ಬ್ರೇಕಿಂಗ್ ನ್ಯೂಸ್
22-05-23 03:07 pm Source: news18 ಕ್ರೀಡೆ
ಐಪಿಎಲ್ 2023ರಲ್ಲಿ ಆರ್ಸಿಬಿ ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಭರ್ಜರಿ ಫಾರ್ಮ್ನಲ್ಲಿದ್ದಾರೆ. ಹೈದರಾಬಾದ್ ವಿರುದ್ಧ ಭರ್ಜರಿ ಶತಕ ಸಿಡಿಸಿರುವ ಕೊಹ್ಲಿ ಅತಿ ಹೆಚ್ಚು ಬಾರಿ 500+ ರನ್ ಗಳಿಸಿದ ಆಟಗಾರ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಕಳೆದ ವರ್ಷ ಏಷ್ಯಾಕಪ್‌ಗೂ ಮುನ್ನ ವಿರಾಟ್ ಕೊಹ್ಲಿ ವಿರಾಮ ತೆಗೆದುಕೊಂಡಿದ್ದರು. ಇದೀಗ ಅವರು ಈ ಬಗ್ಗೆ ದೊಡ್ಡ ವಿಷಯವನ್ನು ಬಹಿರಂಗಪಡಿಸಿದ್ದಾರೆ. ಜಿಯೋ ಸಿನಿಮಾದಲ್ಲಿ ಭಾರತದ ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ಅವರೊಂದಿಗೆ ಮಾತನಾಡಿದ ಅವರು, ನಾನು ವಿರಾಮದ ನಂತರ ಹಿಂತಿರುಗುತ್ತಿದ್ದಾಗ ಇದು ನನ್ನ ಸ್ಪರ್ಧಾತ್ಮಕ ಕ್ರಿಕೆಟ್‌ನ ಕೊನೆಯ ತಿಂಗಳು ಎಂದು ನಾನು ಭಾವಿಸಿದ್ದೆ.
ಅಂದರೆ ನಿವೃತ್ತಿಯ ಬಗ್ಗೆ ಯೋಚಿಸುತ್ತಿದ್ದೆ ಎಂದು ಶಾಕಿಂಗ್ ಹೇಳಿಕೆ ನೀಡಿದ್ದಾರೆ. ದೇವರು ನನಗೆ ಕೊಟ್ಟದ್ದರಲ್ಲಿ ನನಗೆ ಸಂತೋಷವಾಗಿದೆ. ನಾನು ಹತಾಶನಾಗಿರಲಿಲ್ಲ ಎಂದಿದ್ದರು. ವಿರಾಟ್ ಕೊಹ್ಲಿ ಏಷ್ಯಾಕಪ್‌ನಲ್ಲಿ ಅಫ್ಘಾನಿಸ್ತಾನ ವಿರುದ್ಧ ಟಿ20 ಅಂತಾರಾಷ್ಟ್ರೀಯ ವೃತ್ತಿಜೀವನದ ಮೊದಲ ಶತಕ ದಾಖಲಿಸಿದರು. 3 ವರ್ಷಗಳ ನಂತರ, ಅವರು ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಶತಕ ಗಳಿಸುವಲ್ಲಿ ಯಶಸ್ವಿಯಾದರು. ಅಭಿಮಾನಿಗಳ ನಿರೀಕ್ಷೆಗೆ ತಕ್ಕಂತೆ ನಾನೇ ಪ್ರಯತ್ನಿಸುತ್ತಿದ್ದೇನೆ. ಇದಕ್ಕಾಗಿ ನನ್ನ ಶ್ರಮ ನಿರಂತರವಾಗಿ ನಡೆಯುತ್ತಿತ್ತು. ಕೊನೆಗೆ ನನಗೂ ಇದರಲ್ಲಿ ಯಶಸ್ಸು ಸಿಕ್ಕಿತು. ಇದರ ಹಿಂದೆ ಕೋಚ್ ರಾಹುಲ್ ದ್ರಾವಿಡ್ ಅವರ ಪಾತ್ರವೂ ಪ್ರಮುಖವಾಗಿತ್ತು.
ಕೆಟ್ಟ ಹಂತದಿಂದ ಚೇತರಿಸಿಕೊಳ್ಳಲು ನಾನು ವಿರಾಮ ತೆಗೆದುಕೊಂಡಿದ್ದೇನೆ ಎಂದು ವಿರಾಟ್ ಕೊಹ್ಲಿ ಹೇಳಿದ್ದರು. ಕೊರೊನದ ಸಮಯ ಯಾರಿಗಾದರೂ ತುಂಬಾ ಕಷ್ಟಕರವಾಗಿತ್ತು. ನಾನು ಕೂಡ ಈ ಕಾರಣಕ್ಕೆ ಬಿಡುವು ಮಾಡಿಕೊಂಡು ನನಗೆ ಬೇಕಾದುದನ್ನು ಮರಳಿ ಪಡೆದೆ. ಕೊರೊನಾದಿಂದಾಗಿ ನಾವು 10 ತಿಂಗಳ ಕಾಲ ಯಾವುದೇ ಕ್ರಿಕೆಟ್ ಆಡಲು ಸಾಧ್ಯವಾಗಲಿಲ್ಲ ಎಂದು ಅವರು ಹೇಳಿದರು. 2020ರಲ್ಲಿ ನಾನು ಕೇವಲ 6 ಪಂದ್ಯಗಳನ್ನು ಆಡಿದ್ದೇನೆ. ಇದಾದ ನಂತರವೂ ನನ್ನ ಶತಕದ ಬಗ್ಗೆ ಮಾತ್ರ ಮಾತನಾಡಲಾಗುತ್ತಿತ್ತು. ಆ ಸಮಯದಲ್ಲಿ ಪ್ರತಿ ಪಂದ್ಯದ ನಂತರ ನನ್ನ ಕಳಪೆ ಪ್ರದರ್ಶನದ ಬಗ್ಗೆ ನನ್ನನ್ನು ಕೇಳಲಾಗುತ್ತಿತ್ತು ಎಂದು ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ.
ಜನರು ನನ್ನಿಂದ ಏನನ್ನು ನಿರೀಕ್ಷಿಸುತ್ತಿದ್ದಾರೆ ಎಂಬುದು ನನಗೆ ಅರ್ಥವಾಯಿತು. ಈ ಕಾರಣಕ್ಕಾಗಿ, ಈ ಪ್ರಶ್ನೆಗಳನ್ನು ಮತ್ತೆ ಮತ್ತೆ ಕೇಳಲಾಯಿತು. ಆದರೆ ನಾನು ಅದರ ಬಗ್ಗೆ ಹೆಚ್ಚು ಚಿಂತಿಸಲಿಲ್ಲ ಮತ್ತು ಇದೀಗ ನಾನು ತಂಡಕ್ಕೆ ಕೊಡುಗೆ ನೀಡುವತ್ತ ಹೆಚ್ಚು ಗಮನಹಿರಿಸುತ್ತಿದ್ದೇನೆ ಎಂದು ಹೇಳಿದ್ದಾರೆ. ವಿರಾಟ್ ಕೊಹ್ಲಿ ಟಿ20ಯಲ್ಲಿ 7 ಶತಕ ಸಿಡಿಸಿದ್ದಾರೆ. ಭಾರತದಿಂದ ಟಿ20ಯಲ್ಲಿ ಅತಿ ಹೆಚ್ಚು ಶತಕ ಸಿಡಿಸಿದ ಆಟಗಾರ ಕೆಎಲ್ ರಾಹುಲ್ ಮತ್ತು ರೋಹಿತ್ ಶರ್ಮಾ 6-6 ಶತಕ ಗಳಿಸಿದ್ದಾರೆ. ಅಲ್ಲದೇ ಕೊಹ್ಲಿ ಐಪಿಎಲ್ನಲ್ಲಿ 6 ಶತಕ ಸಿಡಿಸಿದ್ದಾರೆ.
virat kohli zevealed shocking information that he thought about retiring from cricket.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 01:43 pm
HK News Desk
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm