ಬ್ರೇಕಿಂಗ್ ನ್ಯೂಸ್
12-05-23 02:32 pm Source: news18 ಕ್ರೀಡೆ
ಐಪಿಎಲ್ 2023 ರಲ್ಲಿ ಮೇ 11 (ಗುರುವಾರ) ವರೆಗೆ, ಲೀಗ್ ಹಂತದ 70 ಪಂದ್ಯಗಳಲ್ಲಿ 56 ಪೂರ್ಣಗೊಂಡಿವೆ. ಆದರೆ, ಪ್ಲೇಆಫ್‌ಗಳ ಚಿತ್ರಣ ಇನ್ನೂ ಸಂಪೂರ್ಣವಾಗಿ ಸ್ಪಷ್ಟವಾಗಿಲ್ಲ. ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ 16 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದ್ದರೆ, ಚೆನ್ನೈ ಸೂಪರ್ ಕಿಂಗ್ಸ್ 15 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ಇದೀಗ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 9 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದ ಬಳಿಕ ರಾಜಸ್ಥಾನ್ ರಾಯಲ್ಸ್ ಕೂಡ ಟಾಪ್-3ಗೆ ಪ್ರವೇಶಿಸಿದೆ. ಈ ಗೆಲುವಿನಿಂದಾಗಿ ರಾಯಲ್ಸ್ ತಂಡದ ನೆಟ್ ರನ್ರೇಟ್ ಕೂಡ ಸಾಕಷ್ಟು ಸುಧಾರಿಸಿದೆ.
ಹೀಗಾಗಿ ರಾಜಸ್ಥಾನ್ ತಂಡ ಐದನೇ ಸ್ಥಾನದಿಂದ ನೇರವಾಗಿ ಮೂರನೇ ಸ್ಥಾನಕ್ಕೆ ಏರಿದೆ. ಇದರಿಂದಾಗಿ ಮುಂಬೈ ಇಂಡಿಯನ್ಸ್ 12 ಅಂಕದಿಂದ ನಾಲ್ಕನೇ ಹಾಗೂ ಲಕ್ನೋ ಸೂಪರ್ ಜೈಂಟ್ಸ್ 11 ಅಂಕದಿಂದ ಐದನೇ ಸ್ಥಾನ ಕುಸಿದಿದೆ. ಇನ್ನು, ರಾಜಸ್ಥಾನ 12 ಪಂದ್ಯಗಳಲ್ಲಿ 6 ಗೆಲುವಿನೊಂದಿಗೆ 12 ಅಂಕ ಪಡೆದಿದೆ. ಆರ್ಆರ್ ನಿವ್ವಳ ರನ್ರೇಟ್ (0.633) ಆಗಿದೆ, ಇದು ಎರಡನೇ ಸ್ಥಾನದಲ್ಲಿರುವ ಚೆನ್ನೈ ಸೂಪರ್ ಕಿಂಗ್ಸ್ (0.493) ಗಿಂತ ಉತ್ತಮವಾಗಿದೆ.
ಜೊತೆಗೆ, ಮುಂಬೈ ಇಂಡಿಯನ್ಸ್ ಕೂಡ 11 ಪಂದ್ಯಗಳಿಂದ ರಾಜಸ್ಥಾನಕ್ಕೆ ಸಮನಾದ 12 ಅಂಕಗಳನ್ನು ಹೊಂದಿದೆ. ಆದರೆ ನೆಟ್ ರನ್ ರೇಟ್ (-0.255)ದಿಂದಾಗಿ ಮುಂಬೈ ನಾಲ್ಕನೇ ಸ್ಥಾನದಲ್ಲಿದೆ. ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಸೋತ ನಂತರ, ಕೋಲ್ಕತ್ತಾ ನೈಟ್ ರೈಡರ್ಸ್ 6ನೇ ಸ್ಥಾನದಿಂದ 7ನೇ ಸ್ಥಾನಕ್ಕೆ ಕುಸಿದಿದೆ. ಕೆಕೆಆರ್ ಸೋಲಿನ ಲಾಭ ಪಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು 1 ಸ್ಥಾನ ಮೇಲೇರಿದೆ.
ಸದ್ಯ ಆರ್‌ಸಿಬಿ 6ನೇ ಸ್ಥಾನದಲ್ಲಿದೆ. ಬೆಂಗಳೂರು, ಕೋಲ್ಕತ್ತಾ ಮತ್ತು ಪಂಜಾಬ್ 3 ತಂಡಗಳು ತಲಾ 10 ಅಂಕಗಳನ್ನು ಹೊಂದಿವೆ. ಇದರ ನಡುವೆ ಆರ್‌ಸಿಬಿ ತನ್ನ ಮುಂದಿನ 3 ಪಂದ್ಯಗಳನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿದ್ದು, ಅದೂ ಸಹ ಉತ್ತಮ ರನ್ರೇಟ್ ಮೂಲಕ ಗೆಲ್ಲಬೇಕಿದೆ.
ipl 2023 updated points table rr entered top 3 and kkr loss rcb benefitted.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 04:24 pm
Mangalore Correspondent
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
Waqf Protest, Mangalore, Traffic: ಎಪ್ರಿಲ್ 18...
17-04-25 11:06 pm
19-04-25 11:01 am
Bangalore Correspondent
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm
Hyderabad Murder, Mother suicide: ತೆಂಗಿನಕಾಯಿ...
18-04-25 08:14 pm
Dead Baby Found, Garbage, Bangalore crime: ಅಪ...
18-04-25 03:41 pm