ಬ್ರೇಕಿಂಗ್ ನ್ಯೂಸ್
24-05-23 03:31 pm Source: news18 ಕ್ರೀಡೆ
ಈ ವರ್ಷದ ಅಕ್ಟೋಬರ್ ಮತ್ತು ನವೆಂಬರ್ ತಿಂಗಳಲ್ಲಿ ಭಾರತದಲ್ಲಿ ಏಕದಿನ ವಿಶ್ವಕಪ್ (ICC World Cup 2023) ನಡೆಯಲಿದೆ ಎಂದು ವರದಿಯಾಗಿದೆ. ಮೊದಲ ಬಾರಿಗೆ ಭಾರತ ಏಕಾಂಗಿಯಾಗಿ ಏಕದಿನ ವಿಶ್ವಕಪ್‌ಗೆ ಆತಿಥ್ಯ ವಹಿಸಲಿದೆ. ಈಗಾಗಲೇ 8 ತಂಡಗಳು ಏಕದಿನ ವಿಶ್ವಕಪ್‌ಗೆ ಅರ್ಹತೆ ಪಡೆದಿವೆ. ಭಾರತ, ಆಸ್ಟ್ರೇಲಿಯಾ, ಇಂಗ್ಲೆಂಡ್, ನ್ಯೂಜಿಲೆಂಡ್, ಪಾಕಿಸ್ತಾನ, ದಕ್ಷಿಣ ಆಫ್ರಿಕಾ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನ ವಿಶ್ವಕಪ್‌ಗೆ ಅರ್ಹತೆ ಪಡೆದಿವೆ.
ಆದರೆ ಇನ್ನೆರಡು ತಂಡಗಳು ಬೇಕಾಗಿದ್ದು, ಈ ವಿಶ್ವಕಪ್ ಕ್ವಾಲಿಫೈಯರ್ ಟೂರ್ನಿ ಜಿಂಬಾಬ್ವೆಯಲ್ಲಿ ನಡೆಯಲಿದೆ. ಕೆಲ ಸಮಯದ ಹಿಂದೆಯೇ ಐಸಿಸಿ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಶ್ರೀಲಂಕಾ ಮತ್ತು ವೆಸ್ಟ್ ಇಂಡೀಸ್‌ಗೆ ಈ ಪಂದ್ಯಾವಳಿ ಅತ್ಯಂತ ಮಹತ್ವದ್ದಾಗಿದೆ. ಇದರಲ್ಲಿ ಒಟ್ಟು 10 ತಂಡಗಳು ಸ್ಪರ್ಧಿಸಲಿವೆ. ಗ್ರೂಪ್ 'ಎ' ವೆಸ್ಟ್ ಇಂಡೀಸ್, ಜಿಂಬಾಬ್ವೆ, ನೆದರ್ಲ್ಯಾಂಡ್ಸ್, ನೇಪಾಳ, ಯುನೈಟೆಡ್ ಸ್ಟೇಟ್ಸ್ ಅನ್ನು ಒಳಗೊಂಡಿದೆ.'ಬಿ' ಗುಂಪಿನಲ್ಲಿ ಶ್ರೀಲಂಕಾ, ಐರ್ಲೆಂಡ್, ಸ್ಕಾಟ್ಲೆಂಡ್, ಓಮನ್ ಮತ್ತು ಯುಎಇ ಸೇರಿವೆ.
ಈ ಪಂದ್ಯಾವಳಿಯು ಜೂನ್ 18 ರಿಂದ ಜುಲೈ 9ರ ವರೆಗೆ ನಡೆಯಲಿದೆ. ಮೊದಲು ಗುಂಪು ಹಂತದಲ್ಲಿ ನಡೆಯಲಿದೆ. ಪ್ರತಿ ತಂಡವು ತಮ್ಮ ಗುಂಪಿನ ಇತರ ನಾಲ್ಕು ತಂಡಗಳ ವಿರುದ್ಧ ಒಂದು ಪಂದ್ಯವನ್ನು ಆಡುತ್ತದೆ. ಎರಡೂ ಗುಂಪಿನಲ್ಲಿ ಅಗ್ರ 3 ತಂಡಗಳು ಸೂಪರ್ ಸಿಕ್ಸ್‌ಗೆ ಅರ್ಹತೆ ಪಡೆಯುತ್ತವೆ. ಸೂಪರ್ 6 ರಲ್ಲಿ ಪ್ರತಿ ತಂಡವು 4 ತಂಡಗಳ ವಿರುದ್ಧ ಆಡಲಿದೆ. ಆ ಬಳಿಕ ಅಗ್ರ 2 ಸ್ಥಾನ ಪಡೆಯುವ ತಂಡಗಳು ಫೈನಲ್‌ಗೆ ಅರ್ಹತೆ ಪಡೆಯಲಿವೆ. ಇದಲ್ಲದೆ, ಅವರು ಭಾರತದಲ್ಲಿ ನಡೆಯಲಿರುವ 2023ರ ODI ವಿಶ್ವಕಪ್‌ಗೆ ಅರ್ಹತೆ ಪಡೆಯುತ್ತಾರೆ.
ಭಾರತದಲ್ಲಿ ನಡೆಯಲಿರುವ 2023ರ ODI ವಿಶ್ವಕಪ್‌ನಲ್ಲಿ ಒಟ್ಟು 10 ತಂಡಗಳು ಭಾಗವಹಿಸಲಿವೆ. ಅಕ್ಟೋಬರ್ 5ರಂದು ಟೂರ್ನಿ ಆರಂಭವಾಗುವ ಸಾಧ್ಯತೆ ಇದೆ ಎಂಬ ವರದಿಗಳಿವೆ. ಆದರೆ ಶೀಘ್ರದಲ್ಲೇ ವೇಳಾಪಟ್ಟಿಯ ಬಗ್ಗೆ ಐಸಿಸಿ ಅಧಿಕೃತ ಘೋಷಣೆ ಮಾಡುವ ಸಾಧ್ಯತೆಯಿದೆ. ಇನ್ನು, ಈ ಬಾರಿ ವಿಶ್ವಕಪ್ ಭಾರತದಲ್ಲಿ ನಡೆಯುವುದರಿಂದ ಪಾಕಿಸ್ತಾನ್ ಮತ್ತು ಭಾರತ ನಡುವಿನ ಪಂದ್ಯಕ್ಕಾಗಿ ಕೋಟ್ಯಾಂತರ ಕ್ರಿಕೆಟ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.
icc announces schedule for world cup 2023 qualifiers.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 11:01 am
Bangalore Correspondent
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm
Hyderabad Murder, Mother suicide: ತೆಂಗಿನಕಾಯಿ...
18-04-25 08:14 pm
Dead Baby Found, Garbage, Bangalore crime: ಅಪ...
18-04-25 03:41 pm