ಬ್ರೇಕಿಂಗ್ ನ್ಯೂಸ್
10-04-23 01:41 pm Source: news18 ಕ್ರೀಡೆ
ಐಪಿಎಲ್ 16ನೇ ಸೀಸನ್ನ 15ನೇ ಪಂದ್ಯದಲ್ಲಿ ಇಂದು ಫಾಫ್ ಡುಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೆಎಲ್ ರಾಹುಲ್ ನಾಯಕತ್ವದ ಲಕ್ನೋ ಸೂಪರ್ ಜೇಂಟ್ಸ್ (RCB vs LSG) ಮುಖಾಮುಖಿ ಆಗಲಿದೆ. ಈ ಪಂದ್ಯವು ಇಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿದ್ದು, ಉಭಯ ತಂಡಗಳಿಗಿಗೆ ಇದು ಅತ್ಯಂತ ಮಹತ್ವದ್ದಾಗಿದೆ. ಅಲ್ಲದೇ ಇಂದು ತವರಿನಲ್ಲಿ ನಡೆಯುತ್ತಿರುವುದರಿಂದ ಬೆಂಗಳೂರು ತಂಡ ಗೆಲ್ಲುವ ಹಾಟ್ ಫೇವರೇಟ್ ತಂಡವಾಗಿದೆ.
ಈಗಾಗಲೇ ಕಳೆದ ಪಂದ್ಯ ಸೋತಿರುವ ಆರ್ಸಿಬಿ ಐಪಿಎಲ್ 2023ರ ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ. ಹೀಗಾಗಿ ಇಂದಿನ ಪಂದ್ಯ ಗೆದ್ದಲ್ಲಿ ಟಾಪ್ 5 ಒಳಗೆ ಬರುವ ಸಾಧ್ಯತೆ ಇದೆ. ಆರ್ಸಿಬಿ ಆಡಿರುವ 2 ಪಂದ್ಯದಲ್ಲಿ 1ರಲ್ಲಿ ಗೆದ್ದು ಇನ್ನೊಂದರಲ್ಲಿಸ ಸೋತಿದೆ. ಇನ್ನು, ಲಕ್ನೋ ತಂಡದ ವಿರುದ್ಧ ಆರ್ಸಿಬಿಯ ಇಬ್ಬರು ಆಟಗಾರರು ಕಣಕ್ಕಿಳಿಯುವುದು ಬಹುತೇಕ ಅನುಮಾನವಾಗಿದೆ. ಜೋಶ್ ಹ್ಯಾಝಲ್ವುಡ್ ಮತ್ತು ವನಿಂದು ಸಹರಂಗ ಕಣಕ್ಕಿಳಿಯುವುದು ಡೌಟ್ ಎನ್ನಲಾಗಿದೆ.
ಗಾಯದ ಕಾರಣ ಹ್ಯಾಝಲ್ವುಡ್ ಏ.14ರಂದು ತಂಡವನ್ನು ಸೇರಿಕೊಳ್ಳಲಿದ್ದಾರೆ. ಇತ್ತ ಕಿವೀಸ್ ಸರಣಿ ಮುಗಿಸಿ ಇಂದು ಹಸರಂಗ ಆರ್ಸಿಬಿ ಪಾಳಯ ಸೇರಲಿದ್ದಾರೆ. ಆದರೆ ಲಕ್ನೋ ವಿರುದ್ಧ ಕಣಕ್ಕಿಳಿಯುವುದು ಅನುಮಾನವಾಗಿದೆ.
ಇದರ ನಡುವೆ ಆರ್ಸಿಬಿ ತಂಡವು ಇಂದಾದರೂ ಕನ್ನಡಿಗನಿಗೆ ಅವಕಾಶ ಸಿಗುತ್ತದೆಯೇ ಎಂಬ ನಿರೀಕ್ಷೆಯಿದೆ. ಕರ್ನಾಟಕದ ವೇಗಿ ವೈಶಾಖ್ ವಿಜಯಕುಮಾರ್ ಇಂದು ಲಕ್ನೋ ವಿರುದ್ಧ ಕಣಕ್ಕೀಳಿಯುವ ಸಾಧ್ಯತೆ ಇದೆ. ರಜತ್ ಪಟೆದಾರ್ ಬದಲಿಗೆ ವೈಶಾಖ್ ಅವರನ್ನು ಆಯ್ಕೆ ಮಾಡಲಾಗಿದೆ.
RCB ಸಂಭಾವ್ಯ ಪ್ಲೇಯಿಂಗ್ 11: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ಸಿ), ಗ್ಲೆನ್ ಮ್ಯಾಕ್ಸ್‌ವೆಲ್, ಮಹಿಪಾಲ್ ಲೊಮ್ರೋರ್, ಮೈಕಲ್ ಬ್ರೇಸ್‌ವೆಲ್, ದಿನೇಶ್ ಕಾರ್ತಿಕ್ (ವಿಕೆ), ಶಹಬಾಜ್ ಅಹ್ಮದ್, ಡೇವಿಡ್ ವಿಲ್ಲಿ, ಕರ್ಣ್ ಶರ್ಮಾ, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್.
LSG ಸಂಭಾವ್ಯ ಪ್ಲೇಯಿಂಗ್ 11: ಕೆಎಲ್ ರಾಹುಲ್ (ಸಿ), ಕ್ವಿಂಟನ್ ಡಿ ಕಾಕ್, ಕೈಲ್ ಮೇಯರ್ಸ್, ದೀಪಕ್ ಹೂಡಾ, ನಿಕೋಲಸ್ ಪೂರನ್ (ವಿಕೆ), ಕೃನಾಲ್ ಪಾಂಡ್ಯ, ಅಮಿತ್ ಮಿಶ್ರಾ, ಮಾರ್ಕ್ ವುಡ್, ಯಶ್ ಠಾಕೂರ್, ಜಯದೇವ್ ಉನಾದ್ಕತ್, ರವಿ ಬಿಷ್ಣೋಯ್.
IPL 2023 rcb vs lsg royal challengers bengaluru playing 11.
03-09-25 09:00 pm
HK News Desk
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
ಪ್ರೀಮಿಯಂ ಬ್ರಾಂಡ್ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ ;...
03-09-25 02:30 pm
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
04-09-25 10:54 am
HK News Desk
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
ಅಮೆರಿಕನ್ ಕಂಪನಿಗಳನ್ನು ಬಹಿಷ್ಕರಿಸಲು ರಾಮದೇವ್ ಕರೆ...
01-09-25 01:06 pm
03-09-25 11:03 pm
Mangalore Correspondent
Kmc Attavar, Mangalore News: 43 ವರ್ಷದ ಮಹಿಳೆಗೆ...
03-09-25 10:52 pm
Sullia, Sampaje Accident: ಸಂಪಾಜೆ ಬಳಿ ಭೀಕರ ಅಪಘ...
03-09-25 08:09 pm
Sowjanya Case, SIT, Uday Jain: 13 ವರ್ಷಗಳ ಬಳಿಕ...
03-09-25 03:45 pm
College student Missing, Mangalore: ಮಂಗಳೂರಿನಲ...
03-09-25 11:53 am
04-09-25 01:10 pm
Udupi Correspondent
Udupi Crime, Baby Sale Racket: ಮಂಗಳೂರಿನ ಪ್ರತಿ...
04-09-25 12:25 pm
Bagalur Police, Drugs, Crime: ಬ್ಯುಸಿನೆಸ್ ವೀಸಾ...
03-09-25 05:40 pm
Gold Theft, Mangalore, Airport: ವಿಮಾನ ಪ್ರಯಾಣಿ...
02-09-25 07:09 pm
Valachil, Rape, College, Mangalore Crime: ಇನ್...
02-09-25 04:31 pm