ಬ್ರೇಕಿಂಗ್ ನ್ಯೂಸ್
21-04-23 12:57 pm Source: news18 ಕ್ರೀಡೆ
ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದು ಇಲ್ಲಿದೆ. ICC T20 ವಿಶ್ವಕಪ್ 2021 ರ ನಂತರ ತಂಡದ ನಾಯಕತ್ವವನ್ನು ತೊರೆದ ಈ ಸೂಪರ್‌ಸ್ಟಾರ್, ODI ಮತ್ತು ಟೆಸ್ಟ್ ನಾಯಕತ್ವದಿಂದಲೂ ಹಿಂದೆ ಸರಿದಿದ್ದರು. ಅವರು ಟೀಂ ಇಂಡಿಯಾದಲ್ಲಿ ಮಾತ್ರವಲ್ಲದೆ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲೂ ನಾಯಕತ್ವವನ್ನು ತೊರೆದಿದ್ದರು. ಇದೀಗ 1 ವರ್ಷದ ಅಂತರದ ನಂತರ ವಿರಾಟ್ ಮತ್ತೆ ಐಪಿಎಲ್‌ನಲ್ಲಿ ನಾಯಕತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ.
ಇಂಡಿಯನ್ ಪ್ರೀಮಿಯರ್ ಲೀಗ್‌ನ ಹೊಸ ಸೀಸನ್‌ನಲ್ಲಿ ವಿರಾಟ್ ಕೊಹ್ಲಿ ವಿಭಿನ್ನ ಶೈಲಿಯಲ್ಲಿ ಕಾಣಿಸಿಕೊಂಡಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಓಪನರ್ ಆಗಿ ಕಣಕ್ಕಿಳಿಯುತ್ತಿರುವ ಅವರು ಆರೆಂಜ್ ಕ್ಯಾಪ್ ರೇಸ್ನಲ್ಲಿ 2ನೇ ಸ್ಥಾನದಲ್ಲಿದ್ದಾರೆ. ಒಂದಲ್ಲ ಎರಡಲ್ಲ ಇದುವರೆಗೆ ಒಟ್ಟು 4 ಅರ್ಧಶತಕ ಗಳಿಸಿದ್ದಾರೆ. ವಿರಾಟ್, ಫಾಫ್ ಡು ಪ್ಲೆಸಿಸ್ ಜೊತೆಗೂಡಿ ಈ ಋತುವಿನಲ್ಲಿ ತಂಡಕ್ಕೆ ಬಿರುಸಿನ ಆರಂಭವನ್ನು ನೀಡುತ್ತಿದ್ದಾರೆ. ವಿರಾಟ್ ಕೊಹ್ಲಿ ಈ ಋತುವಿನಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಅರ್ಧಶತಕ ಸಿಡಿಸುವ ಮೂಲಕ ಆರಂಭಿಸಿದರು. ಇದುವರೆಗೆ 6 ಪಂದ್ಯಗಳಲ್ಲಿ ಬ್ಯಾಟಿಂಗ್ ಮಾಡುವಾಗ, ಈ ಬ್ಯಾಟ್ಸ್‌ಮನ್ ಒಟ್ಟು 4 ಅರ್ಧಶತಕಗಳನ್ನು ಗಳಿಸಿದ್ದಾರೆ.
ಇನ್ನು, ಪಂಜಾಭ್ ವಿರುದ್ಧ ನಾಯಕತ್ವದ ಜವಾಬ್ದಾರಿ ಪಡೆದ ನಂತರ ಮೊದಲ ಪಂದ್ಯದಲ್ಲಿಯೇ ಮತ್ತೊಂದು ಅರ್ಧಶತಕ ಗಳಿಸಿ ಕೊಹ್ಲಿ ಮಿಂಚಿದರು. ಇಂಡಿಯನ್ ಪ್ರೀಮಿಯರ್ ಲೀಗ್‌ನ ಕೊನೆಯ ಋತುವಿನಲ್ಲಿ, ತಂಡದ ನಾಯಕತ್ವದ ಜವಾಬ್ದಾರಿಯನ್ನು ಫಾಫ್ ಡು ಪ್ಲೆಸಿಸ್‌ಗೆ ನೀಡಲಾಗಿತ್ತು. ವಿರಾಟ್ ಕೊಹ್ಲಿ ಕಳೆದ ಋತುವಿನಲ್ಲಿ ಕೇವಲ ಆಟಗಾರನಾಗಿ ತಂಡದ ಭಾಗವಾಗಿದ್ದರು. ಈಗ ಹೊಸ ಋತುವಿನಲ್ಲಿ 5 ಪಂದ್ಯಗಳ ನಂತರ, ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಕಾಣಿಸಿಕೊಂಡಿದ್ದಾರೆ. ಪಂಜಾಬ್ ಕಿಂಗ್ಸ್ ವಿರುದ್ಧದ ತಂಡದಲ್ಲಿ ಫಾಫ್ ಡು ಪ್ಲೆಸಿಸ್ ಅವರನ್ನು ಬ್ಯಾಟ್ಸ್‌ಮನ್ ಆಗಿ ಕಾಣಿಸಿಕೊಂಡರು.
ಐಪಿಎಲ್‌ನ ಹೊಸ ಋತುವಿನಲ್ಲಿ 6 ಪಂದ್ಯಗಳನ್ನು ಆಡಿದ ನಂತರ ವಿರಾಟ್ ಕೊಹ್ಲಿ 55.80 ರ ಸರಾಸರಿಯಲ್ಲಿ 279 ರನ್ ಗಳಿಸಿದ್ದಾರೆ. ಈ ಸಮಯದಲ್ಲಿ, 82 ರನ್ ಅವರ ಗರಿಷ್ಠ ಸ್ಕೋರ್ ಆಗಿದೆ. 142 ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟಿಂಗ್ ಮಾಡಿದ ಕೊಹ್ಲಿ 24 ಬೌಂಡರಿ ಮತ್ತು 11 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಮತ್ತೆ ಐಪಿಎಲ್ ತಂಡದ ನಾಯಕತ್ವದ ಜವಾಬ್ದಾರಿಯನ್ನು ಹೊರುವ ಮೂಲಕ ವಿರಾಟ್ ಟೀಂ ಇಂಡಿಯಾಗೆ ಗುಡ್ ನ್ಯೂಸ್ ನೀಡಿದ್ದಾರೆ. ಐಸಿಸಿ ವಿಶ್ವಕಪ್‌ನಲ್ಲಿ ರೋಹಿತ್ ಶರ್ಮಾ ಜೊತೆಗೆ ಆಯ್ಕೆದಾರರು ಕೊಹ್ಲಿಯ ಹೆಸರನ್ನು ಪರಿಗಣಿಸಬಹುದು ಎಂಬ ಮಾತುಗಳಿ ಇದೀಗ ಕೇಳಿಬರುತ್ತಿದೆ.
virat kohli taking captaincy of rcb good news for team india ahead of the world cup 2023.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 04:24 pm
Mangalore Correspondent
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
Waqf Protest, Mangalore, Traffic: ಎಪ್ರಿಲ್ 18...
17-04-25 11:06 pm
19-04-25 11:01 am
Bangalore Correspondent
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm
Hyderabad Murder, Mother suicide: ತೆಂಗಿನಕಾಯಿ...
18-04-25 08:14 pm
Dead Baby Found, Garbage, Bangalore crime: ಅಪ...
18-04-25 03:41 pm