ಬ್ರೇಕಿಂಗ್ ನ್ಯೂಸ್
11-05-23 03:20 pm Source: news18 ಕ್ರೀಡೆ
2011ರ ವಿಶ್ವಕಪ್ ಗೆಲ್ಲುವಲ್ಲಿ ಯುವರಾಜ್ ಸಿಂಗ್ ಪ್ರಮುಖ ಪಾತ್ರ ವಹಿಸಿದ್ದರು. ಅವರಿಗೆ ಇದ್ದಕ್ಕಿದ್ದಂತೆ 'ಮೆಡಿಯಾಸ್ಟೈನಲ್ ಸೆಮಿನೋಮಾ' ಎಂಬ ಅಪರೂಪದ ಕ್ಯಾನ್ಸರ್ ಕಾಣಿಸಿಕೊಂಡಿತ್ತು. ಯುವರಾಜ್ ಸಿಂಗ್ ಕ್ಯಾನ್ಸರ್ ಅನ್ನು ಸೋಲಿಸಿದ ನಂತರ ಕ್ರಿಕೆಟ್‌ಗೆ ಮರಳಿದ್ದರು. ಇದೀಗ ಯುವರಾಜ್ ಸಿಂಗ್ ಅವರಂತೆಯೇ ಮತ್ತೊಬ್ಬ ಆಟಗಾರನಿಗೆ ಕ್ಯಾನ್ಸರ್ ಉಂಟಾಗಿದೆ. ಈ ಆಟಗಾರ ಇತ್ತೀಚೆಗೆ ತಮ್ಮ ಅನಾರೋಗ್ಯದ ಬಗ್ಗೆ ತಿಳಿಸಿದ್ದಾರೆ. ಸದ್ಯ ಈ ಆಟಗಾರನಿಗೆ ಕೇವಲ 31 ವರ್ಷ. ಇಂಗ್ಲೆಂಡ್‌ನ ವಿಕೆಟ್‌ಕೀಪರ್-ಬ್ಯಾಟರ್ ಸ್ಯಾಮ್ ಬಿಲ್ಲಿಂಗ್ಸ್ ಅವರು ಚರ್ಮದ ಕ್ಯಾನ್ಸರ್ ವಿರುದ್ಧ ಹೋರಾಡುತ್ತಿದ್ದಾರೆ.
ಈ ವಿಚಾರವನ್ನು ಸ್ವತಃ ಅವರೇ ಬಹಿರಂಗಪಡಿಸಿದ್ದಾರೆ. ದೀರ್ಘಾವಧಿಯ ಸೂರ್ಯನ ಬೆಳಕಿಗೆ ಒಡ್ಡಿಕೊಳ್ಳುವುದರಿಂದ ಉಂಟಾಗುವ ಅಪಾಯಗಳ ಬಗ್ಗೆ ತನ್ನ ತಂಡದ ಸಹ ಆಟಗಾರರಲ್ಲಿ ಜಾಗೃತಿ ಮೂಡಿಸಲು ಮುಂದಾಗಿದ್ದಾರೆ. ಕಳೆದ ವರ್ಷ 2 ಬಾರಿ ಎದೆಯ ಭಾಗದ ಚರ್ಮದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾಗಿ ಹೇಳಿಕೊಂಡಿದ್ದಾರೆ. ಈ ವೇಳೆ ಬಿಸಿಲಿನಲ್ಲಿ ತುಂಬಾ ಸಮಯ ಕಳೆಯುವುದು ಅಪಾಯಕಾರಿ. ನನ್ನ ಸ್ಥಿತಿ ನೋಡಿಯಾದರೂ ಇದನ್ನು ಅರ್ಥ ಮಾಡಿಕೊಳ್ಳಿ ಎಂದು ಅವರು ಸಹ ಆಟಗಾರರಲ್ಲಿ ವಿನಂತಿಸಿದ್ದಾರೆ.
ಇನ್ನು, ನಾನು ಇದನ್ನು ಮೊದಲಿಗೆ ಚರ್ಮದ ಮೇಲಿನ ಕಲೆಗಳು ಎಂದುಕೊಂಡಿದ್ದೆ. ಅದು 0.6 ಮಿಲಿಮೀಟರ್‌ನಷ್ಟು ಆಳವಾಗಿತ್ತು. ಅದು 0.7 ಮಿಲಿಮೀಟರ್ ಆಳಕ್ಕೆ ಇಳಿದಾಗ ಇದರ ಬಗ್ಗೆ ನಾನು ವೈದ್ಯರ ಬಳಿ ಹೋದಾಗ ಚರ್ಮದ ಕ್ಯಾನ್ಸರ್ ಇದೆ ಎಂದು ತಿಳಿಯಿತು ಎಂದಿದ್ದಾರೆ. ಬಿಲ್ಲಿಂಗ್ಸ್ ಇಂಗ್ಲೆಂಡ್ ಪರ 3 ಟೆಸ್ಟ್, 28 ODI ಮತ್ತು 37 T20 ಪಂದ್ಯಗಳನ್ನು ಆಡಿದ್ದಾರೆ. ಪ್ರಸ್ತುತ ಅವರು ಕೌಂಟಿ ಕ್ರಿಕೆಟ್ ಆಡುತ್ತಿದ್ದಾರೆ. ಬಿಸಿಲಿನಲ್ಲಿ ಹೆಚ್ಚು ಸಮಯ ಕಳೆಯುವ ಅಪಾಯದ ಬಗ್ಗೆ ಅವರು ಸಹ ಆಟಗಾರರು ಮತ್ತು ಅಭಿಮಾನಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ನಾನು ವೃತ್ತಿಪರ ಪಂದ್ಯಗಳ ಬಗ್ಗೆ ಮಾತನಾಡುತ್ತಿಲ್ಲ. ಕ್ಲಬ್ ಕ್ರಿಕೆಟಿಗರು ಮತ್ತು ಪ್ರೇಕ್ಷಕರು ಕೂಡ ಇದರಿಂದ ಎಚ್ಚರವಾಗಿರಬೇಕು. 18 ಡಿಗ್ರಿಗಳಲ್ಲಿಯೂ ಸಹ ನೀವು ಬಿಸಿಲಿನಿಂದ ತೊಂದರೆಗೆ ಒಳಗಾಗಬಹುದು ಎಂದು ಹೇಳಿದ್ದಾರೆ. ಸದ್ಯ ಈ ವಿಚಾರ ತಿಳಿದ ಅವರ ಅಭಿಮಾನಿಗಳು ಬೇಗ ಗುಣಮುಖರಾಗಿ ಬನ್ನಿ ಎಂದು ಪ್ರಾರ್ಥಿಸುತ್ತಿದ್ದಾರೆ. ಅಲ್ಲದೇ ಅನೇಕ ಕ್ರಿಕೆಟಿಗರು ಅವರ ಆರೋಗ್ಯದ ಬಗ್ಗೆ ವಿಚಾರಿಸಿದ್ದಾಗಿ ತಿಳಿದುಬಂದಿದೆ.
england star cricketer sam billings cancer affected like to yuvraj singh.
07-12-25 10:21 pm
HK News Desk
Dog Attack: ಪಾದಚಾರಿಗಳ ಮೇಲೆ ಹುಚ್ಚುನಾಯಿ ದಾಳಿ ;...
07-12-25 10:17 pm
Dog Attack, Davangere: ಮಹಿಳೆ ಮೇಲೆ ರಾಟ್ ವೀಲರ್...
06-12-25 12:33 pm
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
07-12-25 10:45 pm
Udupi Correspondent
Inayat Ali, Mangalore Notice: ನ್ಯಾಶನಲ್ ಹೆರಾಲ್...
07-12-25 03:02 pm
ತಡರಾತ್ರಿ ಮನೆಗೆ ನುಗ್ಗಿ ಕಡಬ ಹೆಡ್ ಕಾನ್ಸ್ ಟೇಬಲ್ ದ...
06-12-25 06:12 pm
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm