೆಮಿಫೈನಲ್‌ನಲ್ಲಿ ಭಾರತ ತಂಡ ನ್ಯೂಜಿಲೆಂಡ್ ವಿರುದ್ಧ ಸೋತಿತ್ತು. ಮೊದಲು ಆಡುವಾಗ ಕಿವೀಸ್ ತಂಡ 238 ರನ್ ಗಳಿಸಿತ್ತು. ಎಡಗೈ ವೇಗದ ಬೌಲರ್ ಟ್ರೆಂಟ್ ಬೌಲ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಮತ್ತು ರವೀಂದ್ರ ಜಡೇಜಾ ಅವರ ದೊಡ್ಡ ವಿಕೆಟ್ ಪಡೆದರು. ಜಡೇಜಾ ಗರಿಷ್ಠ 77 ರನ್ ಗಳಿಸಿದ್ದರು.
2021ರಲ್ಲಿ ಯುಎಇಯಲ್ಲಿ ನಡೆದ ಟಿ20 ವಿಶ್ವಕಪ್‌ನಲ್ಲೂ ಭಾರತ ತಂಡದ ಈ ದೌರ್ಬಲ್ಯ ಬಯಲಾಗಿತ್ತು. ಎಡಗೈ ವೇಗದ ಬೌಲರ್ ಶಾಹೀನ್ ಅಫ್ರಿದಿ ಆರಂಭದಲ್ಲಿ ರೋಹಿತ್ ಶರ್ಮಾ ಮತ್ತು ಕೆಎಲ್ ರಾಹುಲ್ ಅವರನ್ನು ಔಟ್ ಮಾಡಿದ್ದರು.ಈ ಕಾರಣದಿಂದಾಗಿ ವಿಶ್ವಕಪ್ ಇತಿಹಾಸದಲ್ಲಿ ಮೊದಲ ಬಾರಿಗೆ ಪಾಕಿಸ್ತಾನ ತಂಡ ಭಾರತವನ್ನು ಸೋಲಿಸುವಲ್ಲಿ ಯಶಸ್ವಿಯಾಗಿತ್ತು. ಹೀಗಾಗಿ ಪದೇ ಪದೇ ಭಾರತ ವೇಗದ ಬೌಲರ್ಗಳ ಎದುರು ಮಂಡಿಯೂರುತ್ತಿದ್ದಾರೆ.
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಜೂನ್ 7 ರಿಂದ ಇಂಗ್ಲೆಂಡ್‌ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯಲಿದೆ. ಇಂಗ್ಲಿಷ್ ಪರಿಸ್ಥಿತಿಗಳಲ್ಲಿ ಸ್ಟಾರ್ಕ್ ಇನ್ನಷ್ಟು ಮಾರಕವಾಗಲಿದ್ದಾರೆ. ಅದೇ ಸಮಯದಲ್ಲಿ, ಈ ವರ್ಷ ಭಾರತದಲ್ಲಿ ಏಕದಿನ ವಿಶ್ವಕಪ್ ಕೂಡ ನಡೆಯಲಿದೆ. ಹೌದು, ಈ ಬಾರಿ ವಿಶ್ವಕಪ್ ಭಾರತದಲ್ಲಿಯೇ ನಡೆಯುತ್ತಿರುವುದರಿಂದ ಟೀಂ ಇಂಡಿಯಾ ಮೇಲೆ ಸಾಕಷ್ಟು ನಿರೀಕ್ಷೆಗಳಿವೆ. ಆದರೆ ಭಾರತದ ಈ ಸಮಸ್ಯೆ ಬೇಗ ಸರಿಪಡಿಸಿಕೊಳ್ಳದಿದ್ದಲ್ಲಿ ಮತ್ತೊಮ್ಮೆ ಐಸಿಸಿ ಟ್ರೋಫಿಯ ಕನಸು ಕನಸಾಗಿಯೇ ಉಳಿಯಲಿದೆ.
due to this it is doubtful that india will win the icc odi world cup.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
18-09-25 02:42 pm
Mangalore Correspondent
ಜಾತಿ ಗಣತಿ ಮೊದಲೇ ಮನೆಗಳಿಗೆ ಸ್ಟಿಕ್ಕರ್ ಅಂಟಿಸಿ ಗೊಂ...
18-09-25 02:19 pm
Dharmasthala: ಬಂಗ್ಲೆಗುಡ್ಡೆ ಕಾಡಿನಲ್ಲಿ 9 ಕಡೆ ಮನ...
17-09-25 11:05 pm
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
18-09-25 11:44 am
HK News Desk
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm