ಬ್ರೇಕಿಂಗ್ ನ್ಯೂಸ್
24-04-23 12:58 pm Source: news18 ಕ್ರೀಡೆ
ರೋಹಿತ್ ಶರ್ಮಾ ಐಪಿಎಲ್ 2023ರ 31ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 44 ರನ್‌ಗಳ ಇನ್ನಿಂಗ್ಸ್‌ಗಳನ್ನು ಆಡಿದರು. 6 ರನ್‌ಗಳಿಂದ ಅರ್ಧಶತಕ ವಂಚಿತರಾದರು. ರೋಹಿತ್ 27 ಎಸೆತಗಳಲ್ಲಿ 4 ಬೌಂಡರಿ ಹಾಗೂ 3 ಸಿಕ್ಸರ್ ಸಿಡಿಸಿದರು. ಈ ಪಂದ್ಯದಲ್ಲಿ ತಂಡವನ್ನು ಗೆಲ್ಲಿಸಲು ಸಾಧ್ಯವಾಗದಿದ್ದರೂ ಅವರ ಖಾತೆಯಲ್ಲಿ ಅಪರೂಪದ ದಾಖಲೆ ಸೇರ್ಪಡೆಯಾಯಿತು. ರೋಹಿತ್ ಶರ್ಮಾ ಐಪಿಎಲ್‌ನಲ್ಲಿ 250 ಸಿಕ್ಸರ್ ಬಾರಿಸಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದ ಮೂಲಕ ರೋಹಿತ್ ಈ ಸಾಧನೆ ಮಾಡಿದರು. ಈ ಮೂಲಕ ಯುನಿವರ್ಸಲ್ ಬಾಸ್ ಕ್ರಿಸ್ ಗೇಲ್ ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.
ವೆಸ್ಟ್ ಇಂಡೀಸ್‌ನ ಕ್ರಿಸ್ ಗೇಲ್ ಐಪಿಎಲ್‌ನಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಆಟಗಾರ ಎಂಬ ದಾಖಲೆ ಹೊಂದಿದ್ದಾರೆ. ಗೇಲ್ 142 ಪಂದ್ಯಗಳಲ್ಲಿ 357 ಸಿಕ್ಸರ್ ಬಾರಿಸಿದ್ದಾರೆ. ಗೇಲ್ ಐಪಿಎಲ್‌ನಲ್ಲಿ ಆಡದಿದ್ದರೂ, ಆ ದಾಖಲೆ ಇನ್ನೂ ಯಾರ ಹತ್ತಿರವೂ ಮುರಿಯಲು ಸಾಧ್ಯವಾಗಲಿಲ್ಲ. ಐಪಿಎಲ್‌ನಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟಿಗ ಎಬಿ ಡಿವಿಲಿಯರ್ಸ್ ಎರಡನೇ ಸ್ಥಾನದಲ್ಲಿದ್ದಾರೆ. ಡಿವಿಲಿಯರ್ಸ್ ಐಪಿಎಲ್‌ನಲ್ಲಿ ಒಟ್ಟು 251 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಐಪಿಎಲ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದವರಲ್ಲಿ ಗೇಲ್ ಮತ್ತು ಡಿವಿಲಿಯರ್ಸ್ ನಂತರ ರೋಹಿತ್ ಮೂರನೇ ಸ್ಥಾನದಲ್ಲಿದ್ದಾರೆ.
ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಮಹೇಂದ್ರ ಸಿಂಗ್ ಧೋನಿ ಈ ಪಟ್ಟಿಯಲ್ಲಿ 235 ಸಿಕ್ಸರ್‌ಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ 229 ಸಿಕ್ಸರ್‌ಗಳೊಂದಿಗೆ ಈ ಪಟ್ಟಿಯಲ್ಲಿದ್ದಾರೆ. ಸಿಕ್ಸರ್ ವಿಚಾರದಲ್ಲಿ ರೋಹಿತ್ ನಂತರದ ಸ್ಥಾನದಲ್ಲಿ ಧೋನಿ ಮತ್ತು ಕೊಹ್ಲಿ ಇದ್ದಾರೆ. ಈಗಾಗಲೇ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ರೋಹಿತ್ ಸಿಕ್ಸರ್ ವಿಚಾರದಲ್ಲಿ ಮುಂದಿದ್ದಾರೆ. ಪಂಜಾಬ್ ವಿರುದ್ಧದ ಪಂದ್ಯದಲ್ಲಿ ರೋಹಿತ್ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡ ಸೋಲು ಅನುಭವಿಸಬೇಕಾಯಿತು. ಮುಂಬೈ ತಂಡ ಕೊನೆಯ ಓವರ್‌ನಲ್ಲಿ 16 ರನ್ ಗಳಿಸಲು ಸಾಧ್ಯವಾಗಲಿಲ್ಲ. ಪಂಜಾಬ್ ಕಿಂಗ್ಸ್ ವೇಗಿ ಅರ್ಷದೀಪ್ ಸಿಂಗ್ ಕೊನೆಯ ಓವರ್‌ನಲ್ಲಿ ಸತತ ಎರಡು ಎಸೆತಗಳಲ್ಲಿ ಎರಡು ವಿಕೆಟ್ ಕಬಳಿಸಿ ಮುಂಬೈ ತಂಡಕ್ಕೆ ಆಘಾತ ನೀಡಿದರು.
ರೋಹಿತ್ ಶರ್ಮಾ ಮತ್ತು ಕ್ಯಾಮರೂನ್ ಗ್ರೀನ್ ಎರಡನೇ ವಿಕೆಟ್‌ಗೆ 76 ರನ್‌ಗಳ ಜೊತೆಯಾಟ ನೀಡಿದರು. ಆ ನಂತರ ಸೂರ್ಯಕುಮಾರ್ ಯಾದವ್ ಮತ್ತು ಕ್ಯಾಮರೂನ್ ಗ್ರೀನ್ ಮೂರನೇ ವಿಕೆಟ್‌ಗೆ 75 ರನ್ ಸೇರಿಸಿದರು.ಒಂದು ಹಂತದಲ್ಲಿ ಮುಂಬೈ ಗೆಲುವಿನ ಸನಿಹ ಬಂದರೂ ಕೊನೆಯ ಓವರ್‌ನಲ್ಲಿ ಅರ್ಷದೀಪ್ ಎಲ್ಲಾ ಲೆಕ್ಕಾಚಾಋವನ್ನು ತಲೆಕೆಳಗಾಗಿಸಿದರು.
rohit sharma becomes the first indian to complete 250 sixes in ipl history.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 04:24 pm
Mangalore Correspondent
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
Waqf Protest, Mangalore, Traffic: ಎಪ್ರಿಲ್ 18...
17-04-25 11:06 pm
19-04-25 11:01 am
Bangalore Correspondent
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm
Hyderabad Murder, Mother suicide: ತೆಂಗಿನಕಾಯಿ...
18-04-25 08:14 pm
Dead Baby Found, Garbage, Bangalore crime: ಅಪ...
18-04-25 03:41 pm